ಸರ್ಜಿಕಲ್‌ ಸ್ಟ್ರೈಕ್‌ : ಮೋದಿಯನ್ನು ಅಭಿನಂದಿಸಿದ ರಾಹುಲ್ ಗಾಂಧಿ

Posted By:
Subscribe to Oneindia Kannada

ನವದೆಹಲಿ, ಸೆ. 30: ಸರ್ಜಿಕಲ್‌ ಸ್ಟ್ರೈಕ್‌ ನಡೆಸಿ ಉಗ್ರರ ಕ್ಯಾಂಪ್ ಗಳನ್ನು ಧ್ವಂಸಗೊಳಿಸುವ ದಿಟ್ಟ ಕ್ರಮ ಕೈಗೊಂಡ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತೇನೆ ಎಂದು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದಾರೆ.

ಪಾಕ್‌ ಆಕ್ರಮಿತ ಕಾಶ್ಮೀರ ಹಾಗೂ ಗಡಿ ನಿಯಂತ್ರಣ ರೇಖೆ ಬಳಿ ಇದ್ದ ಉಗ್ರರ ಏಳು ಶಿಬಿರಗಳ ಮೇಲೆ ಬುಧವಾರ ಮಧ್ಯ ರಾತ್ರಿ ಹಾಗೂ ಗುರುವಾರ ಮುಂಜಾನೆ ಭಾರತೀಯ ಸೇನೆ ದಾಳಿ ನಡೆಸಿತ್ತು.[ಒಂದು ಏಟಿಗೆ ಎರಡು ಏಟು : ಅಜಿತನ ತಿರುಗೇಟು]

'ಸರ್ಜಿಕಲ್‌ ಸ್ಟ್ರೈಕ್‌' ನಡೆಸಿ ಸುಮಾರು 38 ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡ ನಿರ್ಣಯವನ್ನು ಶ್ಲಾಘಿಸಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರು ಧನ್ಯವಾದ ಸಲ್ಲಿಸಿದ್ದಾರೆ.['ಅಣು ಬಾಂಬ್ ಹಾಕಿ ಭಾರತದ ಸರ್ವನಾಶ': ಪಾಕಿಸ್ತಾನ]

ಉತ್ತರ ಪ್ರದೇಶದಲ್ಲಿ ರೋಡ್‌ ಶೋ ವೊಂದರಲ್ಲಿ ಭಾಗಿಯಾಗಿರುವ ರಾಹುಲ್ ಗಾಂಧಿ ಅವರು ಮಾತನಾಡಿ, 'ಪ್ರಧಾನಿಯಾಗಿ ಎರಡೂವರೆ ವರ್ಷದಲ್ಲಿ ಮೊದಲ ಬಾರಿಗೆ ತೆಗೆದುಕೊಂಡ ದಿಟ್ಟ ಕ್ರಮಕ್ಕಾಗಿ ಇದೇ ಮೊದಲ ಬಾರಿ ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ನಾನು ಮತ್ತು ನನ್ನ ಪಕ್ಷ ಪ್ರಧಾನಿ ಅವರ ಬೆನ್ನಿಗೆ ನಿಲ್ಲುತ್ತೇವೆ. ಅವರು ಮಾಡಿದ್ದು ಸರಿ ಇದೆ ಎಂದಿದ್ದಾರೆ.

ಮೋದಿ ನಿಲುವನ್ನು ಹೊಗಳಿದ ಕಾಂಗ್ರೆಸ್

ಮೋದಿ ನಿಲುವನ್ನು ಹೊಗಳಿದ ಕಾಂಗ್ರೆಸ್

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೂಡಾ ಗುರುವಾರ ಈ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಧಾನಿ ಮೋದಿ ನಿಲುವನ್ನು ಹೊಗಳಿ ಪಾಕ್‌ಗೆ ಕಠಿಣ ಸಂದೇಶ ನೀಡಲಾಗಿದೆ. ಕಾಂಗ್ರೆಸ್‌ ಪಕ್ಷ ನಿಲುವನ್ನು ಬೆಂಬಲಿಸುತ್ತದೆ ಎಂದಿದ್ದರು.

ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಪ್ರತಿಕ್ರಿಯೆ

ಸರ್ಜಿಕಲ್‌ ಸ್ಟ್ರೈಕ್‌ ನಡೆಸಿ ಉಗ್ರರ ಕ್ಯಾಂಪ್ ಗಳನ್ನು ಧ್ವಂಸಗೊಳಿಸುವ ದಿಟ್ಟ ಕ್ರಮ ಕೈಗೊಂಡ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತೇನೆ ಎಂದು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದಾರೆ.

ಮೋದಿ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ

ಪ್ರಧಾನಿಯಾಗಿ ಎರಡೂವರೆ ವರ್ಷದಲ್ಲಿ ಮೊದಲ ಬಾರಿಗೆ ತೆಗೆದುಕೊಂಡ ದಿಟ್ಟ ಕ್ರಮಕ್ಕಾಗಿ ಇದೇ ಮೊದಲ ಬಾರಿ ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ.

ಉಗ್ರರ ವಿರುದ್ಧ ಕಾರ್ಯಾಚರಣೆಗೆ ಕಾಂಗ್ರೆಸ್ ಬೆಂಬಲ

ಉಗ್ರರ ವಿರುದ್ಧ ಕಾರ್ಯಾಚರಣೆಗೆ ಸದಾ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸುತ್ತದೆ.

ಸೈನಿಕರನ್ನು ಅಭಿನಂದಿಸುತ್ತೇನೆ: ರಾಹುಲ್ ಗಾಂಧಿ

ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಎಲ್ಲಾ ಯೋಧರನ್ನು ಕಾಂಗ್ರೆಸ್ ಪಕ್ಷ ಅಭಿನಂದಿಸುತ್ತದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Surgical Strike : I want to thank him (PM Modi) that for the first time in 2 and half years he has taken an action that is of the stature of PM, says Rahul Gandhi.
Please Wait while comments are loading...