ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೌರಿ ಹತ್ಯೆ ಪ್ರಕರಣ: ಕವಿತಾ ಲಂಕೇಶ್‌ ಅರ್ಜಿ ಪರಿಗಣಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡಿದ ಸುಪ್ರಿಂ

|
Google Oneindia Kannada News

ನವದೆಹಲಿ, ಜೂ.29: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ (ಕೋಕಾ) ಆರೋಪ ಕೈಬಿಟ್ಟಿರುವುದನ್ನು ಪ್ರಶ್ನಿಸಿ ಗೌರಿ ಲಂಕೇಶ್‌ ಸಹೋದರಿ, ಚಲನಚಿತ್ರ ನಿರ್ದೇಶಕಿ ಕವಿತಾ ಲಂಕೇಶ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಪರಿಗಣಿಸಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಇತರರಿಗೆ ನೋಟಿಸ್ ನೀಡಿದೆ.

ಗೌರಿ ಲಂಕೇಶ್ ಕೊಲೆ ಪ್ರಕರಣದ ಆರೋಪಿಯಾಗಿರುವ ಮೋಹನ್ ನಾಯಕ್ ಮೇಲೆ ಹಾಕಲಾಗಿದ್ದ ಕೋಕಾ ಕಾಯ್ದೆಯನ್ನು ಏಪ್ರಿಲ್ 22ರಂದು ಹೈಕೋರ್ಟ್ ರದ್ದು ಮಾಡಿತ್ತು. ಮೋಹನ್ ನಾಯಕ್ ವಿರುದ್ಧ 2000ರ ಕೋಕಾ ಕಾಯಿದೆಯ ಸೆಕ್ಷನ್ 3 (1) (ಐ), 3 (2), 3 (3) ಮತ್ತು 3 (4) ರ ಅಡಿಯಲ್ಲಿ ಅಪರಾಧಗಳನ್ನು ಕೈಬಿಡಲಾಗಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಮತ್ತೊಂದು ಮಹತ್ವದ ಬಂಧನಗೌರಿ ಲಂಕೇಶ್ ಹತ್ಯೆ ಪ್ರಕರಣ: ಮತ್ತೊಂದು ಮಹತ್ವದ ಬಂಧನ

ಈ ಹಿನ್ನೆಲೆ ಮೋಹನ್ ಹಾಗೂ ಇತರೆ ಆರೋಪಿಗಳಿಗೆ ಜಾಮೀನು ಸುಲಭವಾಗಿ ಲಭಿಸುವ ಸಾಧ್ಯತೆಯಿದೆ. ಈ ಹಿನ್ನೆಲೆ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಗೌರಿ ಲಂಕೇಶ್ ಸಹೋದರಿ, ನಿರ್ದೇಶಕಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

Supreme Court Issues Notice On Gauri Lankesh Murder Accuseds Bail Plea

ಗೌರಿ ಲಂಕೇಶ್‌ ಸಹೋದರಿ ಕವಿತಾ ಲಂಕೇಶ್‌ ಸಲ್ಲಿಸಿರುವ ಅರ್ಜಿಯಲ್ಲಿ, ಆರೋಪಿ ಮೋಹನ್‌ ನಾಯಕ್‌ ವಿರುದ್ಧ ಕೋಕಾ ಕಾಯ್ದೆಯಡಿ ಆರೋಪಗಳನ್ನು ಹೈಕೋರ್ಟ್ ರದ್ದುಪಡಿಸಿದ ಬಳಿಕ ಆತ ಕಳೆದ ಕೆಲ ತಿಂಗಳು ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾನೆ. ಈಗ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆ ಸಂಪೂರ್ಣವಾಗಿದೆ, ಆದೇಶ ನೀಡುವುದು ಬಾಕಿ ಉಳಿದಿದೆ ಎಂದು ಉಲ್ಲೇಖ ಮಾಡಲಾಗಿದೆ.

ಈ ಅರ್ಜಿ ಹಿನ್ನೆಲೆ ನ್ಯಾಯಮೂರ್ತಿಗಳಾದ ಎ ಎಂ ಖಾನ್ವಿಲ್ಕರ್, ದಿನೇಶ್ ಮಹೇಶ್ವರಿ ಹಾಗೂ ಅನಿರುದ್ಧ ಬೋಸ್‌ರನ್ನು ಒಳಗೊಂಡ ತ್ರಿಸದಸ್ಯ ನ್ಯಾಯಪೀಠ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದ್ದು, ಮುಂದಿನ ವಿಚಾರಣೆಯನ್ನು ಜುಲೈ 15ಕ್ಕೆ ನಿಗದಿಪಡಿಸಿದೆ.

ಇದು, ಗೌರಿ ಲಂಕೇಶ್ ಹತ್ಯೆಗೆ ಹಂತಕರು ಬಳಸಿದ 'ಕೋಡ್ ವರ್ಡ್'ಇದು, ಗೌರಿ ಲಂಕೇಶ್ ಹತ್ಯೆಗೆ ಹಂತಕರು ಬಳಸಿದ 'ಕೋಡ್ ವರ್ಡ್'

ಕವಿತಾ ಲಂಕೇಶ್‌ ಸಲ್ಲಿಸಿರುವ ಈ ಮನವಿಯಲ್ಲಿ, "ನಾಯಕ್ ಅಪರಾಧಕ್ಕೆ ಮೊದಲು ಮತ್ತು ನಂತರ ಕೊಲೆಗಾರರಿಗೆ ಆಶ್ರಯ ನೀಡುವ ಸಹಾಯ ಮಾಡಿದ್ದಾನೆ. ಕೃತ್ಯ ಎಸಗಿದ ಬಳಿಕ ಹಲವಾರು ಪಿತೂರಿ, ಸಂಚು ರೂಪಿಸುವಲ್ಲಿ ತೊಡಗಿಕೊಂಡಿದ್ದ ಎಂಬುದು ತನಿಖೆ ದೃಢಪಡಿಸಿದೆ," ಎಂದು ಉಲ್ಲೇಖಿಸಲಾಗಿದೆ.

"ಆತ ನಿರಂತರವಾಗಿ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾನೆ ಎಂಬುವುದು ತನಿಖೆಯಲ್ಲಿ ಖಚಿತವಾಗಿದೆ. ಆತ ಆರಂಭದಿಂದಲೂ ಒಂದನೇ ಆರೋಪಿ ಅಮೋಲ್‌ ಕಾಳೆ ಜೊತೆ ಹಾಗೂ ಎಂಟನೇ ಆರೋಪಿ ಶಸ್ತ್ರಾಸ್ತ್ರ ತರಬೇತುದಾರ ರಾಜೇಶ್‌ ಡಿ ಬಂಗೇರ ಜೊತೆ ನಿಕಟ ಸಂಪರ್ಕದಲ್ಲಿದ್ದನು. ಆತ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ತನಿಖಾ ಸಂಸ್ಥೆ ಸಾಕಷ್ಟು ಸಾಕ್ಷ್ಯಗಳನ್ನು ಹೊಂದಿದೆ," ಎಂದು ತಿಳಿಸಲಾಗಿದೆ.

Supreme Court Issues Notice On Gauri Lankesh Murder Accuseds Bail Plea

ಇನ್ನು ಗೌರಿ ಹತ್ಯೆ ಮಾತ್ರವಲ್ಲದೆ ಅನೇಕ ಸಂಘಟಿತ ಅಪರಾಧಗಳನ್ನು ಎಸಗಿದ ಅಮೋಲ್‌ ಕಾಳೆ ನೇತೃತ್ವದ ಗುಂಪಿನೊಂದಿಗೆ ಮೋಹನ್‌ ನಾಯಕ್‌ ನಂಟು ಹೊಂದಿದ್ದಾನೆ ಎಂದು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ.

ಈ ಗುಂಪು ಮಹಾರಾಷ್ಟ್ರದ ಪುಣೆಯಲ್ಲಿ 2013 ರಲ್ಲಿ ವಿಚಾರವಾದಿ ಡಾ.ನರೇಂದ್ರ ದಾಬೋಲ್ಕರ್ ಹತ್ಯೆ, ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ 2015 ರಲ್ಲಿ ವಿಚಾರವಾದಿ ಗೋವಿಂದ ಪನ್ಸಾರೆ ಹತ್ಯೆ, 2015ರ ಆಗಸ್ಟ್‌ 30ರಂದು ಗುಂಡಿಕ್ಕಿ ವಿಚಾರವಾದಿ ಡಾ.ಎಂ.ಎಂ ಕಲಬುರ್ಗಿ ಹತ್ಯೆ ಮಾಡಿದ್ದು, 2018ರಲ್ಲಿ ಮೈಸೂರಿನ ವಿಚಾರವಾದಿ ಪ್ರೊ. ಕೆ ಎಸ್‌ ಭಾಗವನ್ ಹತ್ಯೆಗೆ ಸಂಚು ರೂಪಿಸಿದೆ ಎಂದು ತನಿಖೆಯಲ್ಲಿ ಬಹಿರಂಗವಾಗಿದೆ.

2013 ರ ಆಗಸ್ಟ್ 20 ರಂದು ಪುಣೆಯಲ್ಲಿ ಎಂದಿನಂತೆ ಬೆಳಗಿನ ವಾಕಿಂಗ್‌ ಮಾಡುತ್ತಿದ್ದ ಡಾ.ನರೇಂದ್ರ ದಾಬೋಲ್ಕರ್‌ರನ್ನು ಇಬ್ಬರು ದುಷ್ಕರ್ಮಿಗಳು ಗುಂಡಿಟ್ಟು ಕೊಂದಿದ್ದಾರೆ.

16 ಫೆಬ್ರವರಿ 2015 ರಂದು, ಬೆಳಿಗ್ಗೆ 9: 25 ಕ್ಕೆ, ಗೋವಿಂದ ಪನ್ಸಾರೆ ಹಾಗೂ ಪತ್ನಿ ಉಮಾ ವಾಕಿಂಗ್‌ಗೆ ಹೋಗಿ ಹಿಂದಿರುಗುತ್ತಿದ್ದ ಸಂದರ್ಭ ಮೋಟಾರು ಸೈಕಲ್‌ನಲ್ಲಿದ್ದ ಇಬ್ಬರು ಐದು ಬಾರಿ ಗುಂಡು ಹಾರಿಸಿದ್ದರು. ಗಾಯಗೊಂಡಿದ್ದ ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದು ಗೋವಿಂದ ಪನ್ಸಾರೆ ಫೆಬ್ರವರಿ 20 ರಂದು ಮರಣ ಹೊಂದಿದರು. ಇವೆರಡು ಹತ್ಯೆಗಳು ಒಂದನ್ನೊಂದು ಹೋಲುತ್ತದೆ.

30ನೇ ಆಗಸ್ಟ್, 2015ರಂದು, ಮುಸುಕುಧಾರಿ ದುಷ್ಕರ್ಮಿಗಳ ಗುಂಡಿನ ದಾಳಿಗೆ ಎಂ.ಎಂ.ಕಲಬುರ್ಗಿ ಬಲಿಯಾಗಿದ್ದಾರೆ. ಧಾರವಾಡದಲ್ಲಿನ ಕಲಬುರ್ಗಿ ಮನೆಗೆ ನುಗ್ಗಿದ ಅಪರಿಚಿತ ದಾಳಿಕೋರರು ಎರಡು ಸುತ್ತು ಗುಂಡು ಹಾರಿಸಿದ್ದರು. ಕಲಬುರ್ಗಿ ಹಣೆ ಮತ್ತು ಎದೆಗೆ ಗುಂಡು ತಗುಲಿದ್ದವು. ಬಳಿಕ ಆಸ್ಪತ್ರೆಯಲ್ಲಿ ಕಲಬುರ್ಗಿ ಸಾವನ್ನಪ್ಪಿದರು.

(ಒನ್‌ಇಂಡಿಯಾ ಸುದ್ದಿ)

English summary
The Supreme Court on Tuesday issued a notice to the Karnataka government and others connected with the Gauri Lankesh murder case. The Supreme Court order was in response to a plea by filmmaker Kavita Lankesh, who had challenged the High Court verdict cancelling KCOCA charges against Mohan Nayak.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X