ಗುಜರಾತ್ ಗಲಭೆ ಪ್ರಕರಣದಲ್ಲಿ ಮೋದಿಗೆ ಕ್ಲೀನ್‌ಚಿಟ್: ಜಫ್ರಿ ಅರ್ಜಿ ವಿಚಾರಣೆ ಏ.14ಕ್ಕೆ ನಿಗದಿ
ನವದೆಹಲಿ, ಫೆಬ್ರವರಿ 4: ಗುಜರಾತ್‌ನಲ್ಲಿ 2002ರಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಆಗಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ಕ್ಲೀನ್ ಚಿಟ್ ನೀಡಿರುವ ಎಸ್‌ಐಟಿ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಏಪ್ರಿಲ್ 14ಕ್ಕೆ ನಿಗದಿಗೊಳಿಸಿದೆ.
ಹತ್ಯಾಕಾಂಡದಲ್ಲಿ ಮೃತಪಟ್ಟ ಕಾಂಗ್ರೆಸ್ ಸಂಸದ ಎಹ್ಸಾನ್ ಜಫ್ರಿ ಪತ್ನಿ ಝಾಕಿಯಾ ಜಫ್ರಿ, ಮೋದಿ ಅವರಿಗೆ ಕ್ಲೀನ್ ಟಿಚ್ ನೀಡಿರುವುದನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಈ ಅರ್ಜಿ ವಿಚಾರಣೆಯನ್ನು ಹಲವು ಬಾರಿ ಮುಂದೂಡಲಾಗಿದೆ. ಒಂದಲ್ಲ ಒಂದು ದಿನ ವಿಚಾರಣೆ ನಡೆಸುವುದಾಗಿ ಹೇಳಿದ ಸುಪ್ರೀಂಕೋರ್ಟ್, ಏ. 14ರಂದು ವಿಚಾರಣೆ ನಡೆಸುವುದಾಗಿ ತಿಳಿಸಿತು.
ಅರ್ಜಿಯ ವಿಚಾರಣೆಯನ್ನು ಮುಂದೂಡುವಂತೆ ಮತ್ತು ಹೋಳಿ ರಜೆಯ ಬಳಿಕ ಅದರ ವಿಚಾರಣೆಯನ್ನು ನಿಗದಿಗೊಳಿಸುವಂತೆ ಝಾಕಿಯಾ ಪರ ವಕೀಲರು ಮನವಿ ಮಾಡಿದರು. ಅದನ್ನು ಪುರಸ್ಕರಿಸಿದ ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರನ್ನು ಒಳಗೊಂಡ ನ್ಯಾಯಪೀಠ, ಏಪ್ರಿಲ್‌ಗೆ ಮುಂದೂಡಿತು.

ಒಂದಲ್ಲ ಒಂದು ದಿನ ವಿಚಾರಣೆ ನಡೆಸಬೇಕು
ಝಾಕಿಯಾ ಜಫ್ರಿ ಪರ ಹಾಜರಾಗಿದ್ದ ವಕೀಲೆ ಅಪರ್ಣಾ ಭಟ್, ಈ ವಿಷಯ ಬಹಳ ವಿವಾದಾತ್ಮಕವಾಗಿದೆ ಎಂದು ತಿಳಿಸಿದರು. 'ಈ ಪ್ರಕರಣವನ್ನು ಅನೇಕ ಬಾರಿ ಮುಂದೂಡಲಾಗಿದೆ. ಅದೇನೇ ಇದ್ದರೂ ನಾವು ಒಂದು ದಿನ ಅದನ್ನು ವಿಚಾರಣೆ ನಡೆಸಲೇಬೇಕು. ಒಂದು ದಿನವನ್ನು ನಿಗದಿಮಾಡಿಕೊಂಡು ಅಂದು ನಿಮ್ಮ ಲಭ್ಯತೆಯನ್ನು ಖಾತರಿಪಡಿಸಿಕೊಳ್ಳಿ' ಎಂದು ನ್ಯಾಯಪೀಠ ಸಲಹೆ ನೀಡಿತು.
2002ರ ಫೆ. 27ರಿಂದ ಮೇ ವರೆಗಿನ ಈ ಘಟನೆ ಬೃಹತ್ ಸಂಚಿನದ್ದಾಗಿದೆ. ಹೀಗಾಗಿ ಅರ್ಜಿಯ ಸಂಬಂಧ ನೋಟಿಸ್‌ಗಳನ್ನು ಹೊರಡಿಸಬೇಕಿದೆ ಎಂದು ಅಪರ್ಣಾ ಭಟ್ ಹೇಳಿದರು.

ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ
2002ರ ಫೆ. 28ರಂದು ನಡೆದ ಗುಲ್ಬರ್ಗ್ ಸೊಸೈಟಿ ಹಿಂಸಾಚಾರದಲ್ಲಿ 68 ಮಂದಿ ಮೃತಪಟ್ಟಿದ್ದರು. ಅದರಲ್ಲಿ ಎಹ್ಸಾನ್ ಜಫ್ರಿ ಕೂಡ ಸೇರಿದ್ದರು. ಗೋಧ್ರಾದಲ್ಲಿ ಸಬರಮತಿ ಎಕ್ಸ್‌ಪ್ರೆಸ್ ರೈಲಿನ ಎಸ್-6 ಬೋಗಿಗೆ ಬೆಂಕಿ ಹಚ್ಚಿ 59 ಮಂದಿಯನ್ನು ಕೊಂದ ಘಟನೆಯ ಮರುದಿನವೇ ಉಂಟಾದ ಗಲಭೆಯಲ್ಲಿ ಈ ಹತ್ಯಾಕಾಂಡ ನಡೆದಿತ್ತು.

ಕ್ಲೀನ್ ಚಿಟ್ ನೀಡಿದ್ದ ಎಸ್‌ಐಟಿ
2012ರ ಫೆ. 8ರಂದು ಪ್ರಕರಣದ ಅಂತಿಮ ವರದಿ ಸಲ್ಲಿಸಿದ್ದ ವಿಶೇಷ ತನಿಖಾ ತಂಡ, ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಹಿರಿಯ ಸರ್ಕಾರಿ ಅಧಿಕಾರಿಗಳು ಸೇರಿದಂತೆ ಇತರೆ 63 ಮಂದಿಗೆ ಕ್ಲೀನ್‌ಚಿಟ್ ನೀಡಿತ್ತು. ಅವರ ವಿರುದ್ಧ ಯಾವುದೇ ವಿಚಾರಣೆಗೆ ಅರ್ಹವಾದ ಸಾಕ್ಷ್ಯಗಳು ಇಲ್ಲ ಎಂದು ಪೊಲೀಸರು ಹೇಳಿದ್ದರು.
ಎಸ್‌ಐಟಿ ನಿರ್ಧಾರವನ್ನು ಪ್ರಶ್ನಿಸಿ ಝಾಕಿಯಾ ಜಫ್ರಿ ಗುಜರಾತ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅದನ್ನು ಹೈಕೋರ್ಟ್ 2017ರ ಅಕ್ಟೋಬರ್ 5ರಂದು ತಿರಸ್ಕರಿಸಿತ್ತು. ಆ ಆದೇಶವನ್ನು 2018ರಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಹೆಚ್ಚಿನ ವಿಚಾರಣೆಗೆ ಅವಕಾಶ
2017ರಲ್ಲಿ ತೀರ್ಪು ನೀಡುವ ವೇಳೆ ಹೈಕೋರ್ಟ್, ಎಸ್‌ಐಟಿ ನಡೆಸಿದ ತನಿಖೆ ಮೇಲೆ ಸುಪ್ರೀಂಕೋರ್ಟ್ ನಿಗಾವಹಿಸಿತ್ತು ಎಂದಿತ್ತು. ಆದರೆ ಝಾಕಿಯಾ ಜಫ್ರಿ ಅರ್ಜಿಯ ಕೋರಿಕೆಯಂತೆ ಹೆಚ್ಚಿನ ತನಿಖೆಗೆ ಅವಕಾಶ ನೀಡಿತ್ತು. ಈ ಪ್ರಕರಣದ ಹೆಚ್ಚಿನ ವಿಚಾರಣೆಗೆ ಅರ್ಜಿದಾರರು ಮ್ಯಾಜಿಸ್ಟ್ರೇಟ್ ಕೋರ್ಟ್, ಹೈಕೋರ್ಟ್ ವಿಭಾಗೀಯ ಪೀಠ ಅಥವಾ ಸುಪ್ರೀಂಕೋರ್ಟ್‌ನಂತಹ ಸೂಕ್ತ ವೇದಿಕೆಗೆ ಮನವಿ ಸಲ್ಲಿಸಬಹುದು ಎಂದು ಸಲಹೆ ನೀಡಿತ್ತು.

ಅಂಶಗಳನ್ನು ಪರಿಗಣಿಸಿಲ್ಲ
ಎಸ್‌ಐಟಿಯು ಪ್ರಕರಣದ ಕುರಿತಾಗಿ ವಿಚಾರಣಾ ನ್ಯಾಯಾಧೀಶರ ಮುಂದೆ ತನ್ನ ಮುಕ್ತಾಯದ ವರದಿಯಲ್ಲಿ ಕ್ಲೀನ್ ಚಿಟ್ ನೀಡಿದ ಬಳಿಕ, ಮಹತ್ವದ ಅಂಶಗಳನ್ನು ಪರಿಗಣಿಸದೆಯೇ ತಾವು ಸಲ್ಲಿಸಿದ್ದ ಪ್ರತಿಭಟನಾತ್ಮಕ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ವಜಾಗೊಳಿಸಿದ್ದರು. ಮೇಘಾನಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಗುಲ್ಬರ್ಗ್ ಸೊಸೈಟಿ ಪ್ರಕರಣದಲ್ಲಿ ಸ್ವತಂತ್ರ ದೂರುದಾರನಾಗಿರುವ ಅರ್ಜಿದಾರರ ಹೋರಾಟವನ್ನು ಪರಿಗಣಿಸುವಲ್ಲಿ ಹೈಕೋರ್ಟ್ ವಿಫಲವಾಗಿದೆ ಎಂದು ಝಾಕಿಯಾ ಜಫ್ರಿ ಸುಪ್ರೀಂಕೋರ್ಟ್‌ಗೆ ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications