ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿರ್ಭಯಾ ಪ್ರಕರಣ: ಪವನ್ ಗುಪ್ತಾ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

|
Google Oneindia Kannada News

ನವದೆಹಲಿ, ಮಾರ್ಚ್ 2: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಪವನ್ ಗುಪ್ತಾ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರದಂದು ತಿರಸ್ಕರಿಸಿದೆ.

ಮಾರ್ಚ್ 3ರಂದು ಗಲ್ಲು ಶಿಕ್ಷೆ ಜಾರಿಗೆ ನೀಡಿರುವ ಡೆತ್ ವಾರೆಂಟ್‌ಗೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದ, ಕ್ಯುರೆಟೀವ್ ಅರ್ಜಿಯಲ್ಲಿ ಮರಣ ದಂಡನೆ ಶಿಕ್ಷೆಯನ್ನು ಜೀವಾವಧಿಯಾಗಿ ಬದಲಾಯಿಸಬೇಕು ಎಂದು ಉಲ್ಲೇಖಿಸಿದ್ದಾನೆ.

ನಿರ್ಭಯ ಪ್ರಕರಣದ ಇತರ ಇಬ್ಬರು ಅಪರಾಧಿಗಳಾದ ಮುಕೇಶ್ ಮತ್ತು ವಿನಯ್ ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. ನ್ಯಾಯಾಲಯ ಈ ಅರ್ಜಿಗಳನ್ನು ತಿರಸ್ಕರಿಸಿತ್ತು.

ನಿರ್ಭಯ ಪ್ರಕರಣ; ಅಪರಾಧಿಯಿಂದ ಹೊಸ ಬೇಡಿಕೆನಿರ್ಭಯ ಪ್ರಕರಣ; ಅಪರಾಧಿಯಿಂದ ಹೊಸ ಬೇಡಿಕೆ

ಪ್ರಕರಣದ ಮತ್ತೊಬ್ಬ ಅಪರಾಧಿ ಅಕ್ಷಯ್ ಕುಮಾರ್ ಸಿಂಗ್ ರಾಷ್ಟ್ರಪತಿಗಳ ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದನ್ನು ಇನ್ನೂ ಸುಪ್ರೀಂನಲ್ಲಿ ಪ್ರಶ್ನೆ ಮಾಡಿಲ್ಲ. ರಾಷ್ಟ್ರಪತಿಗಳ ಮುಂದೆ 2ನೇ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾನೆ.

2012ರಂದು ನಡೆದ ಘೋರ ದುರಂತ

2012ರಂದು ನಡೆದ ಘೋರ ದುರಂತ

23 ವರ್ಷ ವಯಸ್ಸಿನ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಮೇಲೆ 2012ರ ಡಿಸೆಂಬರ್ 16 ರಾತ್ರಿ ವೇಳೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಅತಿ ಕ್ರೂರವಾಗಿ ನಡೆದ ಈ ಅತ್ಯಾಚಾರದಿಂದ ನಿತ್ರಾಣವಾಗಿ ರಸ್ತೆಯಲ್ಲಿ ಬಿದ್ದಿದ್ದ ನಿರ್ಭಯಾಗೆ ಹೆಚ್ಚಿನ ವೈದ್ಯಕೀಯ ನೆರವು ಸಿಕ್ಕಿ, ಸಿಂಗಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಡಿಸೆಂಬರ್ 29, 2012ರಂದು ಆಕೆ ಕೊನೆಯುಸಿರೆಳೆದಿದ್ದರು.

6 ಮಂದಿ ಬಂಧನವಾಗಿತ್ತು

6 ಮಂದಿ ಬಂಧನವಾಗಿತ್ತು

ಈ ಪ್ರಕರಣದಲ್ಲಿ ಒಟ್ಟು 6 ಮಂದಿಯನ್ನು ಆರೋಪಿಯನ್ನು ಗುರುತಿಸಿ ಬಂಧಿಸಲಾಗಿತ್ತು. ಆರೋಪಿಗಳ ಪೈಕಿ ಒಬ್ಬ ಜೈಲಿನಲ್ಲೇ ಆತ್ಯಹತ್ಯೆ ಮಾಡಿಕೊಂಡಿದ್ದಾನೆ. ಮತ್ತೊಬ್ಬ ಬಾಲಾಪರಾಧಿಯಾಗಿ ಮೂರು ವರ್ಷಗಳ ಕಾಲ ಶಿಕ್ಷೆ ಅನುಭವಿಸಿದ್ದಾನೆ. ಈಗ ಮಿಕ್ಕ ನಾಲ್ವರು ಅಪರಾಧಿಗಳಿಗೆ ನೇಣು ಕುಣಿಕೆ ಸಿದ್ಧವಾಗಬೇಕಿದೆ. ದೆಹಲಿ ಹೈಕೋರ್ಟಿನ ಡೆತ್ ವಾರೆಂಟ್ ಆಧಾರದ ಮೇಲೆ ತಿಹಾರ್ ಜೈಲಿನಿಂದ ಕರೆ ಬಂದಾಗ ಪವನ್ ಅಲ್ಲಿಗೆ ತೆರಳಲಿದ್ದಾರೆ" ಎಂದು ಮೀರತ್ ಜೈಲಿನ ಎಸ್ಪಿ ವಿ.ಪಿ ಪಾಂಡೆ ಪ್ರತಿಕ್ರಿಯಿಸಿದ್ದಾರೆ.

ನಿರ್ಭಯ ಪ್ರಕರಣ; ಗಲ್ಲು ತಪ್ಪಿಸಿಕೊಳ್ಳಲು ಅಪರಾಧಿಗಳ ಪ್ರಯತ್ನನಿರ್ಭಯ ಪ್ರಕರಣ; ಗಲ್ಲು ತಪ್ಪಿಸಿಕೊಳ್ಳಲು ಅಪರಾಧಿಗಳ ಪ್ರಯತ್ನ

2019ರ ಡಿಸೆಂಬರ್ ತಿಂಗಳಲ್ಲೇ ನೇಣು ಶಿಕ್ಷೆ ಸಿದ್ಧವಾಗಿತ್ತು

2019ರ ಡಿಸೆಂಬರ್ ತಿಂಗಳಲ್ಲೇ ನೇಣು ಶಿಕ್ಷೆ ಸಿದ್ಧವಾಗಿತ್ತು

ಡಿಸೆಂಬರ್ ತಿಂಗಳಲ್ಲಿ ಪವನ್ ಜಲ್ಲಾದ್ ಗೆ ಸಿದ್ಧರಾಗಿರುವಂತೆ ತಿಹಾರ್ ಜೈಲಿನಿಂದ ಸೂಚನೆ ಬಂದಿತ್ತು. ಆದರೆ, ಅಪರಾಧಿಗಳು ಒಬ್ಬೊಬ್ಬರಾಗಿ ಕ್ಷಮಾದಾನ ಅರ್ಜಿ ಸಲ್ಲಿಸುತ್ತಿದ್ದಾರೆ. ದೆಹಲಿ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ವಿನಯ್ ಶರ್ಮಾ ಈಗಾಗಲೇ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾನೆ. ದೆಹಲಿ ಸರ್ಕಾರ ಮತ್ತು ಗೃಹ ಸಚಿವಾಲಯವು ಕಳುಹಿಸುವ ಶಿಫಾರಸ್ಸಿನ ನಂತರ ರಾಷ್ಟ್ರಪತಿ ತಮ್ಮ ತೀರ್ಮಾನ ತಿಳಿಸಲಿದ್ದಾರೆ. ಒಂದು ವೇಳೆ ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದು, ಪ್ರಶ್ನಿಸಿ ವಿನಯ್ ಶರ್ಮಾ ಮತ್ತೊಮ್ಮೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸುವ ಅವಕಾಶವಿತ್ತು. ವಿನಯ್ ಶರ್ಮಾ ಹಾಗೂ ಪವನ್ ಗುಪ್ತ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿತ್ತು.

ಮಾರ್ಚ್ 03ರಂದು ಗಲ್ಲು ಸಾಧ್ಯತೆ ಇಲ್ಲ?

ಮಾರ್ಚ್ 03ರಂದು ಗಲ್ಲು ಸಾಧ್ಯತೆ ಇಲ್ಲ?

ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ದೋಷಿಗಳಿಗೆ ಮಾರ್ಚ್.03ರಂದು ಗಲ್ಲುಶಿಕ್ಷೆ ವಿಧಿಸುವುದು ಅಮಾಮಾನವಾಗಿದೆ. ಏಕೆಂದರೆ ದೋಷಿಗಳಿಗೆ ಪ್ರತ್ಯೇಕವಾಗಿ ಗಲ್ಲುಶಿಕ್ಷೆಗೆ ಗುರಿಪಡಿಸಲು ನಿರ್ದೇಶನ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮಾರ್ಚ್.05ಕ್ಕೆ ಮುಂದೂಡಿದೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಆರ್.ಬಾನುಮತಿ ನೇತೃತ್ವದ ನ್ಯಾ.ಅಶೋಕ್ ಭೂಷಣ್, ನ್ಯಾ. ನವಿನ್ ಸಿನ್ಹಾರನ್ನೊಳಗೊಂಡ ತ್ರಿಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿತು. ಈಗಾಗಲೇ ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ ನಾಲ್ವರು ದೋಷಿಗಳಿಗೆ ಮಾರ್ಚ್.03ರಂದು ಗಲ್ಲುಶಿಕ್ಷೆ ವಿಧಿಸುವಂತೆ ಡೆತ್ ವಾರಂಟ್ ಜಾರಿಗೊಳಿಸಿತ್ತು.

English summary
The Supreme Court has rejected the curative petition filed by Delhi gangrape convict Pawan Gupta. The 25-year-old’s curative petition pleads his death sentence be commuted to life imprisonment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X