Rahul Gandhi: ನೀವು ನಿಜವಾದ ಭಾರತೀಯ ಆಗಿದ್ದರೆ ಈ ಮಾತು ಹೇಳ್ತಿರಲಿಲ್ಲ: ರಾಹುಲ್‌ ಗಾಂಧಿ ವಿರುದ್ಧ ಸುಪ್ರೀಂ‌ ಛೀಮಾರಿ

ನವದೆಹಲಿ, ಆಗಸ್ಟ್‌ 04: ವಿದೇಶಗಳಲ್ಲಿ ಹೋಗಿ ಪದೇ ಪದೇ ಭಾರತದ ಬಗ್ಗೆ ಅವಹೇಳನಕಾರಿ ಮಾತನಾಡಿ ಇದಾಗಲೇ ಭಾರತದ ಮೇಲೆ ಗೌರವ ಇಟ್ಟುಕೊಂಡಿರುವವರ ಕೆಂಗಣ್ಣಿಗೆ ಗುರಿಯಾಗುತ್ತಿರುವ ಸಂಸದ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಸುಪ್ರೀಂಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ನಿಜವಾದ ಭಾರತನೀಯನಾದವನು ಈ ರೀತಿ ಮಾತನಾಡುವುದಿಲ್ಲ ಎಂದು ಭಾರತೀಯ ಸೇನೆ ಬಗ್ಗೆ ರಾಹುಲ್ ಗಾಂಧಿ ನೀಡಿರುವ ಹೇಳಿಕೆಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೇನೆಯ ವಿರುದ್ಧ ಮಾಡಿದ ಹೇಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇಂದು (ಸೋಮವಾರ) ನಡೆದ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಲಯವು ರಾಹುಲ್ ಗಾಂಧಿಯನ್ನು ಖಂಡಿಸಿ, ಚೀನಾ 2000 ಕಿಲೋಮೀಟರ್‌ಗಳಷ್ಟು ಭಾರತದ ಭೂಮಿಯನ್ನು ವಶಪಡಿಸಿಕೊಂಡಿದೆ ಎಂದು ನಿಮಗೆ ಹೇಗೆ ಗೊತ್ತು? ನೀವು ನಿಜವಾದ ಭಾರತೀಯರಾಗಿದ್ದರೆ, ನೀವು ಹೀಗೆ ಹೇಳುತ್ತಿರಲಿಲ್ಲ ಎಂದು ಹೇಳಿದೆ.

Supreme Court Rebukes Rahul Gandhi If You re True Indian You Wouldn t Say This

ಭಾರತ-ಚೀನಾ ಗಡಿ ವಿಚಾರದಲ್ಲಿ ನಿರಾಧಾರ ಹೇಳಿಕೆಗಳನ್ನು ಕೊಡುತ್ತಾ ದೇಶದ ಜನರನ್ನು ದಿಕ್ಕು ತಪ್ಪಿಸಲು ನಿರಂತರ ಪ್ರಯತ್ನ ಮಾಡುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್ ಅತ್ಯಂತ ಕಟು ಶಬ್ದಗಳಲ್ಲಿ ಛೀಮಾರಿ ಹಾಕಿದೆ. ವಿಚಾರಣೆಯ ಸಮಯದಲ್ಲಿ, ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಎ.ಜಿ. ಮಸಿಹ್ ಅವರ ಪೀಠವು ರಾಹುಲ್ ಗಾಂಧಿಯವರ ಹೇಳಿಕೆಗಳಿಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿತು.

ರಾಹುಲ್ ಗಾಂಧಿ ಪರವಾಗಿ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ವಿರೋಧ ಪಕ್ಷದ ನಾಯಕರೊಬ್ಬರು ಸಮಸ್ಯೆಗಳನ್ನು ಎತ್ತಲು ಸಾಧ್ಯವಾಗದಿದ್ದರೆ ಅದು ದುರದೃಷ್ಟಕರ ಪರಿಸ್ಥಿತಿ ಎಂದು ಆರಂಭದಲ್ಲಿ ವಾದಿಸಿದರು. ಇದಕ್ಕೆ ನ್ಯಾಯಮೂರ್ತಿ ದತ್ತಾ ಪ್ರತಿಕ್ರಿಯಿಸಿ, ನೀವು ವಿರೋಧ ಪಕ್ಷದ ನಾಯಕರು, ಸಂಸತ್ತಿನಲ್ಲಿ ಏನಾದರೂ ಹೇಳಿ, ನೀವು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಏಕೆ ಹೇಳುತ್ತೀರಿ ಎಂದು ಪ್ರಶ್ನಿಸಿದ್ದಾರೆ.

2020 ರ ಗಾಲ್ವಾನ್ ಕಣಿವೆಯಲ್ಲಿ ಚೀನಾದೊಂದಿಗೆ ನಡೆದ ಘರ್ಷಣೆಯ ಸಂದರ್ಭದಲ್ಲಿ ಭಾರತೀಯ ಸೇನೆಯ ಬಗ್ಗೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ನೀವು ನಿಜವಾದ ಭಾರತೀಯರೇ ಆಗಿದ್ದರೆ ಈ ಮಾತುಗಳನ್ನು ಹೇಳುತ್ತಿರಲಿಲ್ಲ. ಯಾವುದೇ ದಾಖಲೆಗಳು ಇಲ್ಲದೇ ಈ ರೀತಿಯ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ನೀಡುವುದು ಎಷ್ಟು ಸರಿ? ನಿಮ್ಮ ಬಳಿ ಏನು ದಾಖಲೆ ಇವೆ? ಓರ್ವ ಭಾರತೀಯನಾಗಿ ಹೀಗೆ ಹೇಳುತ್ತಿರುವುದು ಅಚ್ಚರಿಯ ವಿಷಯವಾಗಿದೆ ಎಂದು ಸುಪ್ರೀಂ ಕೋರ್ಟ್​ ತರಾಟೆಗೆ ತೆಗೆದುಕೊಂಡಿತು.

ಚೀನಾವು ಸುಮಾರು ಎರಡು ಸಾವಿರ ಚದರ ಕಿಲೋಮೀಟರ್ ಭಾರತೀಯ ಪ್ರದೇಶವನ್ನು ಆಕ್ರಮಿಸಿಕೊಂಡಿದ್ದಾರೆಂದು ಹೇಳುವ ದಾಖಲೆ ನಿಮ್ಮ (ರಾಹುಲ್​ ಗಾಂಧಿ) ಬಳಿ ಇದೆಯಾ? ಅದಕ್ಕೆ ಪೂರಕ ಸಾಕ್ಷ್ಯಾಧಾರಗಳು ಇವೆಯಾ? ಇಲ್ಲ ಎಂದಾದ ಮೇಲೆ ಇಂಥ ಹೇಳಿಕೆ ಏಕೆ ಕೊಡುತ್ತೀರಿ? ನೀವು (ರಾಹುಲ್​ ಗಾಂಧಿ) ನಿಜವಾದ ಭಾರತೀಯರೇ ಆಗಿದ್ದರೆ ಇಂಥ ಹೇಳಿಕೆ ಕೊಡುತ್ತಿರಲಿಲ್ಲ ಎಂದು ಸುಪ್ರೀಂ ತೀವ್ರ ಅಸಮಾಧಾನ ವ್ಯಕ್ತಪಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+