ಶತ್ರುಘ್ನ ಸಿನ್ಹಾಗೆ ತೀವ್ರ ಮುಖಭಂಗ: ಈ ಬಾರಿ ಬಿಜೆಪಿ ಟಿಕೆಟ್ ಸಿಕ್ಕೋಲ್ಲ?

ಪಾಟ್ನಾ, ಸೆಪ್ಟೆಂಬರ್ 19: ಇತ್ತೀಚೆಗೆ ತಮ್ಮದೇ ಪಕ್ಷದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ ಅವರಿಗೆ ತೀವ್ರ ಮುಖಭಂಗವನ್ನುಂಟು ಮಾಡುವಂಥ ನಡೆಯನ್ನು ಬಿಜೆಪಿ ಇಟ್ಟಿದೆ.

2019 ರ ಲೋಕಸಭಾ ಚುನಾವಣೆಯಲ್ಲಿ ಬಿಹಾರದ ಪಾಟ್ನಾ ಸಾಹಿಬ್ ಲೋಕಸಭಾ ಕ್ಷೇತ್ರಕ್ಕೆ ಹಾಲಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರನ್ನು ಬಿಜೆಪಿ ಕಣಕ್ಕಿಳಿಸುವುದುದ ಬಹುತೇಕ ಖಚಿತವಾಗಿದೆ. ಪ್ರಸ್ತುತ ಈ ಕ್ಷೇತ್ರದ ಸಂಸದರಾಗಿರುವ ಶತ್ರುಘ್ನ ಸಿನ್ಹಾ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಸಿಗುವುದಿಲ್ಲ ಎಂಬುದು ಈ ಮೂಲಕ ಖಾತ್ರಿಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಅಕಸ್ಮಾತ್ ತಮಗೆ ಈ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗದಿದ್ದರೂ ತಾವು ಇದೇ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಈಗಾಗಲೇ ಸಿನ್ಹಾ ಹೇಳಿಕೆ ನೀಡಿದ್ದರು. ಅದರರ್ಥ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ಎಂಬುದೋ ಅಥವಾ ಇನ್ಯಾವುದೇ ಪಕ್ಷಕ್ಕೆ ಸೇರುತ್ತಾರೆ ಎಂಬುದೋ ಎಂಬುದನ್ನು ಕಾದುನೋಡಬೇಕಿದೆ.

Sushil Modi to contest from Patna Sahib, Shatrughan Sinha may not get ticket this time

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಘಟಾನುಘಟಿ ನಾಯಕರ ವಿರುದ್ಧವೂ ಶತ್ರುಘ್ನ ಸಿನ್ಹಾ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ರಫೆಲ್ ಡೀಲ್ ಬಗ್ಗೆ ಕಾಂಗ್ರೆಸ್ ಆಕ್ರೋಶವನ್ನು ಸಿನ್ಹಾ ಬೆಂಬಲಿಸಿದ್ದರೆ, ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚುತ್ತಿರುವುದನ್ನು ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿರುವುದನ್ನು ಟೀಕಿಸಿ, ಇದು ಕೇಂದ್ರ ಮೋದಿ ಸರ್ಕಾರದ ವೈಫಲ್ಯವೆಂದೂ ಹೇಳಿದ್ದರು.

ಬಾಲಿವುಡ್ ನಟರೂ ಆಗಿದ್ದ ಶತ್ರುಘ್ನ ಸಿನ್ಹಾ ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ ಡಿಎ ಸರ್ಕಾರದ ಅವಧಿಯಲ್ಲಿ ಕೇಂದ್ರ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+