BREAKING: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್
ನವದೆಹಲಿ, ಮೇ 10: ದಹಲಿ ಅಬಕಾರಿ ನೀತಿ ಹಗರಣ ಸಂಬಂಧಿಸದಿಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ.
ಪ್ರಕರಣ ಸಂಬಂಧ ಜಾಮೀನು ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಮುಂದಿನ ಜೂನ್ 01 ರವರೆಗೆ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಿದ ಇಂದು ಶುಕ್ರವಾರ ಆದೇಶಿಸಿದೆ.

ಈ ಮೂಲಕ ಅರವಿಂದ್ ಕೇಜ್ರಿವಾಲರ 50 ದಿನಗಳ ಸೆರೆವಾಸ ಅಂತ್ಯ ಕಂಡಿದೆ. ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ಕಾರ್ಯಗಳಲ್ಲಿ ಅವರ ಭಾಗಿಯಾಗಲು ಸುಪ್ರೀಂ ಕೋರ್ಟ್ ಅವಕಾಶ ಕೊಟ್ಟಿದೆ.
ಪ್ರಕರಣ ರದ್ದು ಕೋರಿ ಅರ್ಜಿ
ದಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿದ್ದರು. ಈ ಕ್ರಮ ಸರಿಯಲ್ಲ ಎಂದಿರುವ ಸಿಎಂ ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಏ. 9ರಂದು ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು, ವಿಚಾರಣೆ ನಡೆಸಿದ ನ್ಯಾಯಪೀಠ ಸೂಕ್ತ ಸಾಕ್ಷ್ಯಾಧಾರಗಳಿವೆ ಎಂದು ಹೇಳಿ ಅರ್ಜಿ ತಳ್ಳಿಹಾಕಿತ್ತು. ನಂತರ ಇದರ ವಿರುದ್ಧ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದರು. ಜಾಮೀನು ನೀಡುವಂತೆ ಮನವಿ ಮಾಡಿದರು.
ಅದರಂತೆ ಇಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ವಾದ ವಿವಾದ ಆಲಿಸಿದರು. ಸದ್ಯ ರಾಜ್ಯದಲ್ಲಿ ಚುನಾವಣೆ ನಡೆಯುತ್ತಿವೆ. ಚುನಾವಣಾ ಪ್ರಚಾರದಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಭಾಗಿ ಆಗಬೇಕು ಎಂಬುದು ಹಕ್ಕಲ್ಲ. ಹಗರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಇಡಿ ಅಧಿಕಾರಿಗಳ ಬಳಿ ಸಾಕ್ಷ್ಯಾಧಾರಗಳಿವೆ. ಹೀಗಾಗಿ ಜಾಮೀನು ನೀಡದಂತೆ ವಾದ ಮಾಡಲಾಯಿತು.
ಈ ವಾದ ಪುರಸ್ಕರಿಸದ ಸುಪ್ರೀಂ ಕೋರ್ಟ್ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಮುಂದಿನ ಜೂನ್ ವರೆಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಇದರಿಂದ ಲೋಕಸಭಾ ಚುನಾವಣೆಗಳಲ್ಲಿ ಸಿಎಂ ಪಕ್ಷದ ಪರ ಕ್ಯಾಂಪೇನ್‌ನಲ್ಲಿ ಪಾಲ್ಗೊಳ್ಳಬಹುದಾಗಿದೆ.
ಸದ್ಯ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋಟ್ ಷರತ್ತುಬದ್ಧ ಜಾಮೀನು ನೀಡಿದೆ. ಇದು ಚುನಾವಣಾ ಪ್ರಚಾರಕ್ಕೆ ಮಾತ್ರ ಸಿಮೀತವಾಗಿ ನೀಡಲಾಗಿದೆ ಎಂದು ಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ. ಮುಂದಿ 20ದಿನ ಅವರು ದೆಹಲಿಯಲ್ಲಿ ಎಎಪಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.












Click it and Unblock the Notifications