• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬದುಕಲಿ ಕಲಿಸಿ, ಮತಾಂತರದ ಅಗತ್ಯವಿಲ್ಲ ಎಂದ ಮೋಹನ್ ಭಾಗವತ್

|
Google Oneindia Kannada News

ನವದೆಹಲಿ, ನವೆಂಬರ್ 20: ಭಾರತದಲ್ಲಿ ಯಾರನ್ನೂ ಮತಾಂತರ ಮಾಡುವ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಛತ್ತೀಸ್‌ಗಢದಲ್ಲಿ ನಡೆದ ಆರ್‌ಎಸ್‌ಎಸ್ ಸರಣಿ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡಿದರು. ಭಾರತವನ್ನು ವಿಶ್ವ ಗುರುವನ್ನಾಗಿ ಮಾಡಲು ಸಮನ್ವಯದಿಂದ ಒಟ್ಟಾಗಿ ಮುನ್ನಡೆಯಬೇಕು ಎಂದು ಸಲಹೆ ನೀಡಿದರು.

"ನಾವು ಯಾರನ್ನೂ ಮತಾಂತರಗೊಳಿಸಬೇಕಾಗಿಲ್ಲ, ಅದರ ಬದಲಿಗೆ ಜನರು ಹೇಗೆ ಬದುಕಬೇಕೆಂದು ಕಲಿಸುತ್ತೇವೆ. ಇಡೀ ಜಗತ್ತಿಗೆ ಬದುಕಿನ ಪಾಠ ಕಲಿಸುವುದಕ್ಕಾಗಿಯೇ ನಾವು ಭಾರತದ ಈ ಪುಣ್ಯಭೂಮಿಯಲ್ಲಿ ಹುಟ್ಟಿದ್ದೇವೆ. ನಮ್ಮ ಪಂಥವು ಯಾರ ಆರಾಧನಾ ವ್ಯವಸ್ಥೆಯನ್ನು ಬದಲಾಯಿಸದೆ ಒಳ್ಳೆಯ ಮನುಷ್ಯರನ್ನು ಮಾಡುತ್ತದೆ" ಎಂದು ಭಾಗವತ್ ಹೇಳಿದ್ದಾರೆ.

ತಾಲಿಬಾನ್ ಬದಲಾದರೂ ಚೀನಾ-ಪಾಕಿಸ್ತಾನ ಬದಲಾಗುವುದಿಲ್ಲ: ಮೋಹನ್ ಭಾಗವತ್ ತಾಲಿಬಾನ್ ಬದಲಾದರೂ ಚೀನಾ-ಪಾಕಿಸ್ತಾನ ಬದಲಾಗುವುದಿಲ್ಲ: ಮೋಹನ್ ಭಾಗವತ್

"ಭಾರತವನ್ನು ವಿಶ್ವ ಗುರುವನ್ನಾಗಿ ಮಾಡಲು ನಾವು ಸಮನ್ವಯದಿಂದ ಒಟ್ಟಾಗಿ ಮುನ್ನಡೆಯಬೇಕಾಗಿದೆ. ಇಡೀ ಜಗತ್ತು ಒಂದು ಕುಟುಂಬ ಎಂಬ ವಿಶ್ವಾಸದ ಮೇಲೆ ನಾವು ಬದುಕಬೇಕಿದೆ," ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ.

ವಿವಾದಿತ ಕೃಷಿ ಕಾಯ್ದೆ

ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಘೋಷಿಸಿರುವುದನ್ನು ಆರ್‌ಎಸ್‌ಎಸ್-ಅಂಗಸಂಸ್ಥೆ ಭಾರತೀಯ ಕಿಸಾನ್ ಸಂಘ (ಬಿಕೆಎಸ್) ಸ್ವಾಗತಿಸಿದೆ. "ಅನಗತ್ಯ ವಿವಾದಗಳು ಮತ್ತು ಘರ್ಷಣೆಗಳನ್ನು" ತಪ್ಪಿಸಲು ಇದು ಸರಿಯಾದ ನಿರ್ಧಾರ ಎಂದು ತೋರುತ್ತದೆ," ಎಂಬುದಾಗಿ ಮೋಹನ್ ಭಾಗವತ್ ಹೇಳಿದರು.

ದೇಶದಲ್ಲಿ ಪ್ರತಿಭಟನೆ ಮುಂದುವರಿಸುವ ಧೋರಣೆಗೆ ಆಕ್ರೋಶ:

ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಘೋಷಿಸಿದ್ದಾರೆ. ಅದ್ಯಾಗ್ಯೂ, ಪ್ರತಿಭಟನೆ ಮುಂದುವರಿಸುವುದಾಗಿ ಹೇಳಿದ ರೈತ ಮುಖಂಡರ ವಿರುದ್ಧ ಭಾರತೀಯ ಕಿಸಾನ್ ಸಂಘ ವಾಗ್ದಾಳಿ ನಡೆಸಿದೆ. ತಮ್ಮ ಪ್ರತಿಭಟನೆಯನ್ನು ಮುಂದುವರಿಸುವ ರೈತ ಮುಖಂಡರ ದುರಹಂಕಾರದ ಧೋರಣೆಯಿಂದ ಸಣ್ಣ ರೈತರಿಗೆ ಪ್ರಯೋಜನವಿಲ್ಲ ಎಂದು ಹೇಳಿದ್ದಾರೆ.

ಸಂಸತ್ತಿನಲ್ಲಿ ಅಂಗೀಕಾರ ಆಗುವವರೆಗೂ ಹೋರಾಟ:

ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆಯನ್ನು ಮುನ್ನಡೆಸುತ್ತಿರುವ ರೈತ ಸಂಘಗಳ ಒಕ್ಕೂಟ ಸಂಸ್ಥೆಯಾದ ಸಂಯುಕ್ತ ಕಿಸಾನ್ ಮೋರ್ಚಾವು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಿರ್ಧಾರವನ್ನು ಸ್ವಾಗತಿಸಿದೆ. ಆದರೆ ಸಂಸತ್ತಿನ ಕಾರ್ಯವಿಧಾನಗಳ ಮೂಲಕ ಕೃಷಿ ಕಾಯ್ದೆಯನ್ನು ರದ್ದುಗೊಳಿಸುವವರೆಗೂ ಕಾಯುವುದಾಗಿ ಹೇಳಿದೆ. ಇದರ ಮಧ್ಯೆ "ಕೃಷಿ ಕಾಯ್ದೆಗಳ ವಿರುದ್ಧ ನಡೆಸುತ್ತಿರುವ ಹೋರಾಟವನ್ನು ಸದ್ಯಕ್ಕೆ ಹಿಂಪಡೆಯುವುದಿಲ್ಲ. ಸಂಸತ್ತಿನಲ್ಲಿ ಕೃಷಿ ಕಾಯ್ದೆಗಳನ್ನು ರದ್ದುಪಡಿಸುವ ದಿನಕ್ಕಾಗಿ ನಾವು ಎದುರು ನೋಡುತ್ತಿದ್ದೇವೆ. ಎಂಎಸ್‌ಪಿ ಹೊರತುಪಡಿಸಿ ರೈತರ ಇತರ ಸಮಸ್ಯೆಗಳ ಬಗ್ಗೆಯೂ ಸರ್ಕಾರ ಮಾತನಾಡಬೇಕು," ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಟ್ವೀಟ್ ಮಾಡಿದ್ದರು.

ಕೃಷಿ ಕಾಯ್ದೆ ವಾಪಸ್ ಬಗ್ಗೆ ಪ್ರಧಾನಿ ಹೇಳಿದ್ದೇನು?:

ಕೇಂದ್ರ ಸರ್ಕಾರದಿಂದ ಜಾರಿಗೆ ತರಲಾಗಿರುವ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ಮೋದಿ ಘೋಷಿಸಿದರು. ಶುಕ್ರವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, "ಎಲ್ಲಾ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ. ನಮ್ಮ ಸರ್ಕಾರವು ರೈತರ ಕಲ್ಯಾಣಕ್ಕಾಗಿ ಅದರಲ್ಲೂ ವಿಶೇಷವಾಗಿ ಸಣ್ಣ ರೈತರ ಕಲ್ಯಾಣಕ್ಕಾಗಿ , ದೇಶದ ಹಿತದೃಷ್ಟಿಯಿಂದ, ಹಳ್ಳಿಯ ಬಡವರ ಉಜ್ವಲ ಭವಿಷ್ಯಕ್ಕಾಗಿ, ಸಂಪೂರ್ಣ ಪ್ರಾಮಾಣಿಕತೆಯಿಂದ ಒಳ್ಳೆಯ ಉದ್ದೇಶದಿಂದ ಈ ಕಾನೂನನ್ನು ತಂದಿದ್ದೆವು. ಆದರೆ ಅಂತಹ ಪವಿತ್ರವಾದ, ಸಂಪೂರ್ಣ ಶುದ್ಧವಾದ ರೈತರ ಅನುಕೂಲಕ್ಕಾಗಿ ನಾವು ಪ್ರಯತ್ನಿಸಿದರೂ ಅದನ್ನು ಕೆಲವು ರೈತರಿಗೆ ವಿವರಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ನಾವು ಎಲ್ಲಾ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ," ಎಂದು ಹೇಳಿದ್ದಾರೆ.

ವಿವಾದಿತ ಕೃಷಿ ಕಾಯ್ದೆಗಳು ಯಾವುವು?

ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳು ರೈತರ ವಿರೋಧಕ್ಕೆ ಕಾರಣವಾಗಿದ್ದವು. ಇದೇ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವುದಕ್ಕೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ.

English summary
Teach how to live Everyone But 'Don't have to convert anyone': RSS chief Mohan Bhagwat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X