
Hijab Verdict: ಸುಪ್ರೀಂಕೋರ್ಟ್ ಹಿಜಾಬ್ ತೀರ್ಪು: ಸಿಜೆಐ ಪೀಠಕ್ಕೆ ವರ್ಗಾವಣೆ
ನವದೆಹಲಿ, ಅ.13: ಹಿಜಾಬ್ ವಿವಾದಕ್ಕೆ ಸಂಬಂಧಪಟ್ಟಂತೆ ಇಬ್ಬರು ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು ಬಂದಿದೆ. ಒಬ್ಬ ನ್ಯಾಯಮೂರ್ತಿ ಮುಸ್ಲಿಂ ಯುವತಿಯರು ಸಲ್ಲಿಸಿದ ಮೇಲ್ಮನವಿಯನ್ನು ವಜಾ ಮಾಡಿದ್ದಾರೆ. ಮತ್ತೊಬ್ಬರು ಹೈಕೋರ್ಟ್ ತೀರ್ಪನ್ನು ರದ್ದು ಮಾಡಿದ್ದಾರೆ. ಇಬ್ಬರು ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು ವ್ಯಕ್ತವಾಗಿದೆ. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರು ವಿಭಿನ್ನ ತೀರ್ಪು ನೀಡಿದ್ದಾರೆ.
ನ್ಯಾಯಮೂರ್ತಿ ಹೇಮಂತ್ ಗುಪ್ತಾ ಮುಸ್ಲಿಂ ಯುವತಿಯರ ಸಲ್ಲಿಸಿದ ಮೇಲ್ಮನವಿಯನ್ನು ವಜಾ ಮಾಡಿದ್ದಾರೆ. ಇನ್ನೂ ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರು ಹಿಜಾಬ್ ಮನವಿಯನ್ನು ಎತ್ತಿ ಹಿಡಿದಿದ್ದಾರೆ. ಹೀಗಾಗಿ ಹಿಜಾಬ್ ವಿಚಾರಣೆಯನ್ನು ಸಿಜೆಐ ಪೀಠಕ್ಕೆ ವರ್ಗಾಯಿಸಲಾಗಿದೆ.
Breaking: ಸುಪ್ರೀಂಕೋರ್ಟ್ ಹಿಜಾಬ್ ವಿವಾದ ತೀರ್ಪು: ವಿಸ್ತೃತ ಪೀಠಕ್ಕೆ ವರ್ಗಾವಣೆ
ನ್ಯಾಯಮೂರ್ತಿ ಹೇಮಂತ್ ಗುಪ್ತಾ, ಉಡುಪಿ ಕಾಲೇಜಿನ ಮುಸ್ಲಿಂ ಯುವತಿಯರು ಸಲ್ಲಿಸಿದ ಮನವಿಯನ್ನು ಸರಿಯಲ್ಲ ಎಂದಿದ್ದಾರೆ. ಮತ್ತೊಬ್ಬ ನ್ಯಾಯಮೂರ್ತಿ ಸುಧಾಂಶು ಧುಲಿಯಾ ಹೈಕೋರ್ಟ್ ತೀರ್ಪುಯನ್ನು ರದ್ದುಗೊಳಿಸಿದ್ದಾರೆ. ಇದರಿಂದ ಹಿಜಾಬ್ ಹಾಕಬೇಕಾ? ಹಿಜಾಬ್ ಹಾಕಬಾರದಾ ಎನ್ನುವ ಬಗ್ಗೆ ವಿಸ್ತೃತ ಪೀಠಕ್ಕೆ ವಿಚಾರಣೆ ವರ್ಗಾವಣೆಯಾಗಿದೆ.
ಇದರಿಂದ ಕರ್ನಾಟಕ ಹೈಕೋರ್ಟ್ ಕೊಟ್ಟ ತೀರ್ಪು ಯಥಾಸ್ಥಿತಿ ಇರುತ್ತದೆ. ಇದರಿಂದ ಹಿಜಾಬ್ ಧರಿಸಿಕೊಂಡು ಶಾಲಾ ಕೊಠಡಿಗೆ ಪ್ರವೇಶ ಮಾಡುವಂತಿಲ್ಲ. ಸಿಜೆಐ ತೀರ್ಪು ಬರುವವರೆಗೂ ಹೈಕೋರ್ಟ್ ತೀರ್ಪು ಯಥಾಸ್ಥಿತಿಯಲ್ಲಿರುತ್ತದೆ.