ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಲಿಂಗ ಸಂಬಂಧ ಅಪರಾಧ: ಸೆಕ್ಷನ್ 377ರ ವಿರುದ್ಧದ ಅರ್ಜಿ ವಿಚಾರಣೆ ಇಂದು

|
Google Oneindia Kannada News

ನವದೆಹಲಿ, ಜುಲೈ 10: ಸಲಿಂಗ ಸಂಬಂಧವನ್ನು ಅಪರಾಧ ಎಂದು ಪರಿಗಣಿಸಿರುವ ಭಾರತೀಯ ನೀತಿ ಸಂಹಿತೆಯ ಸೆಕ್ಷನ್ 377ರ ವಿರುದ್ಧ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠ ಮಂಗಳವಾರ ನಡೆಸಲಿದೆ.

ಐಪಿಸಿಯ ಸೆಕ್ಷನ್ 377ಅನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಭಾರತೀಯ ತಂತ್ರಜ್ಞಾನ ಸಂಸ್ಥೆಯ ಎಲ್‌ಜಿಬಿಟಿ ಸಂಘವು (ಸಲಿಂಗಿಗಳ ಸಂಘಟನೆ) ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂಕೋರ್ಟ್ ಮೇ ತಿಂಗಳಿನಲ್ಲಿ ನಿರ್ಧರಿಸಿತ್ತು.

'ನಾವು ಮನುಷ್ಯರು, ನಮ್ಮನ್ನು ಘನತೆಯಿಂದ ಬದುಕಲು ಬಿಡಿ''ನಾವು ಮನುಷ್ಯರು, ನಮ್ಮನ್ನು ಘನತೆಯಿಂದ ಬದುಕಲು ಬಿಡಿ'

ಹೋಟೆಲ್ ಉದ್ಯಮಿ ಕೇಶವ್ ಸೂರಿ ಅವರು ಸೆಕ್ಷನ್ 377ರ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಕೇವಲ ಆರು ದಿನಗಳ ಬಳಿಕ ಹಮ್‌ಸಫರ್ ಟ್ರಸ್ಟ್‌ನ ಅಶೋಕ್ ರಾವ್ ಕವಿ ಮತ್ತು ಆರಿಫ್ ಜಾಫರ್ ಏಪ್ರಿಲ್ 27ರಂದು ಸೆಕ್ಷನ್ ರದ್ದತಿಗೆ ಒತ್ತಾಯಿಸಿ ಅರ್ಜಿ ಸಲ್ಲಿಸಿದ್ದರು.

Supreme court to hear pleas against section 377

ದೇಶದ ಉದ್ಯನಿಯೊಬ್ಬರು ಕಳೆದ ತಿಂಗಳು ಪ್ಯಾರಿಸ್‌ನಲ್ಲಿ ತಮ್ಮ ಪುರುಷ ಸಂಗಾತಿ ಸಿರಿಲ್ ಫೀಲ್ಲೆಬೊಯಿಸ್ ಎಂಬುವವರನ್ನು ಮದುವೆಯಾಗಿದ್ದರು.

ಇದಕ್ಕೂ ಮುನ್ನ 2009ರಲ್ಲಿ ದೆಹಲಿ ಹೈಕೋರ್ಟ್ ಸೆಕ್ಷನ್ 377ರ ಅಡಿ ಸಲಿಂಗ ಸಂಬಂಧವು ಅಪರಾಧ ಅಲ್ಲ ಎಂದು ಹೇಳಿತ್ತು. ಆದರೆ, ಈ ಆದೇಶವನ್ನು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು.

ಐಪಿಸಿ ಸೆಕ್ಷನ್ 377ರ ಪ್ರಕಾರ ನಿಸರ್ಗಿದ ನಿಯಮಕ್ಕೆ ವಿರುದ್ಧವಾಗಿರುವ ಕಾರಣ ಒಂದೇ ಲಿಂಗದ ವ್ಯಕ್ತಿಗಳ ನಡುವೆ ಒಪ್ಪಿತ ಲೈಂಗಿಕ ಸಂಬಂಧವನ್ನು ಅಸ್ವಾಭಾವಿಕ ಅಪರಾಧ ಎಂದು ಪರಿಗಣಿಸಲಾಗಿದೆ. ಇದಕ್ಕೆ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶವಿದೆ.

English summary
Supreme Court will hear petitions on scrapping of Section 377 of IPC on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X