TN and WB Election 2026: ಇಂದು ತಮಿಳುನಾಡು, ಪಶ್ಚಿಮ ಬಂಗಾಳ ಚುನಾವಣೆ, ಮತದಾನ ಆರಂಭ, ಅಪ್ಡೇಟ್ಸ್

Assembly Election 2026: ತಮಿಳುನಾಡು ಹಾಗೂ ಪಶ್ಚಿಮ ಬಂಗಾಳ ವಿಧಾನಸಬಾ ಚುನಾವಣೆ 2026 ಮತದಾನ ಇಂದು ಗುರುವಾರ (ಏ.23)ರಂದು ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ತಮಿಳುನಾಡಿನಲ್ಲಿ 234 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹತದಲ್ಲಿ ಹಾಗೂ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಒಟ್ಟ ಎರಡು ಹಂತಗಳ ಪೈಕಿ ಇಂದು 152 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಮೊದಲ ಹಂತದಲ್ಲಿ ಮತದಾನ ನಡೆಯುತ್ತಿರುವ ಪಶ್ಚಿಮ ಬಂಗಾಳದಲ್ಲಿ 1,452 ಅಭ್ಯರ್ಥಿಗಳ ಭವಿಷ್ಯವನ್ನು ಸುಮಾರು 3.60 ಕೋಟಿ ಮತದಾರರು ಇಂದು ನಿರ್ಧರಿಸಲಿದ್ದಾರೆ. ಉತ್ತರ ಬಂಗಾಳ ಮತ್ತು ದಕ್ಷಿಣ ಬಂಗಾಳದ ತಲಾ ಎಂಟು ಜಿಲ್ಲೆ ಸೇರಿ ಒಟ್ಟು 16 ಜಿಲ್ಲೆಗಳಲ್ಲಿ 152 ವಿಧಾನಸಭಾ ಸ್ಥಾನಗಳಿಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ನಡೆಯುತ್ತಿದೆ.

Tamil Nadu

ರಾಜ್ಯ ಚುನಾವಣೆ ಆಯೋಗದಿಂದ ವಿಶೇಷ ತೀವ್ರ ಪರಿಷ್ಕರಣೆ (SIR) ಬಳಿಕ ಮತದಾರರ ಸಂಖ್ಯೆಯನ್ನು ಸುಮಾರು 12 ರಷ್ಟು ಕಡಿಮೆ ಆಗಿದೆ. ಜವಾಬ್ದಾರಿಯುತ ಮತ್ತು ಪಾರದರ್ಶಕ ಚುನಾವಣೆ ನಡೆಯುತ್ತಿದೆ. ಚುನಾವಣಾ ಆಯೋಗವು ಸುಮಾರು 2.5 ಲಕ್ಷ ಸಿಬ್ಬಂದಿಯನ್ನು ಒಳಗೊಂಡಿರುವ ಕೇಂದ್ರ ಅರೆಸೈನಿಕ ಪಡೆಗಳ ದಾಖಲೆಯ 2,450 ಕಂಪನಿಗಳನ್ನು ಚುನಾವಣೆಗಾಗಿ ನಿಯೋಜಿಸಿದೆ. ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದಲ್ಲಿ ಏಪ್ರಿಲ್ 29ರಂದು ಚುನಾವಣೆ ನಡೆಯಲಿದೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಕೆ) ಪಕ್ಷ ಸೇರಿ ಸ್ಥಳೀಯ ಪಕ್ಷಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಇಲ್ಲಿ ದೀದಿ ಎದುರು ಬಿಜೆಪಿಯು ಪ್ರಬಲ ಎದುರಾಳಿ ಪಕ್ಷವಾಗಿ ಹೊರ ಹೊರಮ್ಮಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ತಮಿಳುನಾಡಲ್ಲಿ ಒಂದೇ ಹಂತದ ಮತದಾನ, 5.73 ಕೋಟಿ ಮತದಾರರು

ಇನ್ನು ತಮಿಳುನಾಡಿನಲ್ಲಿ 234 ಸೀಟುಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ರಾಜ್ಯದಲ್ಲಿ 2,93,04,905 ಮಹಿಳೆಯರು 2,80,30,658 ಪುರುಷ ಮತದಾರರು ಹಾಗೂ 7,728 ತೃತೀಯ ಲಿಂಗ ಮತದಾರರು ಸೇರಿ ಒಟ್ಟು 5.73 ಕೋಟಿಗೂ ಅಧಿಕ ಮತದಾರರು ರಾಜಕೀಯ ಪಕ್ಷಗಳ ಭವಿಷ್ಯ ನಿರ್ಧರಿಸಲಿದ್ದಾರೆ. ಸ್ಥಳೀಯ ಪೊಲೀಸರು, ಕೇಂದ್ರ ಸಶಸ್ತ್ರ ಪಡೆಗಳು ಮತ್ತು ಫ್ಲೈಯಿಂಗ್ ಸ್ಕ್ವಾಡ್‌ಗಳನ್ನು ಒಳಗೊಂಡ ಬಹು-ಹಂತದ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಎಲ್ಲೆಡೆ ಮತದಾನ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಲಾಗುತ್ತಿದೆ.

ತಮಿಳುನಾಡಿನಲ್ಲಿ ಆಡಳಿತ ಪಕ್ಷ ಸಿಎಂ ಎಂಕೆ ಸ್ಟಾಲಿನ್ ದ್ರಾವಿಡ್ ಮುನ್ನೇತ್ರ ಕಳಗಂ (ಡಿಎಂಕೆ), ಎಐಎಡಿಎಂ, ಟಿವಿಕೆ ಹಾಗೂ ಸ್ಥಳೀಯ ಪ್ರಾದೇಶಿಕ ಪಕ್ಷಗಳ ಭವಿಷ್ಯ ನಿರ್ಧಾರವಾಗಲಿದೆ. ಈಗಾಗಲೇ ಚುನಾವಣೆ ಪೂರ್ವ ಸಮೀಕ್ಷೆಗಳಲ್ಲಿ ತಮಿಳುನಾಡಿನಲ್ಲಿ ಡಿಎಂಕೆ ಮುನ್ನಡೆ ಸಾಧಿಸಿದರೂ ಸಹಿತ ಪ್ರಾದೇಶಿಕ ಪಕ್ಷಗಳಿಂದ ತೀವ್ರ ಪೈಪೋಟಿ ಎದುರಿಸಲಿವೆ ಎಂದು ಭವಿಷ್ಯ ನುಡಿದಿವೆ. ಅಲ್ಲದೇ ನಟ ವಿಜಯ್ ಥಳಪತಿ ಪಕ್ಷ ಟಿವಿಕೆ ಮೂರನೇ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ. ಅಂದರೆ ಇದು ಕೂಡ ದೊಡ್ಡ ಪಕ್ಷಗಳಿಗೆ ಅಡಚಣೆ ಉಂಟು ಮಾಡುವ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+