ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾಯ್ದೆಗೆ ಸುಪ್ರೀಂ ತಡೆ

|
Google Oneindia Kannada News

ನವದೆಹಲಿ, ಜುಲೈ 11 : ಕೇಂದ್ರ ಸರ್ಕಾರ ಹೊರಡಿಸಿದ್ದ ಗೋಹತ್ಯೆ ನಿಷೇಧ ಕಾನೂನಿಗೆ ಸುಪ್ರೀಂ ಕೋರ್ಟ್‌ ಮಂಗಳವಾರ ತಡೆ ನೀಡಿದ್ದು, ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೇ 26ರಂದು ದೇಶಾದ್ಯಂತ ಗೋಹತ್ಯೆಯನ್ನು ನಿಷೇಧಿಸಿತ್ತು. ಈ ಸಂಬಂಧ ವಿವರಣೆ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಅಂತೆ ಕೇಂದ್ರ ಸರ್ಕಾರ ಕಾನೂನನ್ನು ಪರಿಷ್ಕರಿಸಿ ಜಾರಿಗೆ ತರಲಾಗುವುದು ಎಂದು ಹೇಳಿತ್ತು. ಕೇಂದ್ರ ಸರ್ಕಾರದ ಈ ಹೇಳಿಕೆಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಗೋ ಹತ್ಯೆ ನಿಷೇಧ ಅಧಿಸೂಚನೆ ವಿರೋಧಿಸಿ ಮೋದಿಗೆ ಸಿದ್ದರಾಮಯ್ಯ ಪತ್ರಗೋ ಹತ್ಯೆ ನಿಷೇಧ ಅಧಿಸೂಚನೆ ವಿರೋಧಿಸಿ ಮೋದಿಗೆ ಸಿದ್ದರಾಮಯ್ಯ ಪತ್ರ

Supreme Court stays Centre's notification on sale of cattle for slaughter

ಜೀವನೋಪಾಯವನ್ನು ಅನಿಶ್ಚಿತತೆಗೆ ಒಳಪಡಿಸಲಾಗುವುದಿಲ್ಲ ಎಂದು ಹೇಳಿರುವ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನಿಗೆ ತಡೆ ನೀಡಿದೆ.

ದೇಶಾದ್ಯಂತ ಗೋಹತ್ಯೆ ನಿಷೇಧಿಸಿ ಹೊರಡಿಸಿದ್ದ ಆದೇಶಕ್ಕೆ ಈ ಹಿಂದೆ ಮದ್ರಾಸ್ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿತ್ತು. ಈ ಆದೇಶವನ್ನೇ ಎತ್ತಿ ಹಿಡಿದಿರುವ ಸುಪ್ರೀಂಕೋರ್ಟ್ ಇದು ಆದೇಶ ದೇಶಾದ್ಯಂತ ಅನ್ವಯಿಸಲಿದೆ ಎಂದು ಹೇಳಿದೆ.

ಮದ್ರಾಸ್ ಹೈಕೋರ್ಟ್ ನ ಮಧುರೈ ಪೀಠ, ಗೋಹತ್ಯೆ ನಿಷೇಧ ಆದೇಶಕ್ಕೆ ನಾಲ್ಕು ವಾರಗಳ ಕಾಲ ತಡೆಯಾಜ್ಞೆ ವಿಧಿಸಿತ್ತು.

English summary
The Supreme Court on Tuesday ordered a nationwide stay on Central government’s new rules that had banned the trade of cattle for slaughter.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X