7 ಹೈಕೋರ್ಟ್‌ಗಳಿಗೆ ಹೊಸ ಮುಖ್ಯ ನ್ಯಾಯಮೂರ್ತಿಗಳನ್ನು ಶಿಫಾರಸ್ಸು ಮಾಡಿದ ಸುಪ್ರೀಂ ಕೋರ್ಟ್ ಕೊಲಿಜಿಯಂ
ನವದೆಹಲಿ ಜುಲೈ 6: ಕೇರಳ, ಒರಿಸ್ಸಾ, ಮಣಿಪುರ, ಆಂಧ್ರಪ್ರದೇಶ, ಬಾಂಬೆ, ತೆಲಂಗಾಣ ಮತ್ತು ಗುಜರಾತ್‌ನ ಏಳು ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ಕೊಲಿಜಿಯಂ ನಿರ್ಣಯಗಳನ್ನು ಅಂಗೀಕರಿಸಿದ್ದು, ಬುಧವಾರ ತಡರಾತ್ರಿ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಸುನಿತಾ ಅಗರ್ವಾಲ್ ಅವರನ್ನು ಗುಜರಾತ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಲಾಗಿದೆ.
ಜೊತೆಗೆ ಗುಜರಾತ್ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಶಿಶ್ ಜೆ ದೇಸಾಯಿ ಅವರನ್ನು ಕೇರಳ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಲಾಗಿದೆ.
ಒರಿಸ್ಸಾ ಹೈಕೋರ್ಟ್‌ನ ನ್ಯಾಯಮೂರ್ತಿ ಸುಭಾಸಿಸ್ ತಾಲಪಾತ್ರ ಅವರನ್ನು ಒರಿಸ್ಸಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಲಾಗಿದೆ.
ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸಿದ್ಧಾರ್ಥ್ ಮೃದುಲ್ ಅವರನ್ನು ಮಣಿಪುರ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಲಾಗಿದೆ.
ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ಧೀರಜ್ ಸಿಂಗ್ ಠಾಕೂರ್ ಅವರನ್ನು ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಲಾಗಿದೆ.
ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಅವರನ್ನು ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಲಾಗಿದೆ.
ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರನ್ನು ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಲಾಗಿದೆ.












Click it and Unblock the Notifications