Swati Maliwal Assault Case: ದೆಹಲಿ ಸಿಎಂ ಆಪ್ತ ಸಹಾಯಕನ ವಿರುದ್ಧ FIR, ಶೀಘ್ರವೇ ಬಂಧನ?
ನವದೆಹಲಿ, ಮೇ 16: ದೆಹಲಿಯಲ್ಲಿ ಆಡಳಿತಲ್ಲಿರುವ ಆಮ್ ಆದ್ಮಿ ಪಕ್ಷದ ಸಂಸದೆ 'ಸ್ವಾತಿ ಮಲಿವಾಲ್' (MP Swati Maliwal) ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ (Bibhav Kumar) ಅವರ ಮೇಲೆ ಯಾವ ಕ್ಷಣದಲ್ಲಾದರೂ ಎಫ್‌ಐಆರ್ ದಾಖಲಿಸಿ, ವಶಕ್ಕೆ ಪಡೆಯುವ ಸಾಧ್ಯತೆ ಇದೆ.
ಹೌದು, ಆಮ್ ಆದ್ಮಿ ಪಕ್ಷ (ಎಎಪಿ) ಮುಖ್ಯಸ್ಥರು ಆದ ನವದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಪಕ್ಷದ ಸಂಸದೆ ಮೇಲೆ ಬಿಭವ್ ಕುಮಾರ್ ಅವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.

ಪ್ರಕರಣ ಸಂಬಂಧ ಹಲ್ಲೆಗೆ ಒಳಗಾದ ಎಎಪಿ ಸಂಸದೆ ಮತ್ತು 'ದೆಹಲಿ ಮಹಿಳಾ ಆಯೋಗ'ದ ಮಾಜಿ ಅಧ್ಯಕ್ಷೆ 'ಸ್ವಾತಿ ಮಲಿವಾಲ್' ಅವರು ಗುರುವಾರ ಸಂಜೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ಕುರಿತಂತೆ ದೂರು ದಾಖಲಿಸಿದ್ದಾರೆ. ಸಿಎಂ ನಿವಾಸದಲ್ಲಿ ಹಲ್ಲೆ ಮಾಡಿದ ಬಿಭವ್ ಕುಮಾರ್ ಹೆಸರನ್ನು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇಂದು ಇಲ್ಲವೇ ನಾಳೆ ಆರೋಪಿ ಪೊಲೀಸ್ ವಶಕ್ಕೆ?
ದೆಹಲಿ ಪೊಲೀಸರು ಯಾವ ಕ್ಷಣದಲ್ಲಾದರೂ ಸಿಎಂ ಅರವಿಂದ್ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಬಹುದು. ಎಫ್‌ಐಆರ್ ದಾಖಲಿಸುತ್ತಿದ್ದಂತೆ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ದಟ್ಟವಾಗಿವೆ ಎಂದು ದೆಹಲಿ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
ಘಟನೆಯು ಬೆಳಕಿಗೆ ಬರುತ್ತಿದ್ದಂತೆ ದೆಹಲಿ ಪೊಲೀಸ್ ಅಧಿಕಾರಿಗಳ ತಂಡವು ಗುರುವಾರ ನವದೆಹಲಿಯಲ್ಲಿರುವ ಸ್ವಾತಿ ಮಲಿವಾಲ್ ಅವರ ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ಘಟನೆ, ಆರೋಪ ಕುರಿತು ಪೊಲೀಸರು ಸಂಸದೆ ಸ್ವಾತಿ ಮಲಿವಾಲ್ ಅವರನ್ನು ನಾಲ್ಕು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿ ಮಾಹಿತಿ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಹಲ್ಲೆ ಖಂಡಿಸಿದ ದೆಹಲಿ ಮಹಿಳಾ ಆಯೋಗ, ನೋಟಿಸ್
ಒಬ್ಬ ಸಂಸದೆ ಮೇಲೆ ಸಿಎಂ ನಿವಾಸದಲ್ಲೇ ಹಲ್ಲೆ ನಡೆದಿದೆ. ಇನ್ನೂ ಜನಸಾಮಾನ್ಯರಿಗೆ ಈ ಸರ್ಕಾರದಿಂದ ರಕ್ಷಣೆ ಸಿಗುತ್ತದೆಯೇ ಎಂಬ ಅನುಮಾನಕ್ಕೆ ಈ ಘಟನೆ ಎಡೆಮಾಡಿಕೊಡುತ್ತಿದೆ. ಆಯೋಗದ ಮಾಜಿ ಅಧ್ಯಕ್ಷ ಮೇಲೆ ಹಲ್ಲೆ ಮಾಡಿರುವುದನ್ನು 'ದೆಹಲಿ ಮಹಿಳಾ ಆಯೋಗ'ವು ತೀವ್ರವಾಗಿ ಖಂಡಿಸಿದೆ.
ನಾಳೆ ಶುಕ್ರವಾರ ಮೇ 17ರಂದು ಸಂಸದರ ಮೇಲಿನ ಹಲ್ಲೆ ಪ್ರಕರಣಕ್ಕೆ ಕುರಿತಂತೆ ಭಾರತೀಯ ಮಹಿಳಾ ಆಯೋಗದ ಮುಂದೆ ಹಾಜರಾಗಿ ಸ್ಪಷ್ಟನೆ ನೀಡುವಂತೆ ರಾಜ್ಯ ಮಹಿಳಾ ಆಯೋಗವು ಸಿಎಂ ಆಪ್ತ ಮತ್ತು ಹಲ್ಲೆ ಆರೋಪಿತ ಬಿಭವ್ ಕುಮಾರ್ ಗೆ ನೋಟಿಸ್ ಜಾರಿ ಮಾಡಲಾಗಿದೆ.
ಸದ್ಯ ಹಲ್ಲೆಗೆ ಒಳಗಾಗಿರುವ ಸಂಸದೆ ಸ್ವಾತಿ ಮಲಿವಾಲ್ ಅವರು ಯಾರೊಂದಿಗೂ ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದು ಅವರ ತಾಯಿ ಸಂಗೀತಾ ಮಲಿವಾಲ್ ಅವರು ತಿಳಿಸಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications