ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Fake: ದೇಶಾದ್ಯಂತ ಲಾಕ್‌ಡೌನ್ ವಿಸ್ತರಣೆಗೆ ಟಾಸ್ಕ್‌ಫೋರ್ಸ್ ಮನವಿ?

|
Google Oneindia Kannada News

ನವದೆಹಲಿ, ಏಪ್ರಿಲ್ 22: ದೇಶದಲ್ಲಿ ಲಾಕ್‌ಡೌನ್ ವಿಸ್ತರಣೆಗೆ ಟಾಸ್ಕ್‌ಫೋರ್ಸ್‌ ಯಾವುದೇ ಮನವಿ ಮಾಡಿಲ್ಲ ಎಂಬುದು ತಿಳಿದುಬಂದಿದೆ.

ಮೇ 3ರ ಬಳಿಕ ಲಾಕ್‌ಡೌನ್ ವಿಸ್ತರಿಸುವಂತೆ ರಾಷ್ಟ್ರೀಯ ಟಾಸ್ಕ್‌ಫೋರ್ಸ್ ಮನವಿ ಮಾಡಿದೆ ಎನ್ನುವ ಸುದ್ದಿ ಹರಿದಾಡುತ್ತಿತ್ತು.

ಇಂದು ಮಧ್ಯರಾತ್ರಿಯಿಂದಲೇ ಲಾಕ್‌ಡೌನ್ ಸಡಿಲಿಸಿ ಹೊಸ ಮಾರ್ಗಸೂಚಿ ಇಂದು ಮಧ್ಯರಾತ್ರಿಯಿಂದಲೇ ಲಾಕ್‌ಡೌನ್ ಸಡಿಲಿಸಿ ಹೊಸ ಮಾರ್ಗಸೂಚಿ

ಈ ಸುದ್ದಿಯಲ್ಲಿ ಯಾವುದೇ ಹುರುಳಿಲ್ಲ. ಟಾಸ್ಕ್‌ಫೋರ್ಸ್‌ ಕೇಂದ್ರ ಸರ್ಕಾರಕ್ಕೆ ಯಾವುದೇ ಮನವಿ ಮಾಡಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಮೇ 3ರವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಿದ್ದಾರೆ. ಏಪ್ರಿಲ್ 20ರ ನಂತರ ಸ್ವಲ್ಪ ಸಡಿಲಗೊಳಿಸುವುದಾಗಿ ತಿಳಿಸಿದ್ದರು.

Task Force Did Not Consult PM Over Lockdown Extension

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮಾತನಾಡಿ, ವಿಮಾನ ಹಾರಾಟ ಆರಂಭಿಸುವ ಯಾವುದೇ ನಿರ್ಧಾರ ಮಾಡಿಲ್ಲ. ವಿಮಾನ ಹಾರಾಟ ಆರಂಭವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಅಕ್ಟೋಬರ್ 15ರವರೆಗೆ ರೆಸ್ಟೋರೆಂಟ್ ಹಾಗೂ ಹೋಟೆಲ್‌ಗಳನ್ನು ಬಂದ್ ಮಾಡುವಂತೆ ಪ್ರವಾಸೋದ್ಯಮ ಸಚಿವಾಲಯ ಯಾವುದೇ ಸೂಚನೆ ನೀಡಿಲ್ಲ ಎಂದು ಹೇಳಿದರು.

ವಿಶ್ವದಾದ್ಯಂತ ಕೊರೊನಾ ಮಹಾಮಾರಿ ಹಬ್ಬಿದೆ. ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದರೆ 7 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವೇಡಕರ್ ತಿಳಿಸಿದ್ದಾರೆ.

ಲಕ್ಷಲಕ್ಷ ಬಲಿ ಪಡೆದ ಕೊರೊನಾ ವೈರಸ್ ಸೋಂಕಿಗೆ ಸಿಕ್ಕಿತು ಔಷಧಿ! ಲಕ್ಷಲಕ್ಷ ಬಲಿ ಪಡೆದ ಕೊರೊನಾ ವೈರಸ್ ಸೋಂಕಿಗೆ ಸಿಕ್ಕಿತು ಔಷಧಿ!

ದೇಶಾದ್ಯಂತ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಅದರ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುವವರಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸುವ ಸಂಬಂಧ ಕೇಂದ್ರ ಸರ್ಕಾರ ಬುಧವಾರ ಸುಗ್ರೀವಾಜ್ಞೆ ಹೊರಡಿಸಿದೆ.

ಈ ಸುಗ್ರೀವಾಜ್ಞೆಗೆ ರಾಷ್ಟ್ರಪತಿಗಳ ಅಂಕಿತ ದೊರೆತ ಕೂಡಲೇ ಇದು ಜಾರಿಗೆ ಬರಲಿದೆ. 1987ರ ಸಾಂಕ್ರಾಮಿಕ ರೋಗಗಳ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

English summary
The government has dismissed a media report claiming that Task Force Did not consult PM Narendra Modi over Extension Of The lockdown.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X