ಎನ್ ಡಿಎ ಮೈತ್ರಿಕೂಟಕ್ಕೆ ಟಿಡಿಪಿ ಗುಡ್ ಬೈ

ವಿಜಯವಾಡ (ಆಂಧ್ರಪ್ರದೇಶ), ಮಾರ್ಚ್ 07: ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ನಿರಾಕರಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನ್ಯಾಷನಲ್ ಡೆಮಾಕ್ರಾಟಿಕ್ ಅಲೈಯನ್ಸ್ (ಎನ್ ಡಿಎ) ಮೈತ್ರಿಕೂಟದಿಂದ ಹೊರಬರಲು ನಿರ್ಧರಿಸಿರುವುದಾಗಿ ತೆಲುಗು ದೇಶಂ ಪಾರ್ಟಿ(ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಬುಧವಾರ ರಾತ್ರಿ ಸುದ್ದಿಗೋಷ್ಠಿ ನಡೆಸಿ ಘೋಷಿಸಿದ್ದಾರೆ.

ಕೇಂದ್ರದ ಬಜೆಟ್ ನಲ್ಲಿ ಆಂಧ್ರಪ್ರದೇಶಕ್ಕೆ ಯಾವುದೇ ವಿಶೇಷ ಘೋಷಣೆ ಸಿಕ್ಕಿಲ್ಲ. ವಿಶೇಷ ಸ್ಥಾನಮಾನದ ನಿರೀಕ್ಷೆಯಲ್ಲಿದ್ದೆವು, ಆದರೆ, ವಿತ್ತ ಸಚಿವ ಅರುಣ್ ಜೇಟ್ಲಿ ಅವರು ವಿಶೇಷ ಪ್ಯಾಕೇಜ್ ನೀಡಲು ಮಾತ್ರ ಸಾಧ್ಯ, ವಿಶೇಷ ಸ್ಥಾನಮಾನ ಸಾಧ್ಯವಿಲ್ಲ ಎಂದಿದ್ದಾರೆ.

TDP pulls out of NDA, Two ministers likely to resign on March 08

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಲು ಯತ್ನಿಸಿದೆ. ಆದರೆ, ಕೇಂದ್ರದ ನಾಯಕರಿಗೆ ನಮ್ಮ ಕೂಗು ಕೇಳಿಸುತ್ತಿಲ್ಲ. ನಮ್ಮ ರಾಜ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳುವುದು ಅನಿವಾರ್ಯ ಎಂದು ಎನ್ ಚಂದ್ರಬಾಬು ನಾಯ್ಡು ಹೇಳಿದರು.

ನಾಗರಿಕ ವಿಮಾನಯಾನ ಸಚಿವ ಅಶೋಕ್ ಗಜಪತಿ ರಾಜು ಹಾಗೂ ರಾಜ್ಯ ಸಚಿವ ವೈ ಎಸ್ ಚೌಧರಿ ಅವರು ನಾಳೆ(ಮಾರ್ಚ್ 08) ರಾಜೀನಾಮೆ ಸಲ್ಲಿಸಲಿದ್ದಾರೆ ಎಂದರು.

ರಾಜ್ಯದ ಜನರ ಭಾವನೆಗೆ ಕೇಂದ್ರ ಸರಕಾರ ಅವಮಾನ ಮಾಡುತ್ತಿದೆ. 'ಎಪಿ ರಿಆರ್ಗನೈಸೇಷನ್ ಆಕ್ಟ್ 2014'ರಲ್ಲಿ ನೀಡಿದ ಭರವಸೆಗಳನ್ನು ಮತ್ತು ಸಂಸತ್ತಿನಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುತ್ತಿಲ್ಲ ಎಂದು ಅವರು ಕಿಡಿಕಾರಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+