ಪ್ರಸಾರ ಭಾರತಿಗೆ ಕನ್ನಡದ ಸೂರ್ಯ ಪ್ರಕಾಶ
ನವದೆಹಲಿ, ಅ. 29: ಕನ್ನಡಿಗ, ಹಿರಿಯ ಪತ್ರಕರ್ತ ಅರಕಲಗೂಡು ಸೂರ್ಯಪ್ರಕಾಶ್ ಪ್ರಸಾರ ಭಾರತಿ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಉಪರಾಷ್ಟ್ರಪತಿ ಎಂ.ಹಮೀದ್ ಅನ್ಸಾರಿ ಅವರ ನೇತೃತ್ವದ ಸಮಿತಿ ಮೂರು ವರ್ಷಗಳ ಅವಧಿಗೆ ಸೂರ್ಯಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ದೆಹಲಿ ಮೂಲದ ಚಿಂತಕರ ಕೂಟವಾದ ವಿವೇಕಾನಂದ ಅಂತಾರಾಷ್ಟ್ರೀಯ ಪ್ರತಿಷ್ಠಾನದಲ್ಲಿ ತೊಡಗಿಕೊಂಡಿರುವ ಪ್ರಕಾಶ್ ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮ ಕ್ಷೇತ್ರದಲ್ಲಿ ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ ಅನುಭವ ಹೊಂದಿದ್ದಾರೆ.[ಪೆನ್ನನ್ನೇ ಪೊರಕೆಯಾಗಿಸಿದ ಪತ್ರಕರ್ತರಿಗೆ ಮೋದಿ ಧನ್ಯವಾದ]

ಪ್ರಸಾರ ಭಾರತಿ ಅಧ್ಯಕ್ಷೆಯಾಗಿದ್ದ ಹಿರಿಯ ಪತ್ರಕರ್ತೆ ಮೃಣಾಲ್ ಪಾಂಡೆ ಅವರ ಅಧಿಕಾರಾವಧಿ ಏ.30ಕ್ಕೆ ಮುಕ್ತಾಯವಾಗಿತ್ತು. ಹುದ್ದೆ ಖಾಲಿಯಾದ ಆರು ತಿಂಗಳ ವಿಳಂಬದ ಬಳಿಕ ಹೊಸ ಅಧ್ಯಕ್ಷರ ನೇಮಕವಾಗಿದೆ.
ಜೀ ನ್ಯೂಸ್, ದಿ ಪಯೋನಿರ್, ಏಷ್ಯಾ ಟೈಮ್ಸ್, ಇಂಡಿಯಾ ಎಡಿಟರ್, ಈ ನಾಡು ಮತ್ತು ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಕೆಲಸ ಮಾಡಿದ ಅನುಭವ ಸೂರ್ಯ ಪ್ರಕಾಶ್ ಬಳಿಯಿದೆ. ಅಲ್ಲದೇ ದೆಹಲಿಯ ಪಯೋನೀರ್ ಮೀಡಿಯಾ ಶಾಲೆಗಳ ಸಂಸ್ಥಾಪಕ-ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.[ದಿನಪತ್ರಿಕೆಗಳ ಮುಖಪುಟದಲ್ಲಿ 'ಮಂಗಳಯಾನ']
ಎರಡನೇ ಕನ್ನಡಿಗ
ಹಾಸನ ಜಿಲ್ಲೆಯ ಅರಕಲಗೂಡು ಮೂಲದ ಸೂರ್ಯ ಪ್ರಕಾಶ್ ಪ್ರಸಾರ ಭಾರತಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಎರಡನೇ ಕನ್ನಡಿಗ. ಈ ಮೊದಲು ಹಿರಿಯ ಪತ್ರಕರ್ತ ಎಂ.ವಿ.ಕಾಮತ್ ಅವರು ಪ್ರಸಾರ ಭಾರತಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
ಪ್ರಸಾರ ಭಾರತಿ ವ್ಯಾಪ್ತಿ ಎಷ್ಟು?
ಮಾಹಿತಿ ಮತ್ತು ಪ್ರಸಾರ ಸಚಿವಾಲಯ ವ್ಯಾಪ್ತಿಯಲ್ಲಿನ ದೂರದರ್ಶನ ಮತ್ತು ಆಲ್ ಇಂಡಿಯಾ ರೇಡಿಯೊ ನಿರ್ವಹಣೆ ಹೊಣೆಗಾರಿಕೆಯನ್ನು ಪ್ರಸಾರ ಭಾರತಿ ಹೊಂದಿದೆ. ಪ್ರಸಾರ ಭಾರತಿ ಮಂಡಳಿಯು ಅಧ್ಯಕ್ಷ, ಕಾರ್ಯನಿರ್ವಾಹಕ ಸದಸ್ಯ, ಇಬ್ಬರು ಸದಸ್ಯರು ಮತ್ತು ಆರು ಮಂದಿ ಅರೆಕಾಲಿಕ ಸದಸ್ಯರನ್ನು ಒಳಗೊಂಡಿರುತ್ತದೆ. ದೂರದರ್ಶನ ಮತ್ತು ಆಲ್ ಇಂಡಿಯಾ ರೇಡಿಯೊದಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳ ಹೊಣೆಗಾರಿಕೆ ಇವರ ಮೇಲಿರುತ್ತದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications