ಶಬರಿಮಲೆ ಮಹಿಳೆಯರಿಗೆ ಪ್ರವೇಶ ನಿಷೇಧ ವಿವಾದ: ಬುಧವಾರ ವಿಚಾರಣೆ
ನವದೆಹಲಿ, ಜುಲೈ 17: ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯ ಪ್ರವೇಶದ ಮೇಲೆ ಇರುವ ನಿರ್ಬಂಧವನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಬುಧವಾರ ಮುಂದುವರಿಸಲಿದೆ.
ಮುಟ್ಟಾದ ಮಹಿಳೆಯರಿಗೆ ದೇವಸ್ಥಾನದ ಪ್ರವೇಶದ ಮೇಲೆ ಹೇರಿರುವ ನಿಷೇಧವನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಕಳೆದ ವರ್ಷದ ಅಕ್ಟೋಬರ್ 13ರಂದು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿತ್ತು.
ವರ್ಷವೂ ಲಕ್ಷಾಂತರ ಭಕ್ತರು ಭೇಟಿ ನೀಡುವ ಈ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ನಿಡದಂತೆ ದೇವಸ್ಥಾನದ ಆಡಳಿತ ಮಂಡಳಿ ವಿಧಿಸಿರುವ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಡೆಸುತ್ತಿದೆ.

ದೇವಸ್ಥಾನದ ಆಡಳಿತ ಮಂಡಳಿಯ ನಿಯಮಾವಳಿ ಪ್ರಕಾರ 10ರಿಂದ 50 ವರ್ಷ ವಯಸ್ಸಿನ ಮಹಿಳೆಯರು ದೇವಸ್ಥಾನದ ಆವರಣಕ್ಕೆ ಭೇಟಿ ನೀಡಲು ಅವಕಾಶವಿಲ್ಲ.
2016ರ ಜನವರಿಯಲ್ಲಿ ನಿಷೇಧವನ್ನು ಪ್ರಶ್ನಿಸಿದ್ದ ಕೋರ್ಟ್, ಸಂವಿಧಾನಸ ಅಡಿಯಲ್ಲಿ ಈ ರೀತಿ ನಡೆದುಕೊಳ್ಳುವಂತಿಲ್ಲ ಎಂದಿತ್ತು.
ದೇವಸ್ಥಾನದ ಆವರಣದೊಳಗೆ ಮಹಿಳೆಯರಿಗೆ ಪ್ರವೇಶ ನೀಡಲು ಸಿದ್ಧ ಇರುವುದಾಗಿ ಕೇರಳ ಸರ್ಕಾರ ನವೆಂಬರ್‌ನಲ್ಲಿ ತಿಳಿಸಿತ್ತು.












Click it and Unblock the Notifications