ಆಗಸ್ಟ್ 31ರವರೆಗೆ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ನಿಷೇಧ ವಿಸ್ತರಣೆ

ನವದೆಹಲಿ, ಆಗಸ್ಟ್ 01: ನಾಗರಿಕ ವಿಮಾನಯಾನ ನಿರ್ದೇಶನಾಲಯವು ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ನಿಷೇಧವನ್ನು ಆಗಸ್ಟ್ 31ರವರೆಗೆ ವಿಸ್ತರಣೆ ಮಾಡಿದೆ.

ಈ ಆದೇಶ ಸರಕು ವಿಮಾನಗಳು ಮತ್ತು ವಿಶೇಷ ಅನುಮತಿ ಪಡೆದ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಅಲ್ಲದೆ ಆಯ್ದ ಮಾರ್ಗಗಳಲ್ಲಿ ನಿಯಮಿತವಾಗಿ ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ಸಂಬಂಧಿತ ಆಡಳಿತಗಳು ಅನುಮತಿಸಬಹುದಾಗಿದೆ ಎಂದು ತಿಳಿಸಿದೆ.

ಭಾರತದಿಂದ ಹೊರಹೋಗುವ ಇಲ್ಲವೇ ಒಳಬರುವ ನಿಗದಿತ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗಳನ್ನು ಆಗಸ್ಟ್ 31 ರ ರಾತ್ರಿ 11.59ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ ಎಂದು ಡಿಜಿಸಿಎ ಪ್ರಕಟಣೆಯಲ್ಲಿ ತಿಳಿಸಿದೆ.

Suspension Of International Flights Extended Till August 31

ಮೇ 25ರಿಂದ ದೇಶೀಯ ವಿಮಾನ ಹಾರಾಟ ಆರಂಭವಾಗಿದೆ. ಆದರೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರೆಸಲಾಗಿದೆ.

ಮಾರ್ಚ್ 25ರಂದು ಕೊರೊನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ ಬಳಿಕ ಎಲ್ಲಾ ದೇಶಿಯ ಮತ್ತು ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+