ತಡರಾತ್ರಿ ಏಕಾಏಕಿ ಹಾಸ್ಟೆಲ್ ತಪಾಸಣೆ: 89 ವಿದ್ಯಾರ್ಥಿನಿಯರು ನಾಪತ್ತೆ!
ಉತ್ತರ ಪ್ರದೇಶ, ಆಗಸ್ಟ್ 23: ಉತ್ತರ ಪ್ರದೇಶ ಸರ್ಕಾರ ನಡೆಸುತ್ತಿರುವ ವಸತಿ ಶಾಲೆಯೊಂದರ ವಾರ್ಡನ್ ಸೇರಿದಂತೆ ನಾಲ್ವರ ವಿರುದ್ಧಎಫ್‌ಐಆರ್ ದಾಖಲಾಗಿದ್ದು, ಹಠಾತ್ ತಪಾಸಣೆಯ ವೇಳೆ ಒಟ್ಟು 100 ವಿದ್ಯಾರ್ಥಿನಿಯರಲ್ಲಿ 11 ಮಂದಿ ಮಾತ್ರ ಪತ್ತೆಯಾಗಿದ್ದು, ಉಳಿದ 89 ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಆಘಾತಕಾರಿ ಘಟನೆ ವರದಿಯಾಗಿದೆ.
ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಪರಸ್‌ಪುರದಲ್ಲಿ ಈ ಘಟನೆ ನಡೆದಿದ್ದು, ಪರಸ್ಪುರದ ಕಸ್ತೂರಬಾ ಗಾಂಧಿ ವಸತಿ ಸೋಮವಾರ ರಾತ್ರಿ ತಪಾಸಣೆ ನಡೆಸಿದಾಗ ಈ ಘಟನೆ ಬೆಳಕಿಗೆ ಬಂದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರ್ಡನ್ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಪರಸ್ಪುರದ ಕಸ್ತೂರಬಾ ಗಾಂಧಿ ವಸತಿ ಬಾಲಕಿಯರ ಹಾಸ್ಟೆಲ್‌ನಲ್ಲಿ ಒಟ್ಟು 100 ವಿದ್ಯಾರ್ಥಿನಿಯರು ದಾಖಲಾಗಿದ್ದಾರೆ. ಆದರೆ, ತಪಾಸಣೆ ವೇಳೆ ಕೇವಲ 11 ಬಾಲಕಿಯರು ಮಾತ್ರ ಪತ್ತೆಯಾಗಿದ್ದು, ಉಳಿದ 89 ಬಾಲಕಿಯರು ನಾಪತ್ತೆಯಾಗಿದ್ದಾರೆ.
ಆದರೆ, 11 ವಿದ್ಯಾರ್ಥಿನಿಯರು ಮಾತ್ರ ಹಾಸ್ಟೆಲ್‌ನಲ್ಲಿ ಹಾಜರಿರುವುದು ಕಂಡುಬಂದಿದೆ. 89 ವಿದ್ಯಾರ್ಥಿನಿಯರ ಗೈರುಹಾಜರಿಯ ಬಗ್ಗೆ ವಾರ್ಡನ್ ಸರಿತಾ ಸಿಂಗ್ ಅವರನ್ನು ವಿಚಾರಿಸಿದಾಗ ತೃಪ್ತಿಕರ ಉತ್ತರವನ್ನು ನೀಡಲಿಲ್ಲ ಎಂದು ಜಿಲ್ಲಾಧಿಕಾರಿ ನೇಹಾ ಶರ್ಮಾ ತಿಳಿಸಿದ್ದಾರೆ. ಇದು ಗಂಭೀರ ನಿರ್ಲಕ್ಷ್ಯ, ವಸತಿ ಬಾಲಕಿಯರ ಹಾಸ್ಟೆಲ್ ಅನ್ನು ಈ ರೀತಿ ನಡೆಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಎಫ್‌ಐಆರ್ ದಾಖಲಿಸಲು ಆದೇಶಿಸಿದ್ದಾರೆ
ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಹಾಸ್ಟೆಲ್ ವಾರ್ಡನ್ ಪೂರ್ಣಾವಧಿ ಶಿಕ್ಷಕ ಕಾವಲುಗಾರ ಮತ್ತು ಪ್ರಾಂತೀಯ ರಕ್ಷಣಾ ದಳದ (ಪಿಆರ್‌ಡಿ) ಜವಾನನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಜಿಲ್ಲಾ ಮೂಲ ಶಿಕ್ಷಾ ಅಧಿಕಾರಿ (ಬಿಎಸ್‌ಎ), ಪ್ರೇಮ್ ಚಂದ್ ಯಾದವ್ ಮಾಹಿತಿ ನೀಡಿದ್ದಾರೆ.












Click it and Unblock the Notifications