• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೋವಿಡ್‌: 'ಅನಾಥ ಮಕ್ಕಳ ಅಕ್ರಮ ದತ್ತು ವಿರುದ್ದ ಕ್ರಮಕೈಗೊಳ್ಳಿ'- ಸುಪ್ರೀಂ ಆದೇಶ

|
Google Oneindia Kannada News

ನವದೆಹಲಿ, ಜೂ.08: ಕೋವಿಡ್‌ ಸೋಂಕಿನಿಂದ ತಂದೆ ತಾಯಿಯನ್ನು ಕಳೆದುಕೊಂಡು ಅನಾಥರಾದ ಮಕ್ಕಳನ್ನು ಅಕ್ರಮವಾಗಿ ದತ್ತು ತೆಗೆದುಕೊಳ್ಳುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕಾನೂನುಬಾಹಿರ ದತ್ತು ಪಡೆಯುವ ಎನ್‌ಜಿಒಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.

"ಜೆಜೆ ಕಾಯ್ದೆ, 2015 ರ ನಿಬಂಧನೆಗಳಿಗೆ ವಿರುದ್ಧವಾಗಿ ಯಾವುದೇ ಪೀಡಿತ ಮಕ್ಕಳನ್ನು ದತ್ತು ತೆಗೆದುಕೊಳ್ಳಲು ಅನುಮತಿಸಬಾರದು. ಅನಾಥ ಮಕ್ಕಳನ್ನು ದತ್ತು ಪಡೆಯಲು ಜಾಹೀರಾತು ಮೂಲಕ ಆಹ್ವಾನ ನೀಡುವುದು ಕಾನೂನಿಗೆ ವಿರುದ್ಧವಾಗಿದೆ. ಈ ಕಾನೂನುಬಾಹಿರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವ ಜವಾಬ್ದಾರಿಯುತ ಏಜೆನ್ಸಿಗಳು / ವ್ಯಕ್ತಿಗಳ ವಿರುದ್ಧ ರಾಜ್ಯ ಸರ್ಕಾರಗಳು / ಕೇಂದ್ರಾಡಳಿತ ಪ್ರದೇಶಗಳು ಕಠಿಣ ಕ್ರಮ ತೆಗೆದುಕೊಳ್ಳಬೇಕು" ಎಂದು ನ್ಯಾಯಾಲಯ ಆದೇಶಿಸಿದೆ.

ಕೋವಿಡ್‌ ಲಸಿಕೆ ನೀತಿಯಲ್ಲಿ ಕೇಂದ್ರದ ಯು-ಟರ್ನ್ ಹೇಗೆ ಸ್ಪಷ್ಟ ಮಾರ್ಗಸೂಚಿ ಸೃಷ್ಟಿಸಿದೆ? - ಇಲ್ಲಿದೆ ವಿವರಕೋವಿಡ್‌ ಲಸಿಕೆ ನೀತಿಯಲ್ಲಿ ಕೇಂದ್ರದ ಯು-ಟರ್ನ್ ಹೇಗೆ ಸ್ಪಷ್ಟ ಮಾರ್ಗಸೂಚಿ ಸೃಷ್ಟಿಸಿದೆ? - ಇಲ್ಲಿದೆ ವಿವರ

"ಯಾವುದೇ ಎನ್‌ಜಿಒಗಳು ಪೀಡಿತ ಮಕ್ಕಳ ಹೆಸರಿನಲ್ಲಿ ಹಣವನ್ನು ಸಂಗ್ರಹಿಸುವುದನ್ನು ತಡೆಯಲು ಕೂಡಾ ರಾಜ್ಯ ಸರ್ಕಾರಗಳು / ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಲಾಗಿದೆ. ದತ್ತು ಪಡೆಯಲು ಆಸಕ್ತಿ ಹೊಂದಿರುವವರಿಗೆ ಮಕ್ಕಳ ಗುರುತನ್ನು ಬಹಿರಂಗಪಡಿಸುವುದು ಸರಿಯಲ್ಲ" ಎಂದು ಎನ್‌ಜಿಒಗಳನ್ನು ತರಾಟೆಗೆ ತೆಗೆದುಕೊಂಡಿದೆ.

ಸುಮೋಟೋ ಪ್ರಕರಣ ಪ್ರಕರಣ

ಸುಮೋಟೋ ಪ್ರಕರಣ ಪ್ರಕರಣ

ಕೊರೊನಾ ಪೀಡಿತ ಮಕ್ಕಳ ಸಮಸ್ಯೆಗಳನ್ನು ಪರಿಶೀಲಿಸಲು ಸುಮೋಟೋ ಪ್ರಕರಣವನ್ನು ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಅನಿರುದ್ಧ ಬೋಸ್ ಅವರನ್ನೊಳಗೊಂಡ ನ್ಯಾಯಪೀಠ ಕೈಗೆತ್ತಿಕೊಂಡಿದ್ದು, ಈ ಆದೇಶವನ್ನು ನೀಡಿದೆ. ವಕೀಲೆ ಶೋಭಾ ಗುಪ್ತಾ 'ವಿ ದಿ ವುಮೆನ್ ಆಫ್ ಇಂಡಿಯಾ' ಎಂಬ ಸಂಘಟನೆಯ ಪರವಾಗಿ ಸುಮೋಟೋ ಪ್ರಕರಣದಲ್ಲಿ ಅರ್ಜಿಯನ್ನು ಸಲ್ಲಿಸಿದ್ದಾರೆ.

ಹೆಚ್ಚುವರಿ ಸಾಲಿಸಿಟರ್ ಜನರಲ್ ಹೇಳಿದ್ದಿಷ್ಟು..

ಹೆಚ್ಚುವರಿ ಸಾಲಿಸಿಟರ್ ಜನರಲ್ ಹೇಳಿದ್ದಿಷ್ಟು..

ಮಕ್ಕಳ ಹಕ್ಕುಗಳ ಸಂರಕ್ಷಣೆಗಾಗಿ ರಾಷ್ಟ್ರೀಯ ಮಂಡಳಿಯ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್, ಕೆಲವು ನಿರ್ಲಜ್ಜ ಸಂಸ್ಥೆಗಳು ಮತ್ತು ವ್ಯಕ್ತಿಗಳು ಅಕ್ರಮ ದತ್ತು ಸ್ವೀಕಾರದಲ್ಲಿ ತೊಡಗಿದ್ದಾರೆ. ಹಣವನ್ನು ಕೋರಿ ಸಾರ್ವಜನಿಕ ಜಾಹೀರಾತುಗಳನ್ನು ಪ್ರಕಟಿಸುತ್ತಿದ್ದಾರೆ ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ.

ಲಸಿಕೆಗಳ ಪ್ರತಿ ವಿವರವನ್ನೂ ನೀಡಿ; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆಲಸಿಕೆಗಳ ಪ್ರತಿ ವಿವರವನ್ನೂ ನೀಡಿ; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ವಕೀಲೆ ಶೋಭಾ ಗುಪ್ತಾ ಆರೋಪಗಳು

ವಕೀಲೆ ಶೋಭಾ ಗುಪ್ತಾ ಆರೋಪಗಳು

ಈ ಸುಮೋಟೋ ಪ್ರಕರಣದ ಅರ್ಜಿಯಲ್ಲಿ ವಕೀಲೆ ಶೋಭಾ ಗುಪ್ತಾ, ಸಾರ್ವಜನಿಕ ಜಾಹೀರಾತು ನೀಡುವ ಮೂಲಕ ಮತ್ತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಮಾಡುವ ಮೂಲಕ ಸಂಸ್ಥೆಗಳು ಅನಾಥ ಮಕ್ಕಳನ್ನು ದತ್ತು ಪಡೆಯಲು ಜನರನ್ನು ಆಹ್ವಾನಿಸಿದೆ. ಅವುಗಳಲ್ಲಿ ಹೆಚ್ಚಿನವು ನಕಲಿ ಎಂದು ಆರೋಪಿಸಿದ್ದಾರೆ.

ಲಿವ್‌ ಇನ್‌ ಸಂಬಂಧದಲ್ಲಿರುವ ಜೋಡಿಗೆ ರಕ್ಷಣೆ ಒದಗಿಸಲು ಸುಪ್ರೀಂ ಆದೇಶಲಿವ್‌ ಇನ್‌ ಸಂಬಂಧದಲ್ಲಿರುವ ಜೋಡಿಗೆ ರಕ್ಷಣೆ ಒದಗಿಸಲು ಸುಪ್ರೀಂ ಆದೇಶ

ಇನ್ನು ''ಯಾವುದೇ ಮಕ್ಕಳ ದತ್ತು ಪ್ರಕ್ರಿಯೆಯಲ್ಲಿ ಕೇಂದ್ರ ದತ್ತು ಸಂಪನ್ಮೂಲ ಪ್ರಾಧಿಕಾರದ (CARA) ಒಳಗೊಳ್ಳುವಿಕೆ ಇಲ್ಲ. ಪ್ರಾಧಿಕಾರದ ಒಳಗೊಳ್ಳುವಿಕೆ ಇಲ್ಲದೆ ಯಾವುದೇ ದತ್ತು ಸ್ವೀಕಾರವನ್ನು ಅನುಮತಿಸಲಾಗುವುದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಇಂತಹ ಪ್ರಚಾರ ತಡೆಯಲು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕೂಡಲೇ ಕ್ರಮ ಕೈಗೊಳ್ಳಬೇಕಾದ ಅಗತ್ಯತೆ ಇದೆ. ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು'' ಎಂದು ಆಗ್ರಹಿಸಿದ್ದಾರೆ.

ಕನಿಷ್ಠ ಓರ್ವ ಪೋಷಕರನ್ನು ಕಳೆದುಕೊಂಡ 30,000 ಕ್ಕೂ ಹೆಚ್ಚು ಮಕ್ಕಳು

ಕನಿಷ್ಠ ಓರ್ವ ಪೋಷಕರನ್ನು ಕಳೆದುಕೊಂಡ 30,000 ಕ್ಕೂ ಹೆಚ್ಚು ಮಕ್ಕಳು

ಜೂನ್ 6 ರವರೆಗೆ ಎನ್‌ಸಿಪಿಸಿಆರ್ ಸಂಗ್ರಹಿಸಿದ ಮಾಹಿತಿಯ ಪ್ರಕಾರ 30,071 ಮಕ್ಕಳು ಅನಾಥರಾಗಿದ್ದಾರೆ ಅಥವಾ ಪೋಷಕರನ್ನು ಕಳೆದುಕೊಂಡಿದ್ದಾರೆ ಅಥವಾ ಕೋವಿಡ್‌ ಕಾರಣದಿಂದಾಗಿ ಅನಾಥರಾಗುದ್ದಾರೆ ಎಂದು ಸುಪ್ರೀಂ ಕೋರ್ಟ್ ಉಲ್ಲೇಖಿಸಿದೆ. ಈ ಪೈಕಿ 3,621 ಮಂದಿ ಅನಾಥರು, 26,176 ಮಂದಿ ಓರ್ವ ಪೋಷಕರನ್ನು ಕಳೆದುಕೊಂಡಿದ್ದಾರೆ, ಮತ್ತು 274 ಮಕ್ಕಳು ಕುಟುಂಬದಿಂದ ದೂರವಾಗಿದ್ದಾರೆ. 2020 ರ ಮಾರ್ಚ್‌ನಿಂದ ಸಾಂಕ್ರಾಮಿಕ ರೋಗದಲ್ಲಿ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳ ಮಾಹಿತಿಯನ್ನು ಎನ್‌ಸಿಪಿಸಿಆರ್‌ನ ರಾಷ್ಟ್ರೀಯ ಪೋರ್ಟಲ್‌ನಲ್ಲಿ "ಬಾಲ್ ಸ್ವರಾಜ್" ಎಂದು ಅಪ್‌ಲೋಡ್ ಮಾಡುವಂತೆ ನ್ಯಾಯಾಲಯ ಈ ಹಿಂದೆ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿತ್ತು.

(ಒನ್‌ಇಂಡಿಯಾ ಸುದ್ದಿ)

English summary
Stop Illegal Adoption Of Children Orphaned By COVID; Public Advertisements For Adoptions Unlawful ordered Supreme Court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X