ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅನುಮತಿ: ಸುಪ್ರೀಂನಿಂದ ಐತಿಹಾಸಿಕ ತೀರ್ಪು
ನವದೆಹಲಿ, ಸೆಪ್ಟೆಂಬರ್ 28: ಕೇರಳದ ಪ್ರಸಿದ್ಧ ದೇವಾಲಯವಾದ ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿ, ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಅಕ್ಟೋಬರ್ 2 ರಂದು ನಿವೃತ್ತರಾಗುತ್ತಿರುವ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ನೀಡಿದ ಮಹತ್ವದ ತೀರ್ಪುಗಳಲ್ಲಿ ಇದೂ ಒಂದಾಗಲಿದೆ.
ದೇವಸ್ಥಾನದ ಆಡಳಿತ ಮಂಡಳಿಯ ನಿಯಮಾವಳಿ ಪ್ರಕಾರ 10ರಿಂದ 50 ವರ್ಷ ವಯಸ್ಸಿನ ಮಹಿಳೆಯರು ದೇವಸ್ಥಾನದ ಆವರಣಕ್ಕೆ ಭೇಟಿ ನೀಡಲು ಅವಕಾಶವಿರಲಿಲ್ಲ. ಋತುಮತಿಯಾಗುವ ವಯಸ್ಸಿನ ಹೆಣ್ಣುಮಕ್ಕಳು ದೇವಾಲಯದ ಆವರಣಕ್ಕೆ ಪ್ರವೇಶಿಸಿದರೆ ಮಂದಿರದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂಬುದು ದೇವಾಲಯದ ಆಡಳಿತ ಮಂಡಳಿಯ ವಾದವಾಗಿತ್ತು.

ಆದರೆ ಇದರಿಂದ ಮಹಿಳೆಯರ ಧಾರ್ಮಿಕ ಸ್ವಾತಂತ್ರ್ಯವನ್ನು ಕಿತ್ತುಕೊಂಡಂತಾಗುತ್ತದೆ ಎಂಬ ದೂರು ಕೇಳಿಬಂದ ಹಿನ್ನೆಲೆಯಲ್ಲಿ ವಿವಾದ ಎದ್ದಿತ್ತು.
ಧಾರ್ಮಿಕ ಆಚರಣೆಗಳನ್ನು ಸಮಾನತೆಯ ಹಕ್ಕಿನ ಆಧಾರದಮೇಲೆ ನಿರ್ಧರಿಸುವುದಕ್ಕಾಗುವುದಿಲ್ಲ, ಅದು ಭಕ್ತರಿಗೆ ಬಿಟ್ಟಿದ್ದು. ಅತ್ಯಗತ್ಯ ಧಾರ್ಮಿಕ ಆಚರಣೆಗಳನ್ನು ಕೋರ್ಟು ನಿರ್ಧರಿಸುವುದು ಸರಿಯಲ್ಲ- ನ್ಯಾ.ಇಂದು ಮಲ್ಹೋತ್ರಾ, ಪಂಚ ಸದಸ್ಯ ಪೀಠದಲ್ಲಿದ್ದ ಏಕೈಕ ಮಹಿಳಾ ನ್ಯಾಯಮೂರ್ತಿ
ನಾವು ಕೆಲವು ಧಾರ್ಮಿಕ ಮುಖಂಡರೊಂದಿಗೆ ಚರ್ಚೆ ನಡೆಸಿ, ಸುಪ್ರೀಂ ಕೋರ್ಟ್ ತೀರ್ಪನ್ನು ಮರುಪರಿಶೀಲಿಸುವಂತೆ ಅರ್ಜಿ ಸಲ್ಲಿಸುತ್ತೇವೆ-ಎ.ಪದ್ಮಕುಮಾರ್, ಶಬರಿಮಲೆ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ
ನನಗೆ ತುಂಬಾ ಸಂತೋಷವಾಗಿದೆ. ನನಗೆ ನ್ಯಾಯಾಂಗ, ಈ ದೇಶದ ಕಾನೂನು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಮೇಲೆ ಸಾಕಷ್ಟು ಗೌರವವಿದೆ. ಈ ತೀರ್ಪು ಸಾಕಷ್ಟು ಸಂತಸವನ್ನುಂಟುಮಾಡಿದೆ. ಇದು ಮಹಿಳೆಯರ ಹೋರಾಟಕ್ಕೆ ಸಂದ ಗೆಲುವು- ಜಯಮಾಲಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ
ದೇವಾಲಯದ ನಿಯಮಗಳು ಸಂವಿಧಾನ ವಿಧಿ 14 ಮತ್ತು 25 ಅನ್ನು ಉಲ್ಲಂಘಿಸುತ್ತದೆ- ಸುಪ್ರೀಂ ಕೋರ್ಟ್
ದೇವಾಲಯದ ಆಡಳಿತ ಮಂಡಳಿ ಹೇರಿದ ನಿರ್ಬಂಧವನ್ನು ಅತ್ಯಗತ್ಯ ಧಾರ್ಮಿಕ ನಿಯಮ ಎಂದು ಪರಿಗಣಿಸುವುದಕ್ಕಾಗುವುದಿಲ್ಲ - ದೀಪಕ್ ಮಿಶ್ರಾ
ಹತ್ತರಿಂದ ಐವತ್ತು ವರ್ಷ ವಯಸ್ಸಿನ ಮಹಿಳೆಯರನ್ನು ಶಬರಿಮಲೆ ದೇವಾಲಯ ಪ್ರವೇಶದಿಂದ ಹೊರಗಿಟ್ಟಿದ್ದು ಸಂವಿಧಾನದ ತತ್ತ್ವಗಳನ್ನು ಗಾಳಿಗೆ ತೂರಿದಂತೆ- ದೀಪಕ್ ಮಿಶ್ರಾ
ಪೂಜಿಸುವ ಹಕ್ಕು ಎಲ್ಲ ಭಕ್ತರಿಗೂ ಇದೆ. ಅದರಲ್ಲಿ ಯಾವುದೇ ತಾರತಮ್ಯವಿಲ್ಲ- ದೀಪಕ್ ಮಿಶ್ರಾ
ಧಾರ್ಮಿಕವಾಗಿ ತೀರಾ ಸೂಕ್ಷ್ಮ ವಿಚಾರವಾದ ಶಬರಿಮಲೆ ಪ್ರಕರಣದಲ್ಲಿ ತೀರ್ಪು ನೀಡುವಾಗ ಸುಪ್ರೀಂ ಕೋರ್ಟ್ ದೇವಾಲಯದ ಆಡಳಿತ ಮಂಡಳಿಯ ಹೇಳಿಕೆಯನ್ನೂ ಪರಿಗಣಿಸಬೇಕು ಎಂದು ಆಡಳಿತ ಮಂಡಳಿ ಅಭಿಪ್ರಾಯ ವ್ಯಕ್ತಪಡಿಸಿದೆ.
ಪುರುಷ ಮತ್ತು ಮಹಿಳೆ ಇಬ್ಬರಿಗೂ ಸಮಾನ ಧಾರ್ಮಿಕ ಹಕ್ಕಿದೆ. ಅದನ್ನು ನೆರವೇರಿಸಲು ಅವಕಾಶ ನೀಡಬೇಕು, ಇದಕ್ಕಾಗಿ ಕಾನೂನಿನ ಮೊರೆಹೋಗುವ ಅಗತ್ಯವಿಲ್ಲ ಎಂದು ವಿಚಾರಣೆಯ ಸಂದರ್ಭದಲ್ಲಿ ನ್ಯಾ.ಚಂದ್ರಚೂಡ ಹೇಳಿದ್ದರು.
'ದೇವಾಲಯ ಖಾಸಗೀ ಸ್ವತ್ತಲ್ಲ, ಅದು ಸಾರ್ವಜನಿಕ ಆಸ್ತಿ. ನಿಮಗೆ ಬೇಕಾದಂತೆ ನಿಯಮ ರೂಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ' ಎಂದು ಸುಪ್ರೀಂ ಕೋರ್ಟ್ ಕಳೆದ ಜುಲೈ ನಲ್ಲಿ ಖಕಡಕ್ಕಾಗಿ ಹೇಳಿತ್ತು.
ಆದರೆ ದೇವಾಲಯದ ಆಡಳಿತ ಮಂಡಳಿ, 'ತಾನು ತಲತಲಾಂತರಗಳಿಂದ ಈ ನಿಯಮವನ್ನು ಪಾಲಿಸಿಕೊಂಡು ಬರುತ್ತಿದ್ದು, ಇದರಲ್ಲಿ ಬದಲಾವಣೆ ಮಾಡಲು ಸಾಧ್ಯವಿಲ್ಲ' ಎಂದಿತ್ತು.
ಶಬರಿಮಲೆ ಪ್ರಕರಣದ ವಿಚಾರಣೆಯ ಸಮಯದಲ್ಲಿ ವಿವಾದಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರದ ಅಭಿಪ್ರಾಯವನ್ನು ಸುಪ್ರೀಂ ಕೋರ್ಟ್ ಕೇಳಿತ್ತು. ಆದರೆ ಮಹಿಳೆಯರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಡಲು ತನ್ನ ಅಭ್ಯಂತರವೇನೂ ಇಲ್ಲ ಎಂದು ಕೇರಳ ಸರ್ಕಾರ ಹೇಳಿತ್ತು.
ಅಯ್ಯಪ್ಪ ದೇವಾಲಯದೊಳಗೆ ಮಹಿಳೆಯರ ಪ್ರವೇಶವನ್ನು ನಿಷೇಧಿಸಿರುವ ದೇವಸ್ಥಾನದ ಆಡಳಿತ ಮಂಡಳಿಯ ವಿರುದ್ಧ 2006 ರಲ್ಲೇ ಪ್ರಕರಣ ದಾಖಲಿಸಲಾಗಿತ್ತು. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ 2016 ರಲ್ಲಿ ವಿಚಾರಣೆಗೆ ಕೈಗೆತ್ತಿಕೊಂಡಿತ್ತು.
More From
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications