ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶಾಕ್; ದೀಪಸ್ತಂಭದಲ್ಲಿ ನಾಳೆಯೇ ದೀಪ ಬೆಳಗಿಸಲು ಖಡಕ್ ಆದೇಶ!

ತಮಿಳುನಾಡಿನ ಮದುರೈ ಜಿಲ್ಲೆಯ ತಿರುಪರಂಕುಂದ್ರಂ ಬೆಟ್ಟದ ದೀಪ ಬೆಳಗಿಸುವ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಬೆಟ್ಟದ ಮೇಲಿರುವ ದೀಪಸ್ತಂಭದಲ್ಲಿ ನಾಳೆಯೇ ದೀಪ ಬೆಳಗಿಸಬೇಕು ಎಂದು ಸೂಚಿಸಿರುವ ನ್ಯಾಯಾಲಯ, ದೇವಸ್ಥಾನದ ಆಡಳಿತ ಮಂಡಳಿಯನ್ನು ಅಮಾನತುಗೊಳಿಸಿದೆ. ಅಲ್ಲದೆ, ದೇವಸ್ಥಾನ ಮತ್ತು ದರ್ಗಾದ ಭದ್ರತೆಯ ಜವಾಬ್ದಾರಿಯನ್ನು ಕೇಂದ್ರ ಮೀಸಲು ಪೊಲೀಸ್ ಪಡೆ (CRPF)ಗೆ ವಹಿಸುವಂತೆ ಆದೇಶಿಸಿದೆ.

ಈ ಆದೇಶವು ತಮಿಳುನಾಡು ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿ ಪರಿಣಮಿಸಿದೆ. ನ್ಯಾಯಾಲಯದ ಆದೇಶಗಳನ್ನು ಪಾಲಿಸದ ಅಧಿಕಾರಿಗಳ ವಿರುದ್ಧವೂ ಸುಪ್ರೀಂ ಕೋರ್ಟ್ ಕಠಿಣ ನಿಲುವು ತಳೆದಿದೆ.

Supreme Court orders Karthigai Deepam lighting at Deepathoon tomorrow Issues contempt notices to Tamil Nadu

ದೀಪಸ್ತಂಭದಲ್ಲಿ ದೀಪ ಬೆಳಗಿಸಲು ಸುಪ್ರೀಂ ಕೋರ್ಟ್ ಆದೇಶ

ತಿರುಪರಂಕುಂದ್ರಂ ಬೆಟ್ಟದ ಮೇಲಿರುವ ದೀಪಸ್ತಂಭದಲ್ಲಿ ನಾಳೆಯೇ ದೀಪ ಬೆಳಗಿಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಸಿಕಂದರ್ ದರ್ಗಾದಿಂದ ಕನಿಷ್ಠ 50 ಮೀಟರ್ ದೂರದಲ್ಲಿ ಬೆಟ್ಟದ ಮೇಲಿರುವ ಸ್ಥಳದಲ್ಲಿ ಪ್ರತಿಯೊಬ್ಬ ಭಕ್ತರೂ ದೀಪ ಬೆಳಗಿಸಲು ಅವಕಾಶ ಕಲ್ಪಿಸಬೇಕು ಎಂದು ಸೂಚಿಸಿದೆ. ದೇವಸ್ಥಾನ ಮತ್ತು ದರ್ಗಾ ಎರಡಕ್ಕೂ ಸೂಕ್ತ ಭದ್ರತೆ ಒದಗಿಸುವಂತೆ CRPFಗೆ ನ್ಯಾಯಾಲಯ ನಿರ್ದೇಶನ ನೀಡಿದೆ.

ದೇವಸ್ಥಾನದ ಆಡಳಿತ ಮಂಡಳಿ ಅಮಾನತು

ಸುಬ್ರಮಣ್ಯಸ್ವಾಮಿ ದೇವಸ್ಥಾನದ ಆಡಳಿತ ಮಂಡಳಿಯನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದೆ. ಮದ್ರಾಸ್ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿಗಳಾದ ಎಸ್. ವೈದ್ಯನಾಥನ್ ಮತ್ತು ವಿ. ಪಾರ್ಥಿಬನ್ ಅವರನ್ನು ದೇವಸ್ಥಾನದ ಆಡಳಿತ ಮೇಲ್ವಿಚಾರಣೆ ಹಾಗೂ ನ್ಯಾಯಾಲಯದ ಆದೇಶಗಳ ಅನುಷ್ಠಾನ ಖಚಿತಪಡಿಸುವ ಉಸ್ತುವಾರಿಗಳಾಗಿ ನೇಮಕ ಮಾಡಿದೆ. ಇದೇ ವೇಳೆ, ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ವಿಧಿಸಲಾಗಿದ್ದ ತಡೆಯನ್ನೂ ಸುಪ್ರೀಂ ಕೋರ್ಟ್ ತೆರವುಗೊಳಿಸಿದೆ.

ತಮಿಳುನಾಡು ಸರ್ಕಾರಿ ನೌಕರರಿಗೆ 15 ದಿನ ಪಿತೃತ್ವ ರಜೆ ಘೋಷಿಸಿದ ಸಿಎಂ ಜೋಸೆಫ್ ವಿಜಯ್
ತಮಿಳುನಾಡು ಸರ್ಕಾರಿ ನೌಕರರಿಗೆ 15 ದಿನ ಪಿತೃತ್ವ ರಜೆ ಘೋಷಿಸಿದ ಸಿಎಂ ಜೋಸೆಫ್ ವಿಜಯ್

ಅಧಿಕಾರಿಗಳಿಗೆ ನ್ಯಾಯಾಂಗ ನಿಂದನೆ ನೋಟಿಸ್

ನ್ಯಾಯಾಲಯದ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ತಮಿಳುನಾಡಿನ ಮುಖ್ಯ ಕಾರ್ಯದರ್ಶಿ, ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಉಪ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರು, ಮದುರೈ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಲಾಗಿದೆ. ಈ ಅಧಿಕಾರಿಗಳು ಡಿಸೆಂಬರ್ 15ರಂದು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.‌

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌ ನೀಡಿದ ತಮಿಳುನಾಡು ಸಿಎಂ ವಿಜಯ್
ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌ ನೀಡಿದ ತಮಿಳುನಾಡು ಸಿಎಂ ವಿಜಯ್

ಸುಪ್ರೀಂ ಕೋರ್ಟ್ ಅಸಮಾಧಾನ

ಈ ಪ್ರಕರಣದ ವಿಚಾರಣೆ ವೇಳೆ ತಮಿಳುನಾಡಿನ ಆಡಳಿತ ವ್ಯವಸ್ಥೆಯ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕನಿಷ್ಠ ಮದುರೈ ಜಿಲ್ಲೆಯಲ್ಲಾದರೂ ಆಡಳಿತಾತ್ಮಕ ಗೊಂದಲ ಕಂಡುಬರುತ್ತಿದೆ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ. ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ರಾಜಕೀಯ ನಾಯಕರ ಸೂಚನೆಯಂತೆ ನಡೆದುಕೊಂಡಿರುವಂತೆ ಕಾಣುತ್ತಿದೆ ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸುವುದನ್ನು ಇನ್ನು ಮುಂದೆ ಸಹಿಸಲು ಸಾಧ್ಯವಿಲ್ಲ. ನ್ಯಾಯಾಲಯದ ಆದೇಶಗಳನ್ನು ಪಾಲಿಸದಿರುವ ವಿಚಾರವನ್ನು ಕಠಿಣವಾಗಿ ನಿಭಾಯಿಸುವ ಸಮಯ ಬಂದಿದೆ ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ.

ದೀಪಸ್ತಂಭದಲ್ಲಿ ದೀಪ ಬೆಳಗಿಸುವ ಕುರಿತು ನೀಡಿದ್ದ ಆದೇಶ ಪಾಲನೆಯಾಗಿಲ್ಲ ಎಂಬುದನ್ನು ತಿಳಿದ ನ್ಯಾಯಮೂರ್ತಿಗಳು 'ಅಯ್ಯೋ!' (Alas!) ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನ್ಯಾಯದ ಹರಿವನ್ನು ಕಲುಷಿತಗೊಳಿಸುವ ಯಾವುದೇ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ. ಈ ನ್ಯಾಯಾಲಯದ ಆದೇಶ ಉಲ್ಲಂಘನೆಯಾದಾಗ ನಾವು ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳು ಕಟುವಾಗಿ ಹೇಳಿದ್ದಾರೆ. ತಿರುಪರಂಕುಂದ್ರಂ ದೀಪ ವಿವಾದದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಈ ಆದೇಶ ತಮಿಳುನಾಡು ಸರ್ಕಾರ ಮತ್ತು ಅಧಿಕಾರಿಗಳಿಗೆ ದೊಡ್ಡ ಹಿನ್ನಡೆಯಾಗಿದ್ದು, ಮುಂದಿನ ವಿಚಾರಣೆ ಡಿಸೆಂಬರ್ 15ರಂದು ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+