ಶ್ಯಾಮ್ ಪ್ರಸಾದ್ ಮುಖರ್ಜಿ ವಿಗ್ರಹ ಧ್ವಂಸ: 6 ಮಂದಿ ಪೊಲೀಸ್ ವಶಕ್ಕೆ
ಕೋಲ್ಕತ್ತಾ, ಮಾರ್ಚ್ 7: ಕೋಲ್ಕತ್ತದ ಕಾಲಿಘಾಟ್ ನಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ವಿಗ್ರಹ ಧ್ವಂಸಕ್ಕೆ ಸಂಬಂಧಿಸಿದಂತೆ 6 ಜನ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತ್ರಿಪುರದಲ್ಲಿ ರಷ್ಯಾದ ಕ್ರಾಂತಿಕಾರಿ ಲೆನಿನ್ ವಿಗ್ರಹ ಮತ್ತು ತಮಿಳುನಾಡಿನಲ್ಲಿ ಸಾಮಾಜಿಕ ಹೋರಾಟಗಾರ ಪೆರಿಯಾರ್(ಇವಿಆರ್ ರಾಮಸಾಮಿ) ಧ್ವಂಸ ಪ್ರಕರಣಗಳು ನಡೆದ ನಂತರ ಕೋಲ್ಕತ್ತಾದಲ್ಲಿ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ವಿಗ್ರಹ ಧ್ವಂಸಗೊಳಿಸಲಾಗಿತ್ತು.
ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ಇಂಥ ಘಟನೆಗಳು ಖಂಡನಾರ್ಹ. ಇದಕ್ಕೆ ಸಂಬಂಧಿಸಿದಂತೆ ಆಯಾ ರಾಜ್ಯಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಟುವಾಗಿ ಹೇಳಿದ್ದರು.

ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ವಿಗ್ರಹ ದ್ವಂಸವನ್ನು ಪಶ್ಚಿಮ ಬಂಗಾಳದ ಬಿಜೆಪಿ ಘಟಕ ತೀವ್ರವಾಗಿ ಖಂಡಿಸಿ, ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಒತ್ತಾಯಿಸಿತ್ತು. ಇದೀಗ ಘಟನೆಗೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ. ಆರೋಪಿಗಳ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.












Click it and Unblock the Notifications