26/11 ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್‌ ತಹವ್ವೂರ್ ರಾಣಾ ಬಂಧನ

ಮುಂಬೈನಲ್ಲಿ ನಡೆದ 26/11 ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್‌, ಮೋಸ್ಟ್ ವಾಂಟೆಡ್ ಭಯೋತ್ಪಾದಕ ತಹವ್ವೂರ್ ಹುಸೇನ್ ರಾಣಾ ಅಮೆರಿಕದಿಂದ ದೆಹಲಿಗೆ ಬಂದಿದ್ದು, ದೆಹಲಿಯಲ್ಲಿ ಬಂಧಿಸಲಾಗಿದೆ. ಅಮೆರಿಕದಿಂದ ಆತನನ್ನು ಗಡೀಪಾರು ಮಾಡಲಾಗಿದ್ದು ಮತ್ತು ಈಗ ಕಾನೂನಿನ ವಿಚಾರಣೆ ಎದುರಿಸಬೇಕಾಗುತ್ತದೆ.

64 ವರ್ಷದ ತಹವ್ವೂರ್ ರಾಣಾ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯು ಬಂಧಿಸಿದೆ. ಬುಧವಾರ ಅಮೆರಿಕದ ಲಾಸ್ ಏಂಜಲೀಸ್‌ನಿಂದ ಹೊರಟ ಅವರ ವಿಮಾನ ದೆಹಲಿಯ ಪಾಲಂ ತಾಂತ್ರಿಕ ಪ್ರದೇಶದಲ್ಲಿ ಇಳಿದಿದೆ. ಪ್ರಾಥಮಿಕ ಔಪಚಾರಿಕತೆಗಳ ನಂತರ, ಅವರನ್ನು ಎನ್‌ಐಎ ಪ್ರಧಾನ ಕಚೇರಿಗೆ ಕರೆದೊಯ್ಯುವ ಸಾಧ್ಯತೆಯಿದೆ. ಅವರನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯಕ್ಕೂ ಹಾಜರುಪಡಿಸಲಾಗುವುದು.

Tahawwur rana arrested in delhi under anti terror act

ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಹೆಚ್ಚಿನ ಭದ್ರತೆಯ ತಿಹಾರ್ ಜೈಲಿನಲ್ಲಿ ಇರಿಸಬಹುದು ಮತ್ತು ಅಂತಿಮವಾಗಿ ವಿಚಾರಣೆಯನ್ನು ಎದುರಿಸಲು ಮುಂಬೈಗೆ ಸ್ಥಳಾಂತರಿಸಬಹುದು ಎಂದು ಮೂಲಗಳು ತಿಳಿಸಿವೆ.

ಕ್ರಿಮಿನಲ್ ಪಿತೂರಿ, ಭಾರತ ಸರ್ಕಾರದ ವಿರುದ್ಧ ಯುದ್ಧ ಸಾರುವುದು, ಕೊಲೆ ಮತ್ತು ನಕಲಿ ದಾಖಲೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ವಿವಿಧ ಆರೋಪಗಳನ್ನು ಹೊರಿಸಲಾಗಿದೆ.

ಪ್ರಧಾನಿ ಮೋದಿ ಭೇಟಿಯ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಯೋತ್ಪಾದಕ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅನುಮೋದನೆ ನೀಡಿದೆ ಎಂದು ಘೋಷಣೆ ಮಾಡಿದ ಎರಡು ತಿಂಗಳ ಬಳಿಕ ಅವರನ್ನು ಭಾರತಕ್ಕೆ ಹಸ್ತಾಂತರ ಮಾಡಿದೆ. ಪ್ರಧಾನಿ ನರೇಂದ್ರ ಮೋದಿಯನ್ನು ಹೃದಯಪೂರ್ವಕವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಚಿಕಾಗೋದಲ್ಲಿ ನೆಲೆಸಿದ್ದ ಪಾಕಿಸ್ತಾನಿ ಮೂಲದ ಕೆನಡಾದ ಪ್ರಜೆಯಾಗಿರುವ ತಹವ್ವೂರ್ ರಾಣಾ, 2008 ರಲ್ಲಿ ಮುಂಬೈನಲ್ಲಿ ನಡೆದ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಭಯೋತ್ಪಾದ ದಾಳಿಯಲ್ಲಿ 166 ಜನ ಮೃತಪಟ್ಟಿದ್ದರು. ದಾಳಿಯ ಪ್ರಮುಖ ಆರೋಪಿ ಪಾಕಿಸ್ತಾನಿ-ಅಮೆರಿಕನ್ ಭಯೋತ್ಪಾದಕ ಡೇವಿಡ್ ಕೋಲ್ಮನ್ ಹೆಡ್ಲಿ, ರಾಣಾ ಭಯೋತ್ಪಾದನಾ ಕಾರ್ಯಾಚರಣೆಗೆ ಲಾಜಿಸ್ಟಿಕಲ್ ಮತ್ತು ಆರ್ಥಿಕ ಬೆಂಬಲವನ್ನು ನೀಡಿದ್ದಾನೆ ಎಂದು ಹೇಳಿದ್ದಾರೆ.

ಮುಂಬೈನಲ್ಲಿ ವಲಸೆ ಕಾನೂನು ಕೇಂದ್ರವನ್ನು ಸ್ಥಾಪಿಸುವುದು ಸೇರಿದಂತೆ ರಾಣಾ ಹೆಡ್ಲಿಗೆ ಹಲವು ರೀತಿಯಲ್ಲಿ ಸಹಾಯ ಮಾಡಿದ್ದಾನೆ ಎಂದು ಆರೋಪಪಟ್ಟಿಯಲ್ಲಿ ಹೇಳಲಾಗಿದೆ. ಹೆಡ್ಲಿ ಸಂಸ್ಥೆಯ ಪ್ರತಿನಿಧಿಯಾಗಿ ರಾಣಾ ನವೆಂಬರ್ 2008 ರಲ್ಲಿ ಭಾರತಕ್ಕೂ ಭೇಟಿ ನೀಡಿದ್ದ ದೆಹಲಿ, ಜೈಪುರ, ಪುಷ್ಕರ್, ಗೋವಾ ಮತ್ತು ಪುಣೆ ಮತ್ತು ಮುಂಬೈ ಸೇರಿದಂತೆ ಹಲವಾರು ಭಾರತೀಯ ನಗರಗಳಿಗೆ ಪ್ರಯಾಣ ಬೆಳೆಸಿದ್ದ ಎಂದು ಹೇಳಲಾಗಿದೆ.

ಅಕ್ಟೋಬರ್ 2009 ರಲ್ಲಿ, ಡ್ಯಾನಿಶ್ ರಾಜಧಾನಿ ಕೋಪನ್ ಹ್ಯಾಗನ್ ನಲ್ಲಿ ಪತ್ರಿಕೆಯ ಮೇಲೆ ದಾಳಿ ಮಾಡುವ ವಿಫಲ ಯೋಜನೆಗೆ ಬೆಂಬಲ ನೀಡಿದ್ದಕ್ಕಾಗಿ ಮತ್ತು ಮುಂಬೈ ದಾಳಿಗೆ ಕಾರಣವಾದ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾಗೆ ವಸ್ತು ಬೆಂಬಲ ನೀಡಿದ್ದಕ್ಕಾಗಿ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ರಾಣಾ ಅವರನ್ನು ಚಿಕಾಗೋದಲ್ಲಿ ಬಂಧಿಸಿತು. ಎರಡು ವರ್ಷಗಳ ನಂತರ, ಅವನನ್ನು ದೋಷಿ ಎಂದು ಘೋಷಿಸಲಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+