• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಇಂದಿನಿಂದ ಸುಪ್ರೀಂಕೋರ್ಟ್‌ಗೆ ಹೊಸ ಮುಖ್ಯ ನ್ಯಾಯಮೂರ್ತಿ

|
Google Oneindia Kannada News

ನವದೆಹಲಿ, ನವೆಂಬರ್ 18: ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ರಂಜನ್ ಗೊಗೊಯ್ ಅವರು ಭಾನುವಾರ (ನ.18) ನಿವೃತ್ತರಾಗಿದ್ದು, ಅವರ ಸ್ಥಾನಕ್ಕೆ ನ್ಯಾ. ಶರದ್ ಅರವಿಂದ್ ಬೊಬ್ಡೆ ಸೋಮವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಸುಪ್ರೀಂಕೋರ್ಟ್‌ನ 47ನೇ ಮುಖ್ಯ ನ್ಯಾಯಮೂರ್ತಿಯಾಗಿ ಎಸ್‌.ಎ. ಬೊಬ್ಡೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 13 ತಿಂಗಳ ಕಾಲ ಮುಖ್ಯ ನ್ಯಾಯಮೂರ್ತಿಯಾಗಿದ್ದ ರಂಜನ್ ಗೊಗೊಯ್ ಭಾನುವಾರ ನಿವೃತ್ತರಾದರು.

ಮುಖ್ಯನ್ಯಾಯಮೂರ್ತಿಯಾಗಲಿರುವ ಶರದ್ ಅರವಿಂದ್ ಬೊಬ್ಡೆ ವ್ಯಕ್ತಿಚಿತ್ರಮುಖ್ಯನ್ಯಾಯಮೂರ್ತಿಯಾಗಲಿರುವ ಶರದ್ ಅರವಿಂದ್ ಬೊಬ್ಡೆ ವ್ಯಕ್ತಿಚಿತ್ರ

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಮುಖ್ಯ ನ್ಯಾಯಮೂರ್ತಿ ಬೊಬ್ಡೆ ಅವರಿಗೆ ಸೋಮವಾರ ಬೆಳಿಗ್ಗೆ 9.30ರ ವೇಳೆಗೆ ಮುಖ್ಯ ನ್ಯಾಯಮೂರ್ತಿಗಳ ಕಚೇರಿಯಲ್ಲಿ ಪ್ರಮಾಣವಚನ ಬೋಧಿಸಲಿದ್ದಾರೆ.

ಮಹಾರಾಷ್ಟ್ರದ ನಾಗಪುರದಲ್ಲಿ 1956ರಲ್ಲಿ ಜನಿಸಿದ ಬೊಬ್ಡೆ, ನಾಗಪುರ ವಿಶ್ವವಿದ್ಯಾಲಯದಲ್ಲಿ ಬಿಎ ಮತ್ತು ಎಲ್‌ಎಲ್‌ಬಿ ಪದವಿ ಪಡೆದರು. 1978ರಲ್ಲಿ ಮಹಾರಾಷ್ಟ್ರ ಬಾರ್ ಕೌನ್ಸಿಲ್‌ನಲ್ಲಿ ಅವರು ಪ್ರವೇಶ ಪಡೆದರು. ಬಾಂಬೆ ಹೈಕೋರ್ಟ್‌ನ ನಾಗಪುರ ಪೀಠದಲ್ಲಿ ಕಾನೂನು ಅಭ್ಯಾಸ ಮಾಡಿದ ಅವರು, 21 ವರ್ಷಕ್ಕೂ ಅಧಿಕ ಸಮಯ ಸುಪ್ರೀಂಕೋರ್ಟ್‌ನಲ್ಲಿ ವಕೀಲಿ ಕೆಲಸ ಮಾಡಿದ್ದಾರೆ. 1998ರಲ್ಲಿ ಅವರು ಹಿರಿಯ ವಕೀಲರಾಗಿ ಪದನ್ನೋತಿ ಪಡೆದರು.

ಭಾರತದ ಮುಂದಿನ ಸಿಜೆಐ ಅರವಿಂದ್ ಬೊಬ್ಡೆ, ನ್ಯಾ. ಗೊಗಾಯ್ ಶಿಫಾರಸುಭಾರತದ ಮುಂದಿನ ಸಿಜೆಐ ಅರವಿಂದ್ ಬೊಬ್ಡೆ, ನ್ಯಾ. ಗೊಗಾಯ್ ಶಿಫಾರಸು

2000ದ ಮಾರ್ಚ್ 29ರಂದು ಅವರು ಬಾಂಬೆ ಹೈಕೋರ್ಟ್‌ನ ನ್ಯಾಯಪೀಠಕ್ಕೆ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕವಾದರು. 2012ರ ಅಕ್ಟೋಬರ್ 6ರಂದು ಮಧ್ಯಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾದರು. 2013ರ ಏಪ್ರಿಲ್ 12ರಂದು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದರು. ಅವರು 2021ರ ಏಪ್ರಿಲ್ 23ರಂದು ಮುಖ್ಯ ನ್ಯಾಯಮೂರ್ತಿಯಾಗಿ ನಿವೃತ್ತರಾಗಲಿದ್ದಾರೆ.

English summary
Justice Sharad Arvind Bobde will sworn in as the 47th Chief Justice Of India on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X