ಅತ್ಯಾಚಾರ ಸಂತ್ರಸ್ತರಿಗೆ ಏಕರೂಪ ಪರಿಹಾರ ನೀಡಲು ಸುಪ್ರಿಂ ಸೂಚನೆ

ನವದೆಹಲಿ, ಸೆಪ್ಟೆಂಬರ್ 06: ಸಾಮೂಹಿಕ ಅತ್ಯಾಚಾರ ಮತ್ತು ಅತ್ಯಾಚಾರ ಸಂತ್ರಸ್ತರಿಗೆ ದೇಶದಾದ್ಯಂತ ಏಕರೂಪ ಪರಿಹಾರ ವಿತರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತರಿಗೆ ಐದು ಲಕ್ಷ ಹಾಗೂ ಅತ್ಯಾಚಾರ ಸಂತ್ರಸ್ತೆಗೆ ನಾಲ್ಕು ಲಕ್ಷ ಪರಿಹಾರವನ್ನು ನೀಡುವಂತೆ ಸುಪ್ರಿಂಕೋರ್ಟ್‌ ಎಲ್ಲ ರಾಜ್ಯಗಳಿಗೆ ಹಾಗೂ ಕೇಂದ್ರ ಸರ್ಕಾರಕ್ಕೆ ಆದೇಶ ಹೊರಡಿಸಿದೆ.

ಅಕ್ಟೋಬರ್‌ ಎರಡನೇ ತಾರೀಖಿನಿಂದಲೇ ಈ ಆದೇಶ ಜಾರಿಗೊಳಿಸುವಂತೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ. ಒಂದೊಂದು ರಾಜ್ಯದಲ್ಲಿ ಒಂದೊಂದು ರೀತಿಯಲ್ಲಿ ಪರಿಹಾರ ಧನ ವಿತರಿಸುತ್ತಿದ್ದದ್ದರಿಂದ ಕೋರ್ಟ್‌ ಈ ರೀತಿಯ ಆದೇಶ ನೀಡಿದೆ.

Supreme court instruct to give uniform compensation to Rape Victims in all states

ಒರಿಸ್ಸಾದಲ್ಲಿ ಸಾಮೂಹಕ ಅತ್ಯಾಚಾರ ಸಂತ್ರಸ್ತರಿಗೆ ಕೇವಲ 10000 ಪರಿಹಾರ ನೀಡಲಾಗುತ್ತದೆ. ಗೋವಾದಲ್ಲಿ 10 ಲಕ್ಷ ಪರಿಹಾರ ನೀಡಲಾಗುತ್ತದೆ. ಕೆಲವು ರಾಜ್ಯಗಳಲ್ಲಿ ಪರಿಹಾರವನ್ನೇ ನೀಡಿಲ್ಲ. ಈ ಅಸಮಾನತೆ ಸರಿಯಲ್ಲ ಹಾಗಾಗಿ ದೇಶದೆಲ್ಲೆಡೆ ಏಕರೂಪ ಪರಿಹಾರ ವಿತರಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಮದನ್ ಬಿ.ಲೋಕೂರ್, ಎಸ್.ಅಬ್ದುಲ್ ನಜೀರ್ ಮತ್ತು ದೀಪಕ್ ಗುಪ್ತ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಈ ಆದೇಶ ಹೊರಡಿಸಿದೆ. ಒಂದೊಂದು ರೀತಿಯಲ್ಲಿ ಪರಿಹಾರ ಒದಗಿಸಿದರೆ ಅದು ನ್ಯಾಯ ಒದಗಿಸಿದಂತಾಗುವುದಿಲ್ಲ. ಹಾಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜೊತೆ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಚರ್ಚೆ ನಡೆಸಬೇಕು ಎಂದು ತ್ರಿಸದಸ್ಯ ಪೀಠ ಅಭಿಪ್ರಾಯಪಟ್ಟಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+