ಸುಷ್ಮಾ ಸ್ವರಾಜ್ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು!

Written By: Ramesh
Subscribe to Oneindia Kannada

ನವದೆಹಲಿ, ನವೆಂಬರ್. 08 : ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರ ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದಿದ್ದರಿಂದ ಸೋಮವಾರ ರಾತ್ರಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಧುಮೇಹ ಖಾಯಿಲೆಯಿಂದ ಬಳಲುತ್ತಿರುವ ಸುಷ್ಮಾ ಸ್ವರಾಜ್ ಸೋಮವಾರ ದಿಢೀರ್ ಆಗಿ ನಗರದ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ (AIIMS)ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಚಿವೆ ಸುಷ್ಮಾ ಅವರಿಗೆ ಮಧುಮೇಹ ರೋಗ ಉಲ್ಬಣಿಸುವ ಸೂಚನೆ ಕಂಡುಬಂದ ಹಿನ್ನೆಲೆಯಲ್ಲಿ'endocrinological'ಪರೀಕ್ಷೆ ನಡೆಸಲು ಆಸ್ಪತ್ರೆ ವೈದ್ಯರು ತೀರ್ಮಾನಿಸಿದ್ದಾರೆ. ಈ ಸಂಬಂಧ ಕೂಡಲೇ ಆಸ್ಪತ್ರೆಗೆ ಇವರು ದಾಖಲಾಗಿದ್ದು, ಮಂಗಳವಾರ (ನವೆಂಬರ್. 8)ರಂದು 'endocrinological' ಪರೀಕ್ಷೆ ನಡೆಯಲಿದೆ.

Sushma Swaraj Admitted To Delhi's AIIMS

ಪರೀಕ್ಷೆಯ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದರೆ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ.

ಆತಂಕ ಪಡುವಂತಹ ಯಾವುದೇ ಬದಲಾವಣೆ ಸಚಿವೆ ಸುಷ್ಮಾ ಅವರ ಆರೋಗ್ಯದಲ್ಲಿ ಕಂಡುಬಂದಿಲ್ಲ ಎಂದು ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಟತ್ರೆ ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಕಳೆದ ವರ್ಷ ಇದೇ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ (AIIMS)ಆಸ್ಪತ್ರೆಗೆ ಸಚಿವೆ ಸುಷ್ಮಾ ಸ್ವರಾಜ್ ದಾಖಲಾಗಿ ವಾರಗಳ ಕಾಲ ಚಿಕಿತ್ಸೆ ಪಡೆದುಕೊಂಡಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
External Affairs Minister Sushma Swaraj was Monday, November 07 admitted to the All India Institute of Medical Sciences (AIIMS) in New Delhi, where she will undergo certain endocrinological tests.
Please Wait while comments are loading...