Ahmedabad Air India Crash: ಅಹಮದಬಾದ್ ಏರ್ ಇಂಡಿಯಾ ದುರಂತಕ್ಕೆ ನಿಜವಾದ ಕಾರಣಕರ್ತರು ಯಾರು? ಸುಪ್ರೀಂ ಕೋರ್ಟ್ ಹೇಳಿದ್ದೇನು?
Ahmedabad Air India Plane Crash: ಅಹಮದಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ದುರಂತದಲ್ಲಿ 260ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಈ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಇನ್ನು ಈ ಘಟನೆಗೆ ಫೈಲಟ್ ಕಾರಣ ಎನ್ನುವ ವರದಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಅಲ್ಲದೆ, ಈ ವೇಳೆ ಕೇಂದ್ರ ಸರ್ಕಾರ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಖಡಕ್ ಕ್ಲಾಸ್ ತೆಗೆದುಕೊಂಡು ಮಹತ್ವದ ನೋಟಿಸ್ ಜಾರಿ ಮಾಡಿದೆ. ಹಾಗಾದ್ರೆ ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅಹಮದಬಾದ್ ಏರ್ ಇಂಡಿಯಾ ವಿಮಾನ ದುರಂತ ದೇಶವನ್ನೇ ಬೆಚ್ಚಿಬೀಳುವಂತೆ ಮಾಡಿತ್ತು. ಬಳಿಕ ಈ ಕುರಿತು ನಡೆಸಿದ ತನಿಖೆ ನಡೆಸಲಾಗಿದ್ದು, ಪ್ರಾಥಮಿಕ ವರದಿಯಲ್ಲಿ ಪೈಲಟ್‌ನನ್ನೇ ಘಟನೆಗೆ ಸಂಪೂರ್ಣ ಹೊಣೆಗಾರನನ್ನಾಗಿ ಮಾಡಲಾಗಿತ್ತು. ಆದರ, ಈ ಬಗ್ಗೆ ಸುಪ್ರೀಂ ಕೋರ್ಟ್ ತರಾಟೆಗೆ ತೆದುಕೊಂಡು ಖಡಕ್ ಸೋಚನೆಯೊಂದನ್ನು ನೀಡಿದೆ.

ಹೌದು.. ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತ ದುರಂತದ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವುದಾಗಿ ಹೇಳಿದೆ. ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI171 ಜೂನ್ 12ರಂದು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಯಿತು. ಈ ವೇಳೆ 260ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡರು.
ಈ ದುರಂತಕ್ಕೆ ಕೇವಲ ಪೈಲಟ್ನದ್ದೇ ತಪ್ಪು ಎಂಬುದನ್ನು ಒಪ್ಪಿಕೊಳ್ಳಲು ಸಾಧ್ಯ ಇಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ. ಪಿಐಎಲ್ ಮೇರೆಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಮತ್ತು ಇತರ ಸಂಬಂಧಿತ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ. ಅಪಘಾತದ ಬಗ್ಗೆ ಸ್ವತಂತ್ರ, ನಿಷ್ಪಕ್ಷಪಾತ ಮತ್ತು ತ್ವರಿತ ತನಿಖೆ ನಡೆಸಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.
ಏರ್ ಇಂಡಿಯಾ ವಿಮಾನ ಅಪಘಾತದ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿ ಮೇರೆಗೆ ಸುಪ್ರೀಂ ಕೋರ್ಟ್ ಇಂದು (ಸೆಪ್ಟೆಂಬರ್ 22) ನೋಟಿಸ್ ಜಾರಿ ಮಾಡಿದೆ. ನಾಗರಿಕ ವಿಮಾನಯಾನ ಸಚಿವಾಲಯ, ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಮತ್ತು ವಿಮಾನ ಅಪಘಾತ ತನಿಖಾ ಬ್ಯೂರೋದಿಂದ ನ್ಯಾಯಾಲಯವು ಸ್ಪಷ್ಟನೆಯನ್ನು ಕೋರಿದೆ.
ಸ್ವತಂತ್ರ, ನಿಷ್ಪಕ್ಷಪಾತ ಮತ್ತು ತ್ವರಿತ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಮಾತ್ರ ನೋಟಿಸ್ ನೀಡಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಅರ್ಜಿದಾರರ ಪರ ವಾದ ಮಂಡನೆ ಮಾಡಿದ ಹಿರಿಯ ವಕೀಲ ಪ್ರಶಾಂತ್ ಭೂಷಣ್, ಅಪಘಾತ ನಡೆದು 100 ದಿನಗಳಿಗೂ ಹೆಚ್ಚು ಸಮಯ ಕಳೆದಿದ್ದರೂ, ಪ್ರಾಥಮಿಕ ವರದಿ ಮಾತ್ರ ಬಿಡುಗಡೆಯಾಗಿದೆ ಎಂದು ಹೇಳಿದರು.
ಅಪಘಾತದ ತನಿಖೆಗಾಗಿ ನೇಮಿಸಲಾದ ಐದು ಸದಸ್ಯರ ಸಮಿತಿಯಲ್ಲಿ ಮೂವರು ಡಿಜಿಸಿಎಯವರು. ಆದರೆ ಡಿಜಿಸಿಎ ಪಾತ್ರವು ಪರಿಶೀಲನೆಗೆ ಒಳಪಟ್ಟಿರಬಹುದು ಎಂದು ಭೂಷಣ್ ವಾದ ಮಂಡಿಸಿದರು. ಇದು ಗಂಭೀರ ಹಿತಾಸಕ್ತಿ ಸಂಘರ್ಷವನ್ನು ಪ್ರಸ್ತುತಪಡಿಸುತ್ತದೆ ಮತ್ತು ಸಮಿತಿಯು ನಿಷ್ಪಕ್ಷಪಾತ ತನಿಖೆ ನಡೆಸುವ ಸಾಮರ್ಥ್ಯ ಹೊಂದಿದೆ ಎಂದು ಪರಿಗಣಿಸಲಾಗುವುದಿಲ್ಲ.
ಕ್ಯಾಪ್ಟನ್ ಅಮಿತ್ ಸಿಂಗ್ ನೇತೃತ್ವದ ವಾಯುಯಾನ ಸುರಕ್ಷತಾ ಸರ್ಕಾರೇತರ ಸಂಸ್ಥೆ ಸೇಫ್ಟಿ ಮ್ಯಾಟರ್ಸ್ ಫೌಂಡೇಶನ್ ಅಡಿ ಸಲ್ಲಿಸಿರುವ ಅರ್ಜಿಯಲ್ಲಿ, ವಿಮಾನ ಅಪಘಾತ ತನಿಖಾ ಬ್ಯೂರೋದ ಪ್ರಾಥಮಿಕ ವರದಿಯನ್ನ ಪ್ರಶ್ನಿಸಲಾಗಿದ್ದು, ಸಂಪೂರ್ಣ ಜವಾಬ್ದಾರಿಯನ್ನು ಪೈಲಟ್ ಮೇಲೆ ಹೊರಿಸಲಾಗಿದೆ ಎಂದು ಆರೋಪ ಮಾಡಲಾಗಿದೆ. ಇದಕ್ಕೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿ ತನಿಖಾಧಿಕಾರಿಗಳು ಹಾಗೂ ಕೇಂದ್ರ ಸರ್ಕಾರಕ್ಕೆ ಹಿಗ್ಗಮುಗ್ಗಾ ತರಾಟೆಗೆ ತೆಗೆದುಕೊಂಡಿದೆ. ಸ್ವತಂತ್ರ್ಯ, ನಿಷ್ಪಾಕ್ಷಪಾತವಾಗಿ ತನಿಕೆ ನಡೆಸಬೇಕೆಂದು ಸೂಚನೆ ನೀಡಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications