ತಮಿಳುನಾಡು ಸಿಎಂ ಸ್ಟಾಲಿನ್ ಪ್ರಧಾನಮಂತ್ರಿ ಆಗಲಿದ್ದಾರೆ: ಪಾರೂಕ್ ಅಬ್ದುಲ್ಲಾ ಭವಿಷ್ಯ

ಮುಂದಿನ ವರ್ಷ 2024ರಲ್ಲಿ ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆ ವೇಳೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪ್ರಧಾನಿಯಾಗುವ ಸಾಧ್ಯತೆಗಳಿವೆ ಎಂಬ ಮಾತುಗಳು ಕೇಳಿ ಬಂದಿವೆ.

ಚೆನ್ನೈ, ಮಾರ್ಚ್ 01: ಮುಂದಿನ ವರ್ಷ 2024ರಲ್ಲಿ ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆ ವೇಳೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪ್ರಧಾನಿಯಾಗುವ ಸಾಧ್ಯತೆಗಳಿವೆ ಎಂಬ ಮಾತುಗಳು ಕೇಳಿ ಬಂದಿವೆ.

ಬುಧವಾರು ಎಂ.ಕೆ ಸ್ಟಾಲಿನ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಪಾಲ್ಗೊಳ್ಳಲು ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದು ಚೆನ್ನೈಗೆ ಆಗಮಿಸಿದ್ದರು. ಈ ವೇಳೆ ನಿರೀಕ್ಷಿತ ಪ್ರಧಾನಿ ಅಭ್ಯರ್ಥಿ ಸೇರಿದಂತೆ ಕೆಲವು ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು.

Tamil Nadu CM MK Stalin Became Prime Minister after 2024 Lok Sabha Elections, Farooq Abdullah

ವಿರೋಧ ಪಕ್ಷಗಳು ಒಗ್ಗೂಡಿ ಮುಂದಿನ ವರ್ಷ 2024ರಲ್ಲಿ ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆ ಗೆದ್ದರೆ, ಡಿಎಂಕೆ ನಾಯಕ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪ್ರಧಾನಿಯಾಗುವ ಸಾಧ್ಯತೆಗಳಿವೆ ಎಂದು ಹೇಳಿದರು.

ಚುನಾವಣೆಯಲ್ಲಿ ವಿರೋಧ ಪಕ್ಷಗಳು ಒಟ್ಟುಗೂಡಿ ಗೆದ್ದರೆ ನಂತರ ಸೂಕ್ತ ಸಮಯದಲ್ಲಿ ರಾಷ್ಟ್ರವನ್ನು ಮುನ್ನಡೆಸಲು ಮತ್ತು ಒಗ್ಗೂಡಿಸಲು ಉತ್ತಮ ವ್ಯಕ್ತಿಯನ್ನು ನಿರ್ಧರಿಸಬಹುದಾಗಿದೆ. ಮೊಗಲು ಗೆಲುವು ಮುಖ್ಯ ಎಂದರು.

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಪ್ರಧಾನಿ ಯಾಕಾಗಬಾರದು? ಪ್ರತಿಪಕ್ಷಗಳ ಒಗ್ಗಟ್ಟಿನ ವಿಚಾರವನ್ನು ನೋಡುವುದಾದರೆ ಸ್ಟಾಲಿನ್ ಮತ್ತು ಡಿಎಂಕೆ ಪಕ್ಷಗಳು ಒಟ್ಟಾಗಿ ಅತ್ಯುತ್ತಮ ಕೆಲಸಗಳನ್ನು ಮಾಡುತ್ತಿವೆ. ರಾಷ್ಟ್ರದ ವೈವಿಧ್ಯತೆಯನ್ನು ರಕ್ಷಿಸಿದಾಗ ಏಕತೆ ಕಾಪಾಡುತ್ತದೆ. ತಮಿಳುನಾಡಿನ ಆಡಳಿತ ಪಕ್ಷವು ವಿರೋಧ ಮತ್ತು ರಾಷ್ಟ್ರೀಯ ಏಕತೆಯನ್ನು ಪೋಷಿಸುವಲ್ಲಿ ಉತ್ತಮ ಸಾಧನೆ ಮಾಡಿದೆ ಎಂದು ಅವರು ಮೆಚ್ಚುಗೆ ಮಾತುಗಳನ್ನಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+