ವ್ಯಾಪಂ ಹಗರಣ ಸಿಬಿಐ ತನಿಖೆಗೆ, ಸುಪ್ರೀಂಕೋರ್ಟ್ ಆದೇಶ
ನವದೆಹಲಿ, ಜುಲೈ 09: ಮಧ್ಯಪ್ರದೇಶ ವೃತ್ತಿ ಪರೀಕ್ಷಾ ಮಂಡಳಿ (ಎಂಪಿಪಿಇಬಿ) ಹಗರಣ (ವ್ಯಾಪಂ ಹಗರಣ) ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಿ ಸುಪ್ರೀಂಕೋರ್ಟ್ ನ್ಯಾಯಪೀಠ ಗುರುವಾರ ಮಹತ್ವದ ಆದೇಶ ಹೊರಡಿಸಿದೆ.
ವ್ಯಾಪಂಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂಬುದಾಗಿ ಮಧ್ಯಪ್ರದೇಶ ಸರ್ಕಾರ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎಚ್.ಎಲ್ ದತ್ತು ಅವರಿದ್ದ ತ್ರಿಸದಸ್ಯ ನ್ಯಾಯಪೀಠ ಮೇಲ್ಕಂಡ ಅದೇಶ ಹೊರಡಿಸಿದೆ.

ಈ ಪ್ರಕರಣದ ವಿಚಾರಣೆಗಾಗಿ 2,000ಕ್ಕೂ ಅಧಿಕ ಮಂದಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ. ವಿಪಕ್ಷಗಳ ಒತ್ತಡಕ್ಕೆ ಮಣಿದು ಸಿಬಿಐ ತನಿಖೆಗೆ ವಹಿಸಲು ಸಿದ್ಧ ಎಂದು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಘೋಷಿಸಿದ್ದಾರೆ. ಅದರೆ, ಯಾವುದೂ ಕಾರ್ಯರೂಪಕ್ಕೆ ಬಂದಿರಲಿಲ್ಲ. ಈ ಬಗ್ಗೆ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಸೇರಿದಂತೆ ಐವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿದ್ದರು.
SC transfers to CBI the Vyapam scam case and the matter of deaths of various persons having links with it.
— Press Trust of India (@PTI_News) July 9, 2015 ವ್ಯಾಪಂ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವ ಕಪಿಲ್ ಸಿಬಾಲ್ ಅವರು ವಾದ ಮಂಡಿಸಿ, ಮಧ್ಯಪ್ರದೇಶ ರಾಜ್ಯಪಾಲ ರಾಮ್ ನರೇಶ್ ಅವರನ್ನು ಪದಚ್ಯುತಿಗೊಳಿಸಬೇಕು ಎಂದು ಮನವಿ ಮಾಡಿಕೊಂಡರು. ನರೇಶ್ ಅವರ ವಿರುದ್ಧ ಹಾಕಲಾಗಿದ್ದ ಎಫ್ ಐಆರ್ ರದ್ದುಪಡಿಸಿದ ಹೈಕೋರ್ಟ್ ಕ್ರಮ ಸರಿಯಲ್ಲ ಎಂದರು.
All #VyapamScam cases transferred to CBI after Attorney General tells court that CBI can investigate this case
— ANI (@ANI_news) July 9, 2015 ಈ ವಾದವನ್ನು ಪುರಸ್ಕರಿಸಿದ ಸುಪ್ರೀಂಕೋರ್ಟ್, ರಾಜ್ಯಪಾಲ ರಾಮ್ ನರೇಶ್ ಯಾದವ್ ಅವರಿಗೆ ನೋಟಿಸ್ ಜಾರಿಗೊಳಿಸಿದೆ. ರಾಮ್ ನರೇಶ್ ಅವರು ವ್ಯಾಪಂ ಹಗರಣದಲ್ಲಿ ಭಾಗಿಯಾಗಿದ್ದು ಐವರು ಅಭ್ಯರ್ಥಿಗಳ ನೇಮಕಾತಿಗೆ ಶಿಫಾರಸು ಮಾಡಿದ್ದರು ಎಂಬ ಆರೋಪವಿದೆ.












Click it and Unblock the Notifications