ನಿಮ್ಮ ತಾಯಿ, ನಮ್ಮ ತಾಯಿ ಇದ್ದಂತೆ, ನೀವು ವಿಶ್ರಾಂತಿ ತೆಗೆದುಕೊಳ್ಳಿ: ಮೋದಿಗೆ ಮಮತಾ ಹೃದಯಸ್ಪರ್ಶಿ ಸಾಂತ್ವನ

ನವದೆಹಲಿ, ಡಿಸೆಂಬರ್‌ 30: ಹೌರಾ ಮತ್ತು ನ್ಯೂ ಜಲ್ಪೈಗುರಿಯನ್ನು ಸಂಪರ್ಕಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ಮೋದಿ ವರ್ಚುವಲ್‌ ಆಗಿ ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೋದಿಗೆ ಹೃದಯಸ್ಪರ್ಶಿ ಸಾಂತ್ವನ ಹೇಳಿದರು.

ಪ್ರಧಾನಿ ಮೋದಿ ತಾಯಿ ಹೀರಾಬೆನ್‌ ಅವರು ಇಂದು ಬೆಳಿಗ್ಗೆ ನಿಧನರಾದರು.

ಈ ವಿಚಾರವಾಗಿ ಪ್ರಧಾನಿಗೆ ಸಾಂತ್ವನ ಹೇಳಿದ ಮಮತಾ ಬ್ಯಾನರ್ಜಿ, 'ದಯವಿಟ್ಟು ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳಿ. ನಿಮ್ಮ ತಾಯಿಯ ಸಾವಿಗೆ ಹೇಗೆ ಸಂತಾಪ ಸೂಚಿಸಬೇಕೆಂದು ನನಗೆ ತಿಳಿಯುತ್ತಿಲ್ಲ. ನಿಮ್ಮ ತಾಯಿ ನಮ್ಮ ತಾಯಿ ಇದ್ದ ಹಾಗೆ. ಈ ಸಂದರ್ಭದಲ್ಲಿ ನಾನು ನನ್ನ ತಾಯಿಯನ್ನು ಸಹ ನೆನಪಿಸಿಕೊಳ್ಳುತ್ತೇನೆ' ಎಂದು ಹೇಳಿದರು.

ಶುಕ್ರವಾರ ಪ್ರಾರಂಭಿಸಲಿರುವ ಐದು ರೈಲ್ವೇ ಯೋಜನೆಗಳ ಪೈಕಿ ನಾಲ್ಕು ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು.

Take Rest, Mamata Banerjee Tells PM Narendra Modi After His Mothers Last Rites

ತಾವು ರೈಲ್ವೆ ಸಚಿವರಾಗಿದ್ದ ಅವಧಿಯಲ್ಲಿ ಈ ಯೋಜನೆಗಳಿಗೆ ಅಡಿಗಲ್ಲು ಹಾಕಲಾಗಿತ್ತು ಎಂದು ಮಮತಾ ಬ್ಯಾನರ್ಜಿ ಹೇಳಿದರು..

ಪ್ರಧಾನಿ ಮೋದಿಯವರ ತಾಯಿ ಹೀರಾಬೆನ್ ಶುಕ್ರವಾರ ಮುಂಜಾನೆ ನಿಧನರಾದರು. ಅವರಿಗೆ ನೂರು ವರ್ಷ ವಯಸ್ಸಾಗಿತ್ತು.

ಯೋಜನೆಗಳ ಉದ್ಘಾಟನೆಗೆ ಪ್ರಧಾನಿ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಬೇಕಿತ್ತು. ಆದರೆ ಅವರ ತಾಯಿಯ ನಿಧನ ಸುದ್ದಿಯ ನಂತರ ಗಾಂಧಿನಗರಕ್ಕೆ ತೆರಳಬೇಕಾಯಿತು. ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಬಂಗಾಳದ ಇಂದಿನ ನಿಗದಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ.

Take Rest, Mamata Banerjee Tells PM Narendra Modi After His Mothers Last Rites

ಬಂಗಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರು 'ಜೈ ಶ್ರೀ ರಾಮ್' ಘೋಷಣೆಗಳನ್ನು ಕೂಗಿದರು. ನಂತರ ಮಮತಾ ಬ್ಯಾನರ್ಜಿ ವೇದಿಕೆ ಏರಲು ನಿರಾಕರಿಸಿದರು. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ವೇದಿಕೆಗೆ ಬರುವಂತೆ ಮಮತಾ ಅವರನ್ನು ಮನವೊಲಿಸಲು ಪ್ರಯತ್ನಿಸಿದರು. ಆದರೆ, ಮಮತಾ ಅವರು ವೇದಿಕೆಗೆ ಬರಲಿಲ್ಲ.

ವೇದಿಕೆಯ ಪಕ್ಕದಲ್ಲಿ ಕುಳಿತಿದ್ದ ಮಮತಾ ಬ್ಯಾನರ್ಜಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅವರು ಪ್ರಧಾನಿಯವರ ತಾಯಿಯ ನಿಧನಕ್ಕೆ ಸಂತಾಪ ಸೂಚಿಸಿದರು. ಇಷ್ಟು ದೊಡ್ಡ ವೈಯಕ್ತಿಕ ನಷ್ಟವನ್ನು ಅನುಭವಿಸುತ್ತಿದ್ದರೂ ಕಾರ್ಯಕ್ರಮಕ್ಕೆ ಬಂದಿದ್ದಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಿದರು.

ಹೀರಾಬೆನ್ ಮೋದಿ ಅವರು ಇಂದು ಮುಂಜಾನೆ 3:30 ರ ಸುಮಾರಿಗೆ ಅಹಮದಾಬಾದ್‌ನ ಯುಎನ್ ಮೆಹ್ತಾ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ರಿಸರ್ಚ್ ಸೆಂಟರ್‌ನಲ್ಲಿ ನಿಧನರಾದರು ಎಂದು ಆಸ್ಪತ್ರೆ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+