ಏರ್ ಇಂಡಿಯಾ ಅಧ್ಯಕ್ಷರಾಗಿ ಟಾಟಾ ಗ್ರೂಪ್ ಮುಖ್ಯಸ್ಥ ಎನ್. ಚಂದ್ರಶೇಖರನ್ ನೇಮಕ
ಮುಂಬೈ, ಮಾರ್ಚ್ 14: ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಅಧ್ಯಕ್ಷರಾಗಿ ಟಾಟಾ ಸನ್ಸ್ ಗ್ರೂಪ್‌ನ ಮುಖ್ಯಸ್ಥ ಎನ್. ಚಂದ್ರಶೇಖರನ್ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಮೊದಲು ಟರ್ಕಿಯ ಇಲ್ಕರ್ ಐಚಿ ಅವರನ್ನು ಟಾಟಾ ಗ್ರೂಪ್ ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಎಂದು ತಿಂಗಳ ಹಿಂದೆ ಘೋಷಿಸಿತ್ತು. ಆದರೆ ಆ ನೇಮಕಾತಿಯು ಭಾರತದಲ್ಲಿ ಸಾಕಷ್ಟು ವಿರೋಧವನ್ನು ಎದುರಿಸಿತು. ಬಳಿಕ ಟರ್ಕಿಯ ಇಲ್ಕರ್ ಐಸಿ ಅವರು ಟಾಟಾದ ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕರಾಗಲು ನಿರಾಕರಿಸಿದ್ದರು.
ನಟರಾಜನ್ ಚಂದ್ರಶೇಖರನ್ ಅವರು ಸದ್ಯ ಟಾಟಾ ಸನ್ಸ್‌ನ ಮುಖ್ಯಸ್ಥರಾಗಿದ್ದಾರೆ. ಹಿಡುವಳಿ ಕಂಪನಿ ಮತ್ತು 100ಕ್ಕೂ ಹೆಚ್ಚು ಟಾಟಾ ಆಪರೇಟಿಂಗ್ ಕಂಪನಿಗಳ ಪ್ರವರ್ತಕರಾಗಿದ್ದಾರೆ. ಅವರು ಅಕ್ಟೋಬರ್ 2016ರಲ್ಲಿ ಟಾಟಾ ಸನ್ಸ್ ಮಂಡಳಿಗೆ ಸೇರಿದರು. ಜನವರಿ 2017ರಲ್ಲಿ ಮುಖ್ಯಸ್ಥರಾಗಿ ನೇಮಕಗೊಂಡರು.

ಎನ್. ಚಂದ್ರಶೇಖರನ್ ಅವರು ಟಾಟಾ ಸ್ಟೀಲ್, ಟಾಟಾ ಮೋಟಾರ್ಸ್, ಟಾಟಾ ಪವರ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಸೇರಿದಂತೆ ಹಲವಾರು ಗ್ರೂಪ್ ಆಪರೇಟಿಂಗ್ ಕಂಪನಿಗಳ ಮಂಡಳಿಗಳಿಗೆ ಅಧ್ಯಕ್ಷರಾಗಿದ್ದಾರೆ. ಅವರು 2009-17 ರಿಂದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದರು.

ಅಷ್ಟೇ ಅಲ್ಲದೇ ಎನ್. ಚಂದ್ರಶೇಖರನ್ ಅವರು ಟಾಟಾ ಗ್ರೂಪ್‌ನ ಮುಖ್ಯಸ್ಥರಾದ ಮೊದಲ ಪಾರ್ಸಿಯೇತರ ಮತ್ತು ವೃತ್ತಿಪರ ಕಾರ್ಯನಿರ್ವಾಹಕರಾಗಿದ್ದರು.












Click it and Unblock the Notifications