ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥನ ಬರ್ಬರ ಹತ್ಯೆ

ಮಾಯಾವತಿ ಅವರ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತಮಿಳುನಾಡು ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಅವರನ್ನು ಚೆನ್ನೈನ ಪೆರಂಬೂರ್ ಪ್ರದೇಶದ ಅವರ ಮನೆಯ ಬಳಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.

ಆರು ಅಪರಿಚಿತ ವ್ಯಕ್ತಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ತಮಿಳುನಾಡು ರಾಜ್ಯ ರಾಜಕೀಯದಲ್ಲಿ ಈ ಹತ್ಯೆ ಆಘಾತ ಉಂಟುಮಾಡಿದೆ.

Tamil Nadu BSP Chief Armstrong Killed in Chennai

ಪ್ರಾಥಮಿಕ ವರದಿಗಳ ಪ್ರಕಾರ ಬೈಕ್‌ನಲ್ಲಿ ಬಂದ ಅಪರಿಚಿತ ಗುಂಪು ಆರ್ಮ್‌ಸ್ಟ್ರಾಂಗ್ ಅವರ ಮೇಲೆ ಚಾಕುವಿನಿಂದ ದಾಳಿ ಮಾಡಿದೆ. ಅವರು ಸ್ಥಳದಲ್ಲೇ ಗಂಭೀರವಾಗಿ ಗಾಯಗೊಂಡಿದ್ದು ಮೃತಪಟ್ಟಿದ್ದಾರೆ. ಕೊಲೆಗೆ ಕಾರಣವೇನು ಎಂದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಸೆಂಬಿಯಂ ಪೊಲೀಸ್ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಳ ಪತ್ತೆಗೆ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಹಲ್ಲೆಗೊಳಗಾಗಿದ್ದ ಆರ್ಮ್‌ಸ್ಟ್ರಾಂಗ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಾಜೀವ್ ಗಾಂಧಿ ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ.

ಚೆನ್ನೈ ಕಾರ್ಪೊರೇಷನ್ ಕೌನ್ಸಿಲರ್ ಆಗಿ ಸೇವೆ ಸಲ್ಲಿಸಿದ್ದ ಆರ್ಮ್‌ಸ್ಟ್ರಾಂಗ್ ಪೆರಂಬೂರ್‌ನಲ್ಲಿ ನೆಲೆಸಿದ್ದರು. ಆರ್ಮ್‌ಸ್ಟ್ರಾಂಗ್‌ ಹೊಸ ಮನೆ ನಿರ್ಮಾಣ ಮಾಡುತ್ತಿದ್ದು, ಅದರ ಮೇಲ್ವಿಚಾರಣೆ ನಡೆಸುತ್ತಿದ್ದರು, ಸಂಜೆ 7 ಗಂಟೆ ಸುಮಾರಿಗೆ ಕೆಲಸ ನಡೆಯುತ್ತಿದ್ದ ಸ್ಥಳವನ್ನು ಪರಿಶೀಲಿಸಲು ಬಂದಿದ್ದಾಗ ಬೈಕ್‌ನಲ್ಲಿ ಬಂದ ಆರು ಅಪರಿಚಿತ ವ್ಯಕ್ತಿಗಳು ಅವರ ಮೇಲೆ ದಾಳಿ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕೊಲೆ ಮಾಡಿರುವ ಗ್ಯಾಂಗ್‌ನಲ್ಲಿ ಆರು ದುಷ್ಕರ್ಮಿಗಳಲ್ಲಿ ನಾಲ್ವರು ಫುಡ್ ಡೆಲಿವರಿ ಕೆಲಸಗಾರರ ಬಟ್ಟೆಗಳನ್ನು ಧರಿಸಿದ್ದರು ಎಂದು ಹೇಳಲಾಗಿದೆ. ಆರೋಪಿಗಳ ಪತ್ತೆಗೆ ಬಲೆ ಬೀಸಿರುವ ಪೊಲೀಸರು ಸಮೀಪದ ಸ್ಥಳಗಳಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಘಟನೆ ಬಗ್ಗೆ ಅಣ್ಣಾಮಲೈ ಪ್ರತಿಕ್ರಿಯೆ

ಘಟನೆ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ತಮಿಳುನಾಡು ಮುಖ್ಯಸ್ಥ ಅಣ್ಣಾಮಲೈ, ರಾಜ್ಯದಲ್ಲಿ ಹೆಚ್ಚುತ್ತಿರುವ ಹಿಂಸಾಚಾರದ ಬಗ್ಗೆ ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

"ಚೆನ್ನೈನಲ್ಲಿ ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಶ್ರೀ ಆರ್ಮ್‌ಸ್ಟ್ರಾಂಗ್ ಅವ್ಲ್ ಅವರ ಬರ್ಬರ ಹತ್ಯೆಯ ಸುದ್ದಿಯಿಂದ ತೀವ್ರ ಆಘಾತವಾಗಿದೆ. ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ಕೊಡಲು, ನಾವು ಅವರ ಕುಟುಂಬ ಮತ್ತು ಬಹುಜನ ಸಮಾಜ ಪಕ್ಷದ ಕಾರ್ಯಕರ್ತರೊಂದಿಗೆ ಇದ್ದೇವೆ" ಎಂದಿದ್ದಾರೆ.

"ಕಳೆದ 3 ವರ್ಷಗಳಲ್ಲಿ ಡಿಎಂಕೆ ಆಡಳಿತದಲ್ಲಿ ತಮಿಳುನಾಡಿನಲ್ಲಿ ಹಿಂಸಾಚಾರ ಹೆಚ್ಚಾಗಿದೆ. ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳುಮಾಡಿರುವ ಎಂಕೆ ಸ್ಟಾಲಿನ್‌ ಅವರಿಗೆ ನೈತಿಕತೆ ಇದೆಯೇ ಎಂದು ಕೇಳಿಕೊಳ್ಳಲಿ." ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+