ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking News: ಶಿಕ್ಷಕರ ನೇಮಕಾತಿ ಹಗರಣ: ತೃಣಮೂಲ ಶಾಸಕ ಬಂಧಿಸಿದ ಇಡಿ

|
Google Oneindia Kannada News

ಕೋಲ್ಕತ್ತಾ, ಅಕ್ಟೋಬರ್‌ 11: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಶಾಸಕ ಮಾಣಿಕ್ ಭಟ್ಟಾಚಾರ್ಯ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ರಾತ್ರೋರಾತ್ರಿ ವಿಚಾರಣೆ ನಡೆಸಿ ನಂತರ ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಣ ಮಂಡಳಿಯ ಮಾಜಿ ಅಧ್ಯಕ್ಷ ಭಟ್ಟಾಚಾರ್ಯ ಅವರನ್ನು ಇಂದು ಬಂಧಿಸಲಾಗಿದೆ. ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

ಅರ್ಪಿತಾ ಮುಖರ್ಜಿ ಮಗು ದತ್ತು ಪಡೆಯಲು ಮಾಜಿ ಸಚಿವ ಪಾರ್ಥ ಚಟರ್ಜಿ ಪ್ರಮಾಣಪತ್ರಅರ್ಪಿತಾ ಮುಖರ್ಜಿ ಮಗು ದತ್ತು ಪಡೆಯಲು ಮಾಜಿ ಸಚಿವ ಪಾರ್ಥ ಚಟರ್ಜಿ ಪ್ರಮಾಣಪತ್ರ

ಶಾಸಕ ಮಾಣಿಕ್ ಭಟ್ಟಾಚಾರ್ಯ ಪಳಶಿಪಾರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣದ ಪ್ರಕರಣವನ್ನು ಇಡಿ ತನಿಖೆ ನಡೆಸುತ್ತಿದ್ದು, ಈ ಹಿಂದೆ ಭಟ್ಟಾಚಾರ್ಯರಿಗೆ ಸಮನ್ಸ್ ನೀಡಿತ್ತು. ಪ್ರಮುಖವಾಗಿ, ಪ್ರಾಥಮಿಕ ಶಿಕ್ಷಕರ ನೇಮಕಾತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಭಟ್ಟಾಚಾರ್ಯ ಅವರಿಗೆ ನೀಡಲಾಗಿದ್ದ ಮಧ್ಯಂತರ ರಕ್ಷಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 30 ರಂದು ಮುಂದಿನ ಆದೇಶದವರೆಗೆ ವಿಸ್ತರಿಸಿದೆ.

Teacher recruitment scam: Trinamool MLA arrested by ED

ಮಾಣಿಕ್ ಭಟ್ಟಾಚಾರ್ಯ ಅವರಿಗೆ ನೀಡಲಾಗಿರುವ ಮಧ್ಯಂತರ ರಕ್ಷಣೆ ಮುಂದಿನ ಆದೇಶದವರೆಗೆ ಮುಂದುವರಿಯಲಿದೆ ಎಂದು ನ್ಯಾಯಾಲಯ ಹೇಳಿತ್ತು. ತನಿಖಾ ಸಂಸ್ಥೆಯೊಂದಿಗೆ ಸಹಕರಿಸುವಂತೆ ನ್ಯಾಯಾಲಯ ಅವರಿಗೆ ಸೂಚಿಸಿತ್ತು. ಎಸ್‌ಎಸ್‌ಸಿ (ಶಾಲಾ ಸೇವಾ ಆಯೋಗ) ಹಗರಣದಲ್ಲಿ ಆಗಿನ ಪಶ್ಚಿಮ ಬಂಗಾಳದ ಕೈಗಾರಿಕಾ ಸಚಿವ ಮತ್ತು ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿ ಅವರನ್ನು ಇಡಿ ಬಂಧಿಸಿದೆ.

WBSSC ಹಗರಣ: ಪಾರ್ಥ ಚಟರ್ಜಿ, ಅರ್ಪಿತಾ ಮುಖರ್ಜಿ ಆಸ್ತಿಯೇ 103 ಕೋಟಿ!WBSSC ಹಗರಣ: ಪಾರ್ಥ ಚಟರ್ಜಿ, ಅರ್ಪಿತಾ ಮುಖರ್ಜಿ ಆಸ್ತಿಯೇ 103 ಕೋಟಿ!

Teacher recruitment scam: Trinamool MLA arrested by ED

ಮಾಜಿ ಸಚಿವ ಪಾರ್ಥ ಚಟರ್ಜಿ ಅವರನ್ನು ಬಂಧಿಸಿದ ನಂತರ ಮಾಣಿಕ್ ಭಟ್ಟಾಚಾರ್ಯ ಅವರಿಗೆ ಮೊದಲು ಇಡಿ ಸಮನ್ಸ್ ನೀಡಿತ್ತು. ಭಟ್ಟಾಚಾರ್ಯ ಅವರ ನಿವಾಸದಲ್ಲಿ ನಡೆಸಿದ ದಾಳಿಯಿಂದ ಇಡಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ನಿರ್ಣಾಯಕ ದಾಖಲೆಗಳನ್ನು ವಶಪಡಿಸಿಕೊಂಡಿದೆ. ನಿವೃತ್ತ ನ್ಯಾಯಮೂರ್ತಿ ರಂಜಿತ್ ಕುಮಾರ್ ಬಾಗ್ ನೇತೃತ್ವದ ಪ್ರಕರಣದ ಮೊದಲ ಸ್ವತಂತ್ರ ತನಿಖಾ ಸಮಿತಿ ವರದಿಯನ್ನು ಸಲ್ಲಿಸಿದೆ. ಪಶ್ಚಿಮ ಬಂಗಾಳದಲ್ಲಿ ಆಪಾದಿತ ಶಿಕ್ಷಕರ ನೇಮಕಾತಿ ಹಗರಣದ ತನಿಖೆಗಾಗಿ ಕೋಲ್ಕತ್ತಾ ಹೈಕೋರ್ಟ್ ಇದನ್ನು ರಚಿಸಿತು.

ಕೋಲ್ಕತ್ತಾ ಹೈಕೋರ್ಟ್‌ಗೆ ಸಲ್ಲಿಸಿದ ವರದಿಯಲ್ಲಿ ಅವರ ಹೆಸರನ್ನು ಉಲ್ಲೇಖಿಸಲಾಗಿದೆ. ನ್ಯಾಯಾಲಯದ ಆದೇಶದ ನಂತರ ಭಟ್ಟಾಚಾರ್ಯ ಅವರನ್ನು ಶಿಕ್ಷಣ ಮಂಡಳಿಯ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಲಾಯಿತು.

English summary
Trinamool Congress MLA Manik Bhattacharya was arrested by the Enforcement Directorate (ED) on Tuesday in connection with the West Bengal teacher recruitment scam, sources said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X