ತೆರಿಗೆ ತಾರತಮ್ಯ: 8 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸಿದ್ದರಾಮಯ್ಯ ಪತ್ರ

ಕೇಂದ್ರ ಸರ್ಕಾರದ ಅನ್ಯಾಯದ ವಿರುದ್ಧ ಸಿಎಂ ಸಿದ್ದರಾಮಯ್ಯ ಎಲ್ಲಾ ರಾಜ್ಯಗಳನ್ನು ಒಗ್ಗೂಡಿಸಿ ಹೋರಾಡಲು ಮುಂದಾಗಿದ್ದಾರೆ. ತೆರಿಗೆ ಆದಾಯ ಹಂಚಿಕೆಯಲ್ಲಿ ಆನ್ಯಾಯವಾಗುತ್ತಿದೆ ಎಂದು ಸಿಎಂ ಆರೋಪ ಮಾಡಿದ್ದಾರೆ. ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳ ಜೊತೆಗೆ, ಕಡಿಮೆ ತೆರಿಗೆ ಪಾಲು ಪಡೆಯುತ್ತಿರುವ ಬಿಜೆಪಿ ಆಡಳಿತದ ರಾಜ್ಯಗಳನ್ನೂ ಈ ಹೋರಾಟಕ್ಕೆ ತರಲು ಸಿದ್ದರಾಮಯ್ಯ ಮುಂದಾಗಿದ್ದಾರೆ.

ಕೇಂದ್ರ ಸರ್ಕಾರದ ಅನ್ಯಾಯದ ತೆರಿಗೆ ಹಂಚಿಕೆ ಕುರಿತು ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರದ ಅನ್ಯಾಯದ ತೆರಿಗೆ ಹಂಚಿಕೆ ವಿರುದ್ಧ ಹೋರಾಡಲು ನಮ್ಮ ತೆರಿಗೆ ನಮ್ಮ ಹಕ್ಕು ಅಭಿಯಾನದಡಿ ಪತ್ರ ಬರೆದಿದ್ದಾರೆ.

Tax discrimination Siddaramaiah has written a letter inviting the Chief Ministers of 8 states

ಅತಿ ಹೆಚ್ಚು ತೆರಿಗೆ ಹಂಚಿಯೂ ಕಡಿಮೆ ಪಾಲು ಪಡೆಯುತ್ತಿರುವ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಈ ಬಗ್ಗೆ ಚರ್ಚಿಸಲು ಒಗ್ಗೂಡುವಂತೆ ತಿಳಿಸಿದ್ದಾರೆ. ಇದನ್ನು ಪ್ರತಿಯೊಂದಿಗೆ ಸಿದ್ದರಾಮಯ್ಯ ಅವರು ತಮ್ಮ 'ಎಕ್ಸ್' ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹಾಗಾದರೆ ಬೇರೆ ರಾಜ್ಯಗಳಿಗೆ ಸಿಎಂ ಬರೆದ ಪತ್ರದಲ್ಲಿ ಏನಿದೆ?

''ಕೇಂದ್ರ ಸರ್ಕಾರದ ಅನ್ಯಾಯದ ತೆರಿಗೆ ಹಂಚಿಕೆ ಕುರಿತು ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ಆರ್ಥಿಕತೆ ಮತ್ತು ಇತರ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿರುವ ಕರ್ನಾಟಕದಂತಹ ಹಲವು ರಾಜ್ಯಗಳನ್ನು ಅವುಗಳ ಸಾಧನೆಯ ಕಾರಣಕ್ಕೇ ದಂಡಿಸಲಾಗುತ್ತಿದೆ. ಇದು ಪ್ರಗತಿಪರ ರಾಜ್ಯಗಳ ಆರ್ಥಿಕ ಸ್ವಾಯತ್ತತೆಗೆ ಧಕ್ಕೆ ತರುತ್ತದೆ. ಇದರ ವಿರುದ್ಧ ಹೋರಾಡಬೇಕಿದೆ'' ಎಂದು ಸಿಎಂ ತಿಳಿಸಿದ್ದಾರೆ.

''ಬೆಳವಣಿಗೆ ಮತ್ತು ಉತ್ತಮ ತೆರಿಗೆ ಕ್ರೋಢೀಕರಣಕ್ಕಾಗಿ ಉತ್ತೇಜಕಗಳನ್ನು ರಚಿಸುವ ಅಗತ್ಯವಿದೆ. ಹಣಕಾಸಿನ ಒಕ್ಕೂಟದ ಸಮಸ್ಯೆಗಳ ಕುರಿತು ಒಟ್ಟಾಗಿ ಚರ್ಚಿಸಲು ಬೆಂಗಳೂರಿನಲ್ಲಿ ಸಭೆಯನ್ನು ಆಯೋಜಿಸಲಾಗಿದೆ. ಸಭೆಯ ದಿನಾಂಕ ಮತ್ತು ವಿವರಗಳನ್ನು ಶೀಘ್ರದಲ್ಲೇ ತಿಳಿಸಲಾಗುತ್ತದೆ. ತೆರಿಗೆ ಅನ್ಯಾಯವನ್ನು ಸರಿಪಡಿಸಿ ಎಂದು 16ನೇ ಹಣಕಾಸು ಆಯೋಗವನ್ನು ಒತ್ತಾಯಿಸಲು ನೀವೆಲ್ಲಾ ನಿಗಧಿಪಡಿಸಿದ ದಿನಾಂಕದಂದು ಸಭೆಯಲ್ಲಿ ಭಾಗಿಯಾಗಬೇಕು'' ಎಂದು ಆಹ್ವಾನಿಸಿದ್ದಾರೆ.

ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಇದೇ ಗುರುವಾರ ತಿರುವನಂತಪುರಂನಲ್ಲಿ ನಡೆಯಲಿರುವ ದಕ್ಷಿಣ ಭಾರತದ ಹಣಕಾಸು ಸಚಿವರ ಸಭೆಯಲ್ಲಿ ಭಾಗವಹಿಸಲಿದ್ದು, ಇವರು ಈ ಮೇಲಿನ ಸಂದೇಶವನ್ನು ಸಂಬಂಧಪಟ್ಟವರಿಗೆ ತಿಳಿಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+