Get Updates
Get notified of breaking news, exclusive insights, and must-see stories!

ಕಾವೇರಿ ನದಿ ನೀರು ಹಂಚಿಕೆ ಕುರಿತು ವಿಚಾರಣೆ: ಇಂದೇ ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ

ನವದೆಹಲಿ, ಆಗಸ್ಟ್‌ 21: ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ಹೊಸ ನಿರ್ದೇಶನಗಳನ್ನು ನೀಡಬೇಕೆಂದು ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರು ಹಂಚಿಕೆ ವಿವಾದದ ವಿಚಾರಣೆಗೆ ಪ್ರತ್ಯೇಕ ಪೀಠವನ್ನು ರಚಿಸಲು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಒಪ್ಪಿಗೆ ನೀಡಿದ್ದಾರೆ.

ಸಿಜೆಐ ಡಿವೈ ಚಂದ್ರಚೂಡ್ ಅವರು ತಮಿಳುನಾಡಿನ ಅರ್ಜಿಯ ವಿಚಾರಣೆಗೆ ಇಂದೇ ಪೀಠವನ್ನು ರಚಿಸಲು ಸೂಚನೆ ನೀಡಿದ್ದಾರೆ.

Supreme Court to constitute bench to hear Cauvery River water-sharing dispute

ಬೆಳೆದು ನಿಂತಿರುವ ಬೆಳೆಗಳಿಗೆ ಪ್ರತಿದಿನ 24,000 ಕ್ಯೂಸೆಕ್ ಕಾವೇರಿ ನೀರು ಬಿಡಬೇಕು. ಈ ಕುರಿತು ಕರ್ನಾಟಕಕ್ಕೆ ನಿರ್ದೇಶನ ನೀಡಬೇಕೆಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು. ಈ ವಿಷಯವನ್ನು ಹಿರಿಯ ವಕೀಲ ಮುಕುಲ್ ರೋಹಟಗಿ ಪ್ರಸ್ತಾಪಿಸಿದರು.

ಈ ಮಧ್ಯೆ, ತಮಿಳುನಾಡಿಗೆ ಕಾವೇರಿ ನೀರಿನ ಹಂಚಿಕೆ ಕುರಿತು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿಯನ್ನು ಸಲ್ಲಿಸುವ ಸಾಧ್ಯತೆಯಿದೆ.

ಕಾಂಗ್ರೆಸ್ ನೇತೃತ್ವದ ಸರ್ಕಾರ ಕಾವೇರಿ ನದಿ ನೀರಿನ ಸಮಸ್ಯೆ ಕುರಿತು ಚರ್ಚಿಸಲು ಬುಧವಾರ ಸರ್ವಪಕ್ಷ ಸಭೆ ಕರೆದಿದೆ.

ಈ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿರುವ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್, 'ಕಾವೇರಿ ಮತ್ತು ಮಹದಾಯಿ ನದಿ ವಿವಾದಗಳ ಕುರಿತು ಚರ್ಚಿಸಲು ನಾವು ಸರ್ವಪಕ್ಷ ಸಭೆಯನ್ನು ಕರೆದಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಭೆ ನಡೆಯಲಿದೆ. ಕೆಲವು ಸಂಸದರಿಗೂ ಆಹ್ವಾನ ನೀಡಲಾಗಿದೆ' ಎಂದು ಅವರು ಹೇಳಿದರು.

ಕರ್ನಾಟಕದ ರೈತರು ಸಂಕಷ್ಟದಲ್ಲಿರುವುದರಿಂದ ರಾಜ್ಯವನ್ನು ರಕ್ಷಿಸುವುದು ನಮ್ಮ ಕರ್ತವ್ಯ. ಇಲ್ಲಿ ಉತ್ತಮ ಮಳೆಯಾಗಿಲ್ಲ ಎಂದು ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

15 ದಿನಗಳ ಕಾಲ ಪ್ರತಿದಿನ 10,000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಇದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+