ಉದಯನಿಧಿ ಸ್ಟಾಲಿನ್, ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಚೆನ್ನೈ, ಸೆಪ್ಟೆಂಬರ್ 22: ಸನಾತನ ಧರ್ಮ ಕುರಿತು ಹೇಳಿಕೆ ನೀಡಿ ದೇಶದಲ್ಲಿ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್‌ಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು ತಮ್ಮ ಹೇಳಿಕೆಗಳಲ್ಲಿ ಜನರಲ್ಲಿ ವಿಭಜನೆ ಮತ್ತು ತಾರತಮ್ಯವನ್ನು ಉತ್ತೇಜಿಸಲು ಸನಾತನ ಧರ್ಮವನ್ನು ದೂಷಿಸಿದ್ದಾರೆ ಮತ್ತು ಅದರ ನಿರ್ಮೂಲನೆಗೆ ಕರೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಸನಾತನ ಧರ್ಮದ ಕುರಿತು ಈ ಹಿಂದೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಮಾಜಿ ಕೇಂದ್ರ ಸಚಿವ ಮತ್ತು ಡಿಎಂಕೆ ಮಾಜಿ ಸಂಸದ ಎ ರಾಜಾ ನೀಡಿದ್ದ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ದಾಖಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.
Supreme Court issues notice to the Tamil Nadu government and DMK leader Udhayanidhi Stalin for his remarks on 'Sanatan Dharma'
— ANI (@ANI) September 22, 2023
(file pic) pic.twitter.com/8HeBATdwwx
ಸನಾತನ ಧರ್ಮದ ಹೇಳಿಕೆ ವಿಚಾರವಾಗಿ ಚೆನ್ನೈನ ವಕೀಲರೊಬ್ಬರು ಉದಯನಿಧಿ ಮತ್ತು ರಾಜಾ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿ ಅರ್ಜಿ ಸಲ್ಲಿಸಿದ್ದರು. ಇದೇ ಅರ್ಜಿ ವಿಚಾರವಾಗಿ ಸುಪ್ರೀಂ ಕೋರ್ಟ್ ತಮಿಳುನಾಡಿನ ಡಿಎಂಕೆ ಸರ್ಕಾರ ಮತ್ತು ಉದಯನಿಧಿ ಸ್ಟಾಲಿನ್ ಗೆ ನೋಟಿಸ್ ಜಾರಿ ಮಾಡಿದೆ.
ಈ ಹಿಂದೆ ಪ್ರಗತಿಪರ ಲೇಖಕರು, ಕಲಾವಿದರ ಸಂಘದಿಂದ ಆಯೋಜಿಸಿದ್ದ ಸನಾತನ ನಿರ್ಮೂಲನಾ ಸಮಾವೇಶದಲ್ಲಿ ಪಾಲ್ಗೊಂಡು, ''ಕೆಲವು ವಿಷಯಗಳನ್ನು ನಾವು ವಿರೋಧಿಸುವ ಬದಲು ಅವುಗಳನ್ನು ನಿರ್ಮೂಲನೆ ಮಾಡುವುದೇ ಸರಿ. ನಾವು ಕೊರೊನಾ, ಡೆಂಗೆ, ಮಲೇರಿಯಾದಂಥ ಸೋಂಕುಗಳನ್ನು ವಿರೋಧಿಸಬಾರದು. ಆರೋಗ್ಯ ಜಾಗೃತಿಯ ಮೂಲಕ ಅವುಗಳನ್ನು ನಿರ್ಮೂಲನೆ ಮಾಡಬೇಕು. ಹಾಗೆಯೇ ಸನಾತನ ಧರ್ಮವನ್ನೂ ನಾವು ವಿರೋಧಿಸುವ ಬದಲು ಸಾಮಾಜಿಕ ಜಾಗೃತಿಯ ಮೂಲಕ ನಿರ್ಮೂಲನೆ ಮಾಡಬೇಕು ಎಂದು ಕರೆ ನೀಡಿದ್ದರು.
ಸನಾತನ ಧರ್ಮದ ಕುರಿತು ಮತ್ತೊಂದು ಹೇಳಿಕೆ ನೀಡಿದ್ದ ಉದಯನಿಧಿ ಸ್ಟಾಲಿನ್ ಸನಾತನವನ್ನು ತೊಡೆದುಹಾಕಿದರೆ ಅಸ್ಪೃಶ್ಯತೆಯೂ ನಾಶವಾಗುತ್ತದೆ. ಅಸ್ಪೃಶ್ಯತೆ ಹೋಗಲಾಡಿಸಲು ಸಂತಾನ ಧರ್ಮವನ್ನು ತೊಡೆದುಹಾಕಬೇಕು ಎಂದು ನಾವು ಹೇಳುತ್ತೇವೆ, ಸನಾತನ ನಾಶವಾದರೆ ಅಸ್ಪೃಶ್ಯತೆಯೂ ನಾಶವಾಗುತ್ತದೆ ಎಂದು ನಾನು ನಂಬುತ್ತೇನೆ ಎಂದು ಹೇಳಿದ್ದರು.
ಕಳೆದ ವಾರ ತಂಜಾವೂರಿನಲ್ಲಿ ತಮಿಳು ಸೇವಾ ಸಂಗಮ್ ನಡೆಸಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಾಜ್ಯಪಾಲ ರವಿ ಅವರು ತಮಿಳುನಾಡಿನ ವಿವಿಧ ಭಾಗಗಳಲ್ಲಿ ಇಂದಿಗೂ ಚಾಲ್ತಿಯಲ್ಲಿರುವ ವ್ಯಕ್ತಿಯ ಜಾತಿ ಆಧಾರಿತ ಸಾಮಾಜಿಕ ತಾರತಮ್ಯದ ಬಗ್ಗೆ ವಿವರವಾಗಿ ಮಾತನಾಡಿದ್ದರು. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರರೂ ಆಗಿರುವ ಉದಯನಿಧಿ ಅವರು ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, "ಸನಾತನ ಧರ್ಮವನ್ನು ಬೇರುಸಹಿತ ಕಿತ್ತುಹಾಕುವುದು ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿಹಿಡಿಯುತ್ತದೆ" ಎಂದು ಹೇಳಿದ್ದರು.
ಈ ಹಿಂದೆ ಅವರು, ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಅಥವಾ ಕೊರೊನಾವೈರಸ್‌ನಂತಹ ಕಾಯಿಲೆಗಳಿಗೆ ಹೋಲಿಸಿದ್ದರು. ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ. ಅವನ್ನು ಮಾತ್ರ ನಿರ್ಮೂಲನೆ ಮಾಡಬೇಕು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕರೋನಾವನ್ನು ವಿರೋಧಿಸಲು ಸಾಧ್ಯವಿಲ್ಲ, ಬದಲಾಗಿ ನಾವು ಅವುಗಳನ್ನು ನಿರ್ಮೂಲನೆ ಮಾಡಬೇಕು. ನಾವು ಸನಾತನವನ್ನು ಹೇಗೆ ನಿರ್ಮೂಲನೆ ಮಾಡುತ್ತೇವೆ. ಸನಾತನವನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆ ಮಾಡಬೇಕು ಎಂದು ಅವರು ಹೇಳಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications