ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಮತ್ತೊಂದು ಹಿನ್ನಡೆ?
ನವದೆಹಲಿ, ಏಪ್ರಿಲ್. 13: ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಇತರೆ ಹಿಂದುಳಿದ ವರ್ಗಗಳ (ಒಬಿಸಿ) ವಿಭಾಗದಲ್ಲಿ ಮುಸ್ಲಿಮರಿಗೆ ನೀಡಿದ್ದ ಶೇಕಡಾ 4ರಷ್ಟು ಮೀಸಲಾತಿ ರದ್ದು ಮಾಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಇದು ತರ್ಕಬದ್ಧವಲ್ಲದ ಗ್ರಹಿಕೆ ಆಧಾರದಲ್ಲಿ ನಡೆದಿದೆ ಎಂದು ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಲಾಗಿದೆ.
ಮತ್ತೊಂದು ಕಡೆ ಈ ನಿರ್ಧಾರ ದೋಷಪೂರಿತ ಎಂದು ಸುಪ್ರೀಂಕೋರ್ಟ್ ಹೇಳಿದೆ. 'ಮುಸ್ಲಿಮರ ಶೇಕಡಾ 4ರ ಒಬಿಸಿ ಕೋಟಾವನ್ನು ರದ್ದುಪಡಿಸಿ, ಒಕ್ಕಲಿಗರು ಹಾಗೂ ಲಿಂಗಾಯತರ ಮೀಸಲಾತಿಯನ್ನು ತಲಾ ಶೇ 2ರಷ್ಟು ಹೆಚ್ಚಿಸುವ ನಿರ್ಧಾರವು ಮೇಲ್ನೋಟಕ್ಕೆ ಅಸ್ಥಿರ ಹಾಗೂ ದೋಷಪೂರಿತ' ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ ಮೂಲಕ ಚುನಾವಣೆ ಸಂದರ್ಭದಲ್ಲೇ ರಾಜ್ಯ ಸರ್ಕಾರಕ್ಕೆ ಮತ್ತೊಂದು ಹಿನ್ನಡೆ ಉಂಟಾದಂತಾಗಿದೆ.

ಚರ್ಚೆ ಹುಟ್ಟುಹಾಕಿದ್ದ ನಿರ್ಧಾರ
ಮತ್ತೊಂದು ಕಡೆ ಕರ್ನಾಟಕ ಸರ್ಕಾರದ ನಿರ್ಧಾರದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳಲು ಸುಪ್ರೀಂಕೋರ್ಟ್ ಒಪ್ಪಿಗೆ ಸೂಚಿಸಿತ್ತು. ಸಿಜೆಐ ಡಿವೈ ಚಂದ್ರಚೂಡ್, ನ್ಯಾ. ಪಿಎಸ್ ನರಸಿಂಹ ಹಾಗೂ ನ್ಯಾ. ಜೆಬಿ ಪರ್ಡಿವಾಲಾ ಅವರನ್ನು ಒಳಗೊಂಡ ಪೀಠದ ಅರ್ಜಿ ವಿಚಾರಣೆ ಆರಂಭಿಸಿತ್ತು. ಸರ್ಕಾರದ ನಿರ್ಧಾರದ ವಿರುದ್ಧ ಸಲ್ಲಿಕೆಯಾಗಿರುವ ಈ ಅರ್ಜಿಯ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸುತ್ತಿದ್ದಾರೆ. ವಿಧಾನಸಭಾ ಚುನಾವಣೆ ಘೋಷಣೆಯಾಗುವ ಮೊದಲೇ ಬಿಜೆಪಿ ಸರ್ಕಾರ ಪ್ರಕಟಿಸಿದ್ದ ಈ ನಿರ್ಧಾರ ಚರ್ಚೆ ಹುಟ್ಟುಹಾಕಿತ್ತು.
ನಿಯಮ ಉಲ್ಲಂಘನೆ ಆರೋಪ
ರಾಜ್ಯದ ಜನಸಂಖ್ಯೆಯಲ್ಲಿ ಶೇ.13ರಷ್ಟಿರುವ ಮುಸ್ಲಿಮರ ವಿಚಾರದಲ್ಲಿ ತಾರತಮ್ಯ ಮಾಡುವ ಮೂಲಕ ಕರ್ನಾಟಕ ಸರ್ಕಾರ ಸಂವಿಧಾನದ ಸಮಾನತೆ ಮತ್ತು ಜಾತ್ಯತೀತ ತತ್ವ ಉಲ್ಲಂಘಿಸಿದೆ ಎಂದು ಅರ್ಜಿದಾರರು ವಾದಿಸಿದರು. ಸರ್ಕಾರವು ತನ್ನ ನಿರ್ಧಾರವನ್ನು ಸಮರ್ಥಿಸಲು ಯಾವುದೇ ಅಧ್ಯಯನವನ್ನು ನಡೆಸಿಲ್ಲ ಅಥವಾ ಯಾವುದೇ ಪ್ರಾಯೋಗಿಕ ಮಾಹಿತಿ ಸಂಗ್ರಹಿಸಿಲ್ಲ ಎಂದು ಆರೋಪಿಸಲಾಗಿತ್ತು.
ಏನಿದು ಮೀಸಲಾತಿ ವಿವಾದ?
ಇತ್ತೀಚೆಗಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಮುಸ್ಲಿಮರಿಗೆ ನೀಡಲಾಗಿದ್ದ ಶೇ.4ರಷ್ಟು ಮೀಸಲಾತಿ ರದ್ದುಪಡಿಸಲು ನಿರ್ಧರಿಸಿತ್ತು. ಸರ್ಕಾರವು ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಗಾಗಿ ಎರಡು ಹೊಸ ವರ್ಗಗಳನ್ನು ಘೋಷಿಸಿದೆ. ನಂತರ ಇತರ ಹಿಂದುಳಿದ ವರ್ಗಗಳ (OBC) ಅಡಿಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇಕಡಾ 4ರ ಕೋಟಾವನ್ನು ರದ್ದುಗೊಳಿಸಿತು. 4 ಪ್ರತಿಶತ ಒಬಿಸಿ ಮುಸ್ಲಿಂ ಕೋಟಾವನ್ನು ರಾಜ್ಯದ ಪ್ರಬಲ ಸಮುದಾಯಗಳಾದ ಒಕ್ಕಲಿಗರು ಮತ್ತು ಲಿಂಗಾಯತರ ನಡುವೆ ಸಮಾನವಾಗಿ ಹಂಚಲಾಗಿದೆ.
ಪ್ರಸ್ತುತ, ಒಕ್ಕಲಿಗರು 4 ಪ್ರತಿಶತ ಮತ್ತು ಲಿಂಗಾಯತರು 5 ಪ್ರತಿಶತ ಮೀಸಲಾತಿ ಹೊಂದಿದ್ದಾರೆ. ರಾಜ್ಯ ಕ್ಯಾಬಿನೆಟ್ ನಿರ್ಧಾರದ ನಂತರ, ಒಕ್ಕಲಿಗರು ಕ್ರಮವಾಗಿ 2 (ಸಿ) ಮತ್ತು 2 (ಡಿ) ಅಡಿಯಲ್ಲಿ ಕ್ರಮವಾಗಿ ಶೇಕಡಾ 6 ರಷ್ಟು ಮೀಸಲಾತಿ ಮತ್ತು ಲಿಂಗಾಯತರು ಶೇಕಡಾ 7 ರಷ್ಟು ಮೀಸಲಾತಿಯನ್ನು ಪಡೆಯುತ್ತಾರೆ. ಈ ಸಮುದಾಯಗಳು ಈ ಹಿಂದೆ 3A ಮತ್ತು 3B ವರ್ಗಗಳ ಅಡಿಯಲ್ಲಿದ್ದರು, ಅದನ್ನು ರದ್ದುಗೊಳಿಸಲಾಗಿದೆ.
ಒಬಿಸಿ ವರ್ಗದಿಂದ ಮುಸ್ಲಿಮರನ್ನು ತೆಗೆದುಹಾಕಿ ಶೇಕಡಾ 10 ರಷ್ಟು ಮೀಸಲಾತಿ ಇರುವ ಆರ್ಥಿಕವಾಗಿ ದುರ್ಬಲ ವಿಭಾಗ (ಇಡಬ್ಲ್ಯೂಎಸ್) ಅಡಿಯಲ್ಲಿ ಅವರಿಗೆ ಅವಕಾಶ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ. "ಕ್ಯಾಬಿನೆಟ್ ಉಪಸಮಿತಿ ಕೋಟಾ ವಿಭಾಗಗಳಲ್ಲಿ ಬದಲಾವಣೆಗಳನ್ನು ಶಿಫಾರಸು ಮಾಡಿದೆ. ಈ ಕಾರಣದಿಂದ ನಾವು ಮೀಸಲಾತಿ ಬದಲಾವಣೆ ಮಾಡಿದ್ದೇವೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ ಘೋಷಣೆ ವೇಳೆ ತಿಳಿಸಿದ್ದರು. ಇದು ರಾಜ್ಯದಲ್ಲಿ ಭಾರೀ ಪ್ರತಿಭಟನೆಗೆ ಕಾರಣವಾಗಿತ್ತು.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications