ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

20 ಮಂದಿ ಭಾರತೀಯ ಸೈನಿಕರ ಹತ್ಯೆ ಕುರಿತು ಕೇಂದ್ರಕ್ಕೆ ಸುರ್ಜೇವಾಲಾ ಪ್ರಶ್ನೆ

|
Google Oneindia Kannada News

ನವದೆಹಲಿ, ಜೂನ್ 17: ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ನಡೆದ ಭಾರತ-ಚೀಣಾ ನಡುವಿನ ಮುಖಾಮುಖಿಯಲ್ಲಿ 20 ಮಂದಿ ಭಾರತೀಯ ಸೈನಿಕರು ಹುತಾತ್ಮರಾಗಿದ್ದು ಈ ಕುರಿತು ಕಾಂಗ್ರೆಸ್ ರಂದೀಪ್ ಸಿಂಗ್ ಸುರ್ಜೇವಾಲಾ ಕೇಂದ್ರ ಸರ್ಕಾರದ ಮುಂದೆ ಕೆಲವು ಪ್ರಶ್ನೆಗಳನ್ನಿಟ್ಟಿದ್ದಾರೆ.

Recommended Video

The sovereignty of the Galwan valley area always belonged to China:Zhao Lijian | Oneindia Kannada

ನಮ್ಮ 20 ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ, ಆದರೂ ಕೇಂದ್ರ ಸರ್ಕಾರ ಏಕೆ ಸುಮ್ಮನಿದೆ, ಸರ್ಕಾರವು ದೇಶದ ಜನರಿಗೆ ಧೈರ್ಯ ತುಂಬುವಂತಹ ಕೆಲಸ ಮಾಡಬೇಕು.

ಮೋದಿ ಮೌನವೇಕೆ? ಏಕೆ ಅಡಗಿಕೊಂಡಿದ್ದಾರೆ? ಪಿಎಂ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಮೋದಿ ಮೌನವೇಕೆ? ಏಕೆ ಅಡಗಿಕೊಂಡಿದ್ದಾರೆ? ಪಿಎಂ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಚೀನಾ ಹೇಗೆ ಭಾರತದ ಭೂಮಿಯನ್ನು ವಶಪಡಿಸಿಕೊಂಡಿತು. ಹೇಗೆ 20 ಮಂದಿ ಸೈನಿಕರನ್ನು ಸಾವನ್ನಪ್ಪಿದ್ದರು, ಭಾರತ-ಚೀನಾ ಗಡಿಯಲ್ಲಿ ಈಗಿನ ಪರಿಸ್ಥಿತಿ ಹೇಗಿದೆ?, ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಯಾವ ರೀತಿಯ ನಿರ್ಧಾರಗಳನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂಬುದನ್ನು ಜನರಿಗೆ ಮನವರಿಕೆಮಾಡಿಕೊಡಬೇಕು ಎಂದು ಹೇಳಿದ್ದಾರೆ.

Surjewala questions Twenty Soldiers Were Martyred But Govt Kept Silent

ಇಂಡೋ-ಚೀನಾ ಗಡಿ ಪ್ರದೇಶದಲ್ಲಿ ಜೂನ್ 15 ರಂದು ಚೀನಾದ ಸೈನಿಕರು ಭಾರತೀಯ ಸೇನಾ ಪಡೆಯ ಓರ್ವ ಅಧಿಕಾರಿ ಸೇರಿದಂತೆ ಮೂವರು ಯೋಧರನ್ನು ಹತ್ಯೆ ಮಾಡಿತ್ತು, ಜೂನ್ 16 ರಂದೂ ಮುಂದುವರೆದ ಈ ಮಲ್ಲಯುದ್ಧದಲ್ಲಿ ಭಾರತದ 20 ಹಾಗೂ ಚೀನಾದ 43 ಯೋಧರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಚೀನಿ ಸೇನಾಪಡೆಯ ದಾಳಿಗೆ ದಿಟ್ಟ ಪ್ರತ್ಯುತ್ತರ ನೀಡಿದ ಭಾರತೀಯ ಯೋಧರ ಪ್ರತಿದಾಳಿಯಲ್ಲಿ ವೈರಿ ಪಡೆಯ 43 ಕ್ಕ್ಕೊ ಹೆಚ್ಚು ಸೈನಿಕರು ಹತರಾಗಿದ್ದಾರೆ.ಪೂರ್ವ ಲಡಾಖ್ ಪ್ರದೇಶದ ಭಾರತ-ಚೀನಾ ಗಡಿ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನೆಲೆಸಿರುವ ಸಂದರ್ಭದಲ್ಲೇ ಚೀನಾದ ಈ ಉದ್ಧಟತನದ ಪುಂಡಾಟ ಭಾರತೀಯ ಯೋಧರನ್ನು ಕೆರಳಿಸಿದೆ.

ಚೀನಾ-ಭಾರತ ಘರ್ಷಣೆ: ಇನ್ನೂ ನಾಲ್ಕು ಭಾರತೀಯ ಯೋಧರ ಸ್ಥಿತಿ ಗಂಭೀರಚೀನಾ-ಭಾರತ ಘರ್ಷಣೆ: ಇನ್ನೂ ನಾಲ್ಕು ಭಾರತೀಯ ಯೋಧರ ಸ್ಥಿತಿ ಗಂಭೀರ

ಚೀನಾ ಮತ್ತು ಭಾರತದ ನಡುವೆ ಘರ್ಷಣೆ ನಡೆದಿದೆ, 20 ಮಂದಿ ಭಾರತೀಯ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ಪ್ರಧಾನಿ ಮೋದಿ ಏಕೆ ಮೌನವಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಲಡಾಖ್ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ನಡೆದ ಭಾರತ ಮತ್ತು ಚೀನಾ ಸೈನಿಕರ ಘರ್ಷಣೆಯಲ್ಲಿ 20 ಯೋಧರ ಮೃತಪಟ್ಟಿದ್ದಾರೆ. ಈ ಕುರಿತು ಪ್ರಧಾನಿ ಮೋದಿ ಯಾವ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಕೇಳುತ್ತಿದ್ದಾರೆ.

English summary
Congress Leader Randeep singh surjewala questioned that Govt should take citizens into confidence and tell them how China grabbed our land, how 20 jawans were martyred, what is the current situation and what is govt's strategy to deal with the issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X