ಸೂರತ್‌ನಲ್ಲಿ ಶಾಲಾ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಕಾಮುಕನಿಗೆ ಜನರಿಂದ ಧರ್ಮದೇಟು, ವಿಡಿಯೋ ಇಲ್ಲಿದೆ

ಗುಜರಾತ್‌ನ ಸೂರತ್ ನಗರದ ಅಲ್ತಾನ್ ಪ್ರದೇಶದಲ್ಲಿ 10ನೇ ತರಗತಿಯ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ನಡೆದ ದೌರ್ಜನ್ಯದ ಘಟನೆಯು ಸ್ಥಳೀಯವಾಗಿ ಭಾರಿ ಉದ್ವಿಗ್ನತೆಗೆ ಕಾರಣವಾಗಿದೆ. ಶಾಲೆಯಿಂದ ಮರಳುತ್ತಿದ್ದ ಬಾಲಕಿಯ ಕೈ ಹಿಡಿದು ಎಳೆದು ಅಸಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸುವ ಮುನ್ನ ಧರ್ಮದೇಟು ನೀಡಿರುವ ಘಟನೆ ನಡೆದಿದೆ.

ಘಟನೆಯ ವಿವರ

ಬಾರ್ಡೋಲಿ ನಿವಾಸಿ ಮೊಹಮ್ಮದ್ ಅಜೀಜ್ ಇಲ್ಯಾಜ್ (39) ಎಂಬಾತ ಈ ಕೃತ್ಯವೆಸಗಿದ ಆರೋಪಿ ಎಂದು ತಿಳಿದುಬಂದಿದೆ. ಈತ ಭೇಸ್ತಾನ್‌ನಲ್ಲಿರುವ ಎಂಬ್ರಾಯ್ಡರಿ ಘಟಕವೊಂದರಲ್ಲಿ ಕೆಲಸ ಮಾಡುತ್ತಿದ್ದನು. ಶಾಲಾ ಬಾಲಕಿ ರಸ್ತೆಯಲ್ಲಿ ಹೋಗುತ್ತಿದ್ದಾಗ ಈತ ಆಕೆಯ ಕೈ ಹಿಡಿದು ದೌರ್ಜನ್ಯ ನಡೆಸಿದ್ದಾನೆ ಎನ್ನಲಾಗಿದೆ. ಕೂಡಲೇ ಸ್ಥಳೀಯರು ಬಾಲಕಿಯ ನೆರವಿಗೆ ಧಾವಿಸಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ, ಪೊಲೀಸ್ ವಾಹನ ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಕೆರಳಿದ ಜನಸಮೂಹವು ಪೊಲೀಸರ ಸಮ್ಮುಖದಲ್ಲೇ ಆರೋಪಿಯ ಮೇಲೆ ಮುಗಿಬಿದ್ದು ಆತನನ್ನು ತೀವ್ರವಾಗಿ ಥಳಿಸಿದೆ.

Surat

ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ

ಘಟನೆಯ ಸುದ್ದಿ ಎಲ್ಲೆಡೆ ಹರಡುತ್ತಿದ್ದಂತೆ ಬಾಲಕಿಯ ಪೋಷಕರು ಮತ್ತು ನೂರಾರು ಸ್ಥಳೀಯರು ಅಲ್ತಾನ್ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಕಂಡು ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಕ್ರೈಂ ಬ್ರಾಂಚ್ ತಂಡ ಸ್ಥಳಕ್ಕೆ ಧಾವಿಸಿತು. ಈ ವೇಳೆ ಠಾಣೆಯ ಮುಂದೆ ನೆರೆದಿದ್ದ ಜನಸಮೂಹವನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು. ಠಾಣೆಯ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಶಾಸಕ ಮನು ಪಟೇಲ್ ಪೊಲೀಸ್ ಠಾಣೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಜನರನ್ನು ಶಾಂತಗೊಳಿಸಲು ಪ್ರಯತ್ನಿಸಿದ ಅವರು, ಕಾನೂನು ಕೈಗೆತ್ತಿಕೊಳ್ಳದಂತೆ ಮನವಿ ಮಾಡಿದರು. ಡಿಸಿಪಿ ನಿಧಿ ಠಾಕೂರ್ ಈ ಬಗ್ಗೆ ಪ್ರತಿಕ್ರಿಯಿಸಿ, "ಬಾಲಕಿಯ ಪೋಷಕರು ಮತ್ತು ಆಕೆಯ ಶಿಕ್ಷಕರ ಸಮ್ಮುಖದಲ್ಲಿ ಹೇಳಿಕೆ ದಾಖಲಿಸಿಕೊಳ್ಳಲಾಗುತ್ತಿದೆ. ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆಯಡಿ ಕೇಸ್‌ ದಾಖಲಿಸಲಾಗುವುದು" ಎಂದು ತಿಳಿಸಿದ್ದಾರೆ.

ತಮ್ಮ ಮಗಳಿಗೆ ತಕ್ಷಣವೇ ಸ್ಪಂದಿಸಿದ ಸಾರ್ವಜನಿಕರು ಮತ್ತು ಪೊಲೀಸರ ಸಹಕಾರಕ್ಕೆ ಬಾಲಕಿಯ ತಾಯಿ ಕೃತಜ್ಞತೆ ಸಲ್ಲಿಸಿದ್ದಾರೆ. "ನನ್ನ ಮಗಳು ಈಗ ಸುರಕ್ಷಿತವಾಗಿದ್ದಾಳೆ, ಕಾಮುಕನಿಗೆ ಕಠಿಣ ಶಿಕ್ಷೆಯಾಗುವ ಮೂಲಕ ನಮಗೆ ನ್ಯಾಯ ಸಿಗುವ ಭರವಸೆಯಿದೆ" ಎಂದು ಅವರು ತಿಳಿಸಿದ್ದಾರೆ. ಸದ್ಯ ಪೊಲೀಸರು ಇಡೀ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದು, ಶಾಂತಿ ಕಾಪಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪರಿಸ್ಥಿತಿ ಕೈಮೀರದಂತೆ ತಡೆಯಲು ಇಡೀ ಪ್ರದೇಶದಲ್ಲಿ ಬರೋಬ್ಬರಿ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆರೋಪಿಯ ಕೃತ್ಯದ ಬಗ್ಗೆ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುವ ಪ್ರಕ್ರಿಯೆ ಭರದಿಂದ ಸಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+