ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಬರಿಮಲೆ ತೀರ್ಪು: ಸಪ್ತಸದಸ್ಯರ ವಿಸ್ತೃತ ಪೀಠಕ್ಕೆ ವರ್ಗಾವಣೆ

|
Google Oneindia Kannada News

Recommended Video

ಮೇಲ್ಮನವಿ ಅರ್ಜಿ ಪ್ರಕರಣ ಸಪ್ತ ನ್ಯಾಯಮೂರ್ತಿಗಳ ವಿಸ್ತೃತ ಪೀಠಕ್ಕೆ ವರ್ಗಾವಣೆ | Oneindia Kannada

ನವದೆಹಲಿ, ನವೆಂಬರ್ 14: ಕೇರಳದ ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸಿದ್ದ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿ ಪ್ರಕರಣವನ್ನು ಸಪ್ತ ನ್ಯಾಯಮೂರ್ತಿಗಳ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ.

ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅನುಮತಿ: ಸುಪ್ರೀಂನಿಂದ ಐತಿಹಾಸಿಕ ತೀರ್ಪು

2018 ರ ಸೆಪ್ಟೆಂಬರ್ ನಲ್ಲಿ ಸುಪ್ರೀಂ ಕೋರ್ಟ್ ಶಬರಿಮಲೆಗೆ ಮಹಿಳೆಯರು ಪ್ರವೇಶಿಸಲು ಅನುಮತಿ ನೀಡಿತ್ತು. ಆದರೆ ಈ ತೀರ್ಪನ್ನು ಮರುಪರಿಶೀಲಿಸಬೇಕು ಎಂದು ಒಟ್ಟು 56 ಅರ್ಜಿಗಳು ಸಲ್ಲಿಕೆಯಾಗಿದ್ದವು. ಅವೆಲ್ಲವುಗಳ ವಿಚಾರಣೆಯನ್ನು ಕೋರ್ಟು ಮುಗಿಸಿದ್ದು, ಇಂದು ತೀರ್ಪು ನೀಡಬೇಕಿತ್ತು.

Supreme Court Refers Sabarimal Case tO larger Bench

ದೇವಸ್ಥಾನದ ಆಡಳಿತ ಮಂಡಳಿಯ ನಿಯಮಾವಳಿ ಪ್ರಕಾರ 10ರಿಂದ 50 ವರ್ಷ ವಯಸ್ಸಿನ ಮಹಿಳೆಯರು ದೇವಸ್ಥಾನದ ಆವರಣಕ್ಕೆ ಭೇಟಿ ನೀಡಲು ಅವಕಾಶವಿರಲಿಲ್ಲ. ಋತುಮತಿಯಾಗುವ ವಯಸ್ಸಿನ ಹೆಣ್ಣುಮಕ್ಕಳು ದೇವಾಲಯದ ಆವರಣಕ್ಕೆ ಪ್ರವೇಶಿಸಿದರೆ ಮಂದಿರದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂಬುದು ದೇವಾಲಯದ ಆಡಳಿತ ಮಂಡಳಿಯ ವಾದವಾಗಿತ್ತು. ಆದರೆ 2018 ರ ಸೆಪ್ಟೆಂಬರ್ ನಲ್ಲಿ ಈ ನಿಷೇಧವನ್ನು ತೆರವುಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ಮಹಿಳೆಯರು ದೇವಾಲಯ ಪ್ರವೇಶಿಸಬಹುದು ಎಂದತ್ತು.

English summary
Supreme Court Refers Sabarimal Case tO larger Bench,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X