ಹಿಂದಿ ಹೇರಿಕೆ ವಿರುದ್ಧ ತಮಿಳುನಾಡು ವಿಧಾನಸಭೆ ನಿರ್ಣಯ ಅಂಗೀಕಾರ
ಚೆನ್ನೈ, ಅಕ್ಟೋಬರ್ 18: ಎಲ್ಲಾ ಕೇಂದ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಹಿಂದಿಯನ್ನು ಬೋಧನಾ ಮಾಧ್ಯಮವನ್ನಾಗಿ ಮಾಡಲು ಶಿಫಾರಸು ಮಾಡಿದ ಸಂಸತ್ ಸಮಿತಿಯ ವರದಿಯ ವಿರುದ್ಧ ಮಂಗಳವಾರ ತಮಿಳುನಾಡು ವಿಧಾನಸಭೆ ನಿರ್ಣಯವನ್ನು ಅಂಗೀಕರಿಸಿದೆ.
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ರಾಜ್ಯ ವಿಧಾನಸಭೆಯಲ್ಲಿ ನಿರ್ಣಯವನ್ನು ಮಂಡಿಸಿದರು. ಸಮಿತಿ ಅಧ್ಯಕ್ಷರು ರಾಷ್ಟ್ರಪತಿಗಳಿಗೆ ಸಲ್ಲಿಸಿದ ಅಧಿಕೃತ ಭಾಷೆಯ ಸಂಸದೀಯ ಸಮಿತಿಯ ವರದಿಯಲ್ಲಿ ಮಾಡಲಾದ ಶಿಫಾರಸುಗಳನ್ನು ಜಾರಿಗೊಳಿಸದಂತೆ ಸದನವು ಸರ್ಕಾರವನ್ನು ಒತ್ತಾಯಿಸುತ್ತದೆ. ಸಮಿತಿಯ ಶಿಫಾರಸುಗಳು ತಮಿಳು ಸೇರಿದಂತೆ ರಾಜ್ಯ ಭಾಷೆಗಳ ವಿರುದ್ಧ ಮತ್ತು ಆ ಭಾಷೆಗಳನ್ನು ಮಾತನಾಡುವ ಜನರ ಹಿತಾಸಕ್ತಿಗೆ ವಿರುದ್ಧವಾಗಿವೆ ಎಂದು ಅವರು ಹೇಳಿದರು.
ತಮಿಳುನಾಡು ವಿಧಾನಸಭೆ ನಿರ್ಣಯ ಅಂಗೀಕರಿಸುತ್ತಿದ್ದಂತೆ, ರಾಜ್ಯ ಬಿಜೆಪಿ ಶಾಸಕರು ಪ್ರತಿಭಟಿಸಿ ವಿಧಾನಸಭೆಯಿಂದ ಹೊರನಡೆದರು. ಇದಕ್ಕೂ ಮೊದಲು, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, "ಸಾಧ್ಯವಿರುವ ಎಲ್ಲ ರೀತಿಯಲ್ಲಿ ಹಿಂದಿಯನ್ನು ಹೇರುವ ಕೇಂದ್ರ ಸರ್ಕಾರದ ಆಕ್ರಮಣಕಾರಿ ಪ್ರಯತ್ನಗಳ" ಬಗ್ಗೆ ಕೇಂದ್ರವನ್ನು ಖಂಡಿಸಿದರು. ಇವು ನಮ್ಮ ಸಂವಿಧಾನದ ಒಕ್ಕೂಟ ತತ್ವಗಳಿಗೆ ವಿರುದ್ಧವಾಗಿವೆ ಎಂದು ಹೇಳಿದರು.
ಭಾನುವಾರ ತಮ್ಮ ಟ್ವೀಟ್‌ನಲ್ಲಿ, ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಹಿಂದಿಯೇತರರಲ್ಲಿನ ಇರುವ ಭಯ ಮತ್ತು ಅಸಮಾಧಾನವನ್ನು ಬಗೆಹರಿಸುವಂತೆ ಮನವಿ ಮಾಡಿದ ಅವರು, ಇಂತಹ ಅಪ್ರಾಯೋಗಿಕ, ವಿಭಜಕ ಪ್ರಯತ್ನಗಳು ಹಿಂದಿಯೇತರ ರಾಜ್ಯಗಳ ಜನರನ್ನು ಒಳಗೊಳ್ಳುತ್ತವೆ. ಇದು ಒಕ್ಕೂಟ ವ್ಯವಸ್ಥೆ ಹಾಗೂ ರಾಜ್ಯ ಸಂಬಂಧಗಳನ್ನು ಧಕ್ಕೆ ತರುತ್ತದೆ ಎಂದರು.

ಭಾರತದ ಆತ್ಮದ ಮೇಲೆ ನೇರ ಹಲ್ಲೆ: ಸ್ಟಾಲಿನ್
ಹಿಂದಿಯನ್ನು ಹೇರುವ ಮೂಲಕ ಮತ್ತೊಂದು ಭಾಷಾಯುದ್ಧವನ್ನು ಹೇರುವುದರ ವಿರುದ್ಧ ಸ್ಟಾಲಿನ್ ಕೇಂದ್ರಕ್ಕೆ ಇತ್ತೀಚೆಗೆ ಎಚ್ಚರಿಕೆ ನೀಡಿದ್ದರು. ಎಲ್ಲ ಭಾಷೆಗಳನ್ನೂ 8ನೇ ಪರಿಚ್ಛೇದದಲ್ಲಿ ಅಧಿಕೃತ ಭಾಷೆಯನ್ನಾಗಿ ಮಾಡುವಂತೆ ಒತ್ತಾಯಿಸಿದ್ದರು. ಅಕ್ಟೋಬರ್ 10 ರಂದು ಸ್ಟಾಲಿನ್ ಅವರು ಅಧಿಕೃತ ಭಾಷೆಯ ಸಂಸದೀಯ ಸಮಿತಿಯ ವರದಿಯ 11ನೇ ಸಂಪುಟದಲ್ಲಿ ಮಾಡಿದ ಪ್ರಸ್ತಾಪಗಳು ಭಾರತದ ಆತ್ಮದ ಮೇಲೆ ನೇರ ಹಲ್ಲೆಯಾಗಿದೆ. ಇದು ಜಾರಿಯಾದರೆ, ಹಿಂದಿಯೇತರ ಭಾಷಿಕ ಜನಸಂಖ್ಯೆಯನ್ನು ಅವರ ಸ್ವಂತ ಭೂಮಿಯಲ್ಲಿ ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡಲಾಗುತ್ತದೆ ಎಂದು ಅವರು ಹೇಳಿದರು.

ಸಮಿತಿಯು ಸುಮಾರು 100 ಶಿಫಾರಸು
ಗೃಹ ಸಚಿವ ಅಮಿತ್ ಶಾ ನೇತೃತ್ವದ ಅಧಿಕೃತ ಭಾಷಾ ಸಮಿತಿಯ ವರದಿಯು 11ನೇ ಸಂಪುಟವನ್ನು ಸೆಪ್ಟೆಂಬರ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಲಾಯಿತು. ಈ ಸಮಿತಿಯು ಸುಮಾರು 100 ಶಿಫಾರಸುಗಳನ್ನು ಮಾಡಿದ್ದು, ಹಿಂದಿ ಮಾತನಾಡುವ ರಾಜ್ಯಗಳಲ್ಲಿ ಐಐಟಿಗಳು, ಐಐಎಂಗಳು ಮತ್ತು ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಹಿಂದಿ ಬೋಧನಾ ಮಾಧ್ಯಮವಾಗಿರಬೇಕು. ಅಲ್ಲದೆ ದೇಶದ ಇತರ ಭಾಗಗಳಲ್ಲಿ, ಬೋಧನಾ ಮಾಧ್ಯಮವು ಆಯಾ ಪ್ರಾದೇಶಿಕ ಭಾಷೆಯಾಗಿರಬೇಕು ಎಂದು ಹೇಳಿದೆ.

ಅಧಿಕೃತ ಭಾಷೆಗಳಲ್ಲಿ ಹಿಂದಿ ಬಳಕೆ
ತನ್ನ ವರದಿಯಲ್ಲಿ, ಸಂಸತ್ತಿನ ಸಮಿತಿಯು ಎಲ್ಲಾ ರಾಜ್ಯಗಳಲ್ಲಿ ಇಂಗ್ಲಿಷ್‌ಗಿಂತ ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡಬೇಕು ಎಂದು ಶಿಫಾರಸು ಮಾಡಿದೆ. ದೇಶದ ಅಧಿಕೃತ ಭಾಷೆಗಳಲ್ಲಿ ಹಿಂದಿಯೂ ಒಂದಾಗಬೇಕು ಎಂದು ವರದಿಯಲ್ಲಿ ಸೂಚಿಸಲಾಗಿದೆ. ಹಿಂದಿಯ ಪ್ರಗತಿಪರ ಬಳಕೆಯ ಆಧಾರದ ಮೇಲೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಮೂರು ಗುಂಪುಗಳಾಗಿ (ಪ್ರದೇಶಗಳು) ವಿಂಗಡಿಸಲಾಗಿದೆ.

ಕ್ಯಾಟಗರಿ 'ಬಿ': ಗುಜರಾತ್, ಮಹಾರಾಷ್ಟ್ರ, ಪಂಜಾಬ್
ಅವುಗಳಲ್ಲಿ ಕ್ಯಾಟಗರಿ ಎ: ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ, ಛತ್ತೀಸ್‌ಗಢ, ಉತ್ತರಾಖಂಡ, ಜಾರ್ಖಂಡ್, ಹರಿಯಾಣ, ಹಿಮಾಚಲ ಪ್ರದೇಶ, ರಾಜಸ್ಥಾನ, ದೆಹಲಿ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು (100 ಪ್ರತಿಶತ ಹಿಂದಿ ಬಳಸಬೇಕು). ಕ್ಯಾಟಗರಿ 'ಬಿ': ಗುಜರಾತ್, ಮಹಾರಾಷ್ಟ್ರ, ಪಂಜಾಬ್, ಮತ್ತು ಚಂಡೀಗಢ, ದಮನ್ ಮತ್ತು ದಿಯು ಮತ್ತು ದಾದ್ರಾ ಮತ್ತು ನಗರ ಹವೇಲಿ ಕೇಂದ್ರಾಡಳಿತ ಪ್ರದೇಶಗಳು. ವರ್ಗ 'ಸಿ': ಭಾರತದ ಉಳಿದ ಭಾಗಗಳನ್ನು ವರ್ಗೀಕರಿಸಲಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications