NEET-UG Paper Leak: ಸುಪ್ರೀಂ ಕೋರ್ಟ್‌ನಿಂದ ಎನ್‌ಟಿಎಗೆ ತರಾಟೆ; ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ನವದೆಹಲಿ: ಇಡೀ ದೇಶಾದ್ಯಂತ ಸಂಚಲನ ಸೃಷ್ಟಿಸಿರುವ 'ನೀಟ್-ಯುಜಿ' ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಶುಕ್ರವಾರ ನಡೆದ ವಿಚಾರಣೆ ವೇಳೆ ಕೇಂದ್ರ ಸರ್ಕಾರ ಮತ್ತು ಎನ್‌ಟಿಎಗೆ ಚಾಟಿ ಬೀಸಿರುವ ಸರ್ವೋಚ್ಚ ನ್ಯಾಯಾಲಯ, ಈ ಘಟನೆಯಿಂದ ವಿದ್ಯಾರ್ಥಿಗಳು ಮತ್ತು ಅವರ ಇಡೀ ಕುಟುಂಬಗಳು ತೀವ್ರ ಆಘಾತಕ್ಕೊಳಗಾಗಿವೆ ಎಂದು ಕಳವಳ ವ್ಯಕ್ತಪಡಿಸಿದೆ.

ಎನ್‌ಟಿಎ ಕಾರ್ಯವೈಖರಿಗೆ ಸುಪ್ರೀಂ ಅಸಮಾಧಾನ

ನ್ಯಾಯಮೂರ್ತಿಗಳ ಪೀಠವು ಎನ್‌ಟಿಎಯಲ್ಲಿನ ಸಾಂಸ್ಥಿಕ ಚೌಕಟ್ಟಿನ ಕೊರತೆ ಮತ್ತು ತಾತ್ಕಾಲಿಕ ವ್ಯವಸ್ಥೆಗಳ ಬಗ್ಗೆ ಅಸಮಾಧಾನ ಹೊರಹಾಕಿದೆ. ವಿದ್ಯಾರ್ಥಿಗಳ ವರ್ಷಗಳ ಕಠಿಣ ಪರಿಶ್ರಮ ಇದರಿಂದ ವ್ಯರ್ಥವಾಗಿವೆ ಎಂದು ನ್ಯಾಯಾಲಯ ಹೇಳಿದೆ. ಈ ರೀತಿಯ ಗಂಭೀರ ಲೋಪಗಳು ಮರುಕಳಿಸದಂತೆ ತಡೆಯಲು ಸಾಂಸ್ಥಿಕ ಸಾಮರ್ಥ್ಯವನ್ನು ಸುಧಾರಿಸಲು ಮತ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಸಚಿವಾಲಯಕ್ಕೆ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

Supreme Court

ಇದಕ್ಕೆ ಪ್ರತಿಕ್ರಿಯಿಸಿರುವ ಎನ್‌ಟಿಎ, ಪರೀಕ್ಷಾ ವ್ಯವಸ್ಥೆಯನ್ನು ಬಲಪಡಿಸಲು ಮುಂಬರುವ ವರ್ಷದಿಂದ ಪೆನ್-ಪೇಪರ್ ಬದಲು ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲು ತಜ್ಞರ ಸಮಿತಿಯ ಶಿಫಾರಸಿನಂತೆ ಸಿದ್ಧತೆ ಮಾಡಿಕೊಳ್ಳುತ್ತಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದೆ.

ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಇದೇ ವೇಳೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಈ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಅವರು, ಲಕ್ಷಾಂತರ ಯುವಕರು ಬೀದಿಗಿಳಿದು ಹೋರಾಡುತ್ತಿದ್ದಾರೆ ಮತ್ತು 22 ಲಕ್ಷ ಮಕ್ಕಳ ಭವಿಷ್ಯ ಅಪಾಯದಲ್ಲಿದೆ, ಆದರೂ ಪ್ರಧಾನಿಯವರು ಮೌನ ವಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀಟ್‌ನಂತಹ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ದೋಷರಹಿತ ವ್ಯವಸ್ಥೆಯನ್ನು ಸ್ಥಾಪಿಸುವವರೆಗೆ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ಕಾಂಗ್ರೆಸ್ ತನ್ನ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.

NEET UG 2026ರ ಶುಲ್ಕ ಮರುಪಾವತಿ: ಬ್ಯಾಂಕ್ ವಿವರ ನೀಡಲು ವಿದ್ಯಾರ್ಥಿಗಳಿಗೆ ಗಡುವು ವಿಸ್ತರಿಸಿದ NTA
NEET UG 2026ರ ಶುಲ್ಕ ಮರುಪಾವತಿ: ಬ್ಯಾಂಕ್ ವಿವರ ನೀಡಲು ವಿದ್ಯಾರ್ಥಿಗಳಿಗೆ ಗಡುವು ವಿಸ್ತರಿಸಿದ NTA

ಇದಲ್ಲದೆ, ರಾಜಸ್ಥಾನದ ಸಿಕಾರ್‌ನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷೆ ರದ್ದತಿಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ 22 ವರ್ಷದ ನೀಟ್ ಆಕಾಂಕ್ಷಿ ಪ್ರದೀಪ್ ಮೇಘವಾಲ್ ಅವರ ಕುಟುಂಬವನ್ನು ರಾಹುಲ್ ಗಾಂಧಿ ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಈ ಸಾವು ಆತ್ಮಹತ್ಯೆಯಲ್ಲ, ಬದಲಾಗಿ ಭ್ರಷ್ಟ ವ್ಯವಸ್ಥೆಯ ಪರಿಣಾಮ ಎಂದು ಅವರು ಕಿಡಿಕಾರಿದ್ದಾರೆ. ಮಾಫಿಯಾದ ಕೈಗೆ ಪರೀಕ್ಷಾ ವ್ಯವಸ್ಥೆಯನ್ನು ಒಪ್ಪಿಸಿರುವ ಮಂದಿಯೇ ಈ ಸಾವಿಗೆ ಹೊಣೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಸಿಬಿಐ ತನಿಖೆ ಮತ್ತು ಬಿಗಿ ಭದ್ರತೆಯಲ್ಲಿ ಮರು ಪರೀಕ್ಷೆ

ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಈಗಾಗಲೇ ನೀಟ್-ಯುಜಿ ಪರೀಕ್ಷೆಯನ್ನು ರದ್ದುಗೊಳಿಸಿದ್ದು, ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ದಳಕ್ಕೆ ವಹಿಸಿದೆ. ಈ ಘಟನೆಯಿಂದ ಉಂಟಾಗಿರುವ ಬಿಕ್ಕಟ್ಟನ್ನು ಪ್ರಧಾನಿ ನರೇಂದ್ರ ಮೋದಿ ಅವರು ಖುದ್ದಾಗಿ ನಿಗಾವಹಿಸಿ ಪರಿಶೀಲಿಸುತ್ತಿದ್ದಾರೆ ಎಂದು ಕೇಂದ್ರ ಸರ್ಕಾರವು ನ್ಯಾಯಾಲಯದ ಗಮನಕ್ಕೆ ತಂದಿದೆ.

NEET ಪ್ರಶ್ನೆ ಪತ್ರಿಕೆ ಸೋರಿಕೆ ಜವಾಬ್ದಾರಿಯನ್ನು ಪ್ರಧಾನಿಗಳು ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೊರಬೇಕು: ಸಿದ್ದರಾಮಯ್ಯ
NEET ಪ್ರಶ್ನೆ ಪತ್ರಿಕೆ ಸೋರಿಕೆ ಜವಾಬ್ದಾರಿಯನ್ನು ಪ್ರಧಾನಿಗಳು ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೊರಬೇಕು: ಸಿದ್ದರಾಮಯ್ಯ

ಈ ಬೆಳವಣಿಗೆಗಳ ನಡುವೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 21 ರಂದು ಬಿಗಿ ಭದ್ರತೆಯೊಂದಿಗೆ ಮರು ಪರೀಕ್ಷೆ ನಡೆಸಲಾಗುವುದು ಎಂದು ಎನ್‌ಟಿಎ ಮಾಹಿತಿ ನೀಡಿದೆ. ಪ್ರಶ್ನೆಪತ್ರಿಕೆಗಳ ಮುದ್ರಣ, ಸಾಗಣೆ ಮತ್ತು ದಾಸ್ತಾನು ಪ್ರೋಟೋಕಾಲ್ ಸೇರಿದಂತೆ ಪರೀಕ್ಷಾ ವ್ಯವಸ್ಥೆಯ ಹಲವು ಅಂಶಗಳನ್ನು ಕೂಲಂಕಷವಾಗಿ ಪರಿಷ್ಕರಿಸಲಾಗಿದೆ ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+