ಸೆಕ್ಷನ್ 377 ಅಸಿಂಧು: ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

ನವದೆಹಲಿ, ಜುಲೈ 17: ಸಲಿಂಗಕಾಮವನ್ನು ಅಪರಾಧ ಎಂದು ಪರಿಗಣಿಸುವ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377ಅನ್ನು ರದ್ದುಗೊಳಿಸುವ ಸಂಬಂಧದ ತನ್ನ ಆದೇಶವನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ.

ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ, ಅರ್ಜಿಯ ತೀರ್ಪನ್ನು ಮಂಗಳವಾರ ಮುಂದೂಡಿತು.

ಸಲಿಂಗಕಾಮವು ಅಪರಾಧ ಎಂದು ಹೇಳುವ ಸೆಕ್ಷನ್ 377ಅನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳು, ವ್ಯಕ್ತಿಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

supreme court reserves order on ipc section 377 lgbt

ಸೆಕ್ಷನ್ 377ರ ರದ್ದತಿ ವಿಚಾರವನ್ನು ನ್ಯಾಯಾಲಯದ ವಿವೇಚನೆಗೆ ಬಿಡುವುದಾಗಿ ಕೇಂದ್ರ ಸರ್ಕಾರ ಹೇಳಿತ್ತು. ಆದರೆ, ಸಲಿಂಗ ವಿವಾಹ ಮತ್ತು ಕೆಲವು ಹಕ್ಕುಗಳ ವಿಚಾರದಲ್ಲಿ ಗೊಂದಲ ಉಂಟಾಗಬಹುದು ಎಂಬ ಕಳವಳವನ್ನು ಅದು ವ್ಯಕ್ತಪಡಿಸಿತ್ತು.

ಇದಕ್ಕೆ, ಈ ವಿಚಾರಣೆಯು ಸೆಕ್ಷನ್ 377ರ ಅಸಿಂಧುತ್ವದ ಕುರಿತು ಮಾತ್ರ ನಡೆಯಲಿದೆ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿತ್ತು.

ಸೆಕ್ಷನ್ 377ರ ಅಡಿ ಸಲಿಂಗ ಕಾಮವನ್ನು ಅಪರಾಧ ಎಂದು ಪರಿಗಣಿಸುವುದು ಥರವಲ್ಲ ಎಂದು ದೆಹಲಿ ಹೈಕೋರ್ಟ್ 2009ರಲ್ಲಿ ತೀರ್ಪು ನೀಡಿತ್ತು.

ಆದರೆ,ಈ ತೀರ್ಪನ್ನು 2013ರಲ್ಲಿ ಸುಪ್ರೀಂಕೋರ್ಟ್ ವಜಾಗೊಳಿಸಿತ್ತು. ಆ ತೀರ್ಪನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿ ಅನೇಕ ಅರ್ಜಿಗಳು ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠದ ಮುಂದೆ ವಿಚಾರಣೆಗೆ ಬಂದಿದ್ದವು.

ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ, ರೋಹಿಂಟನ್ ಫಾಲಿ ನಾರಿಮನ್, ಎ.ಎಂ. ಖಾನ್ವಿಲ್ಕರ್ ಮತ್ತು ಇಂದು ಮಲ್ಹೋತ್ರಾ ನ್ಯಾಯಪೀಠದಲ್ಲಿ ಇದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+