ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಾಂತ್ರಿಕ ದೋಷದಿಂದ ಮಸ್ಕತ್‌ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ವಾಪಸ್

|
Google Oneindia Kannada News

ತಿರುವನಂತಪುರಂ,ಜನವರಿ23: ತಿರುವನಂತಪುರಂನಿಂದ ಒಮನ್‌ನ ಮಸ್ಕತ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ, ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಅದರ ಆನ್‌ಬೋರ್ಡ್ ಕಂಪ್ಯೂಟರ್ ಸಿಸ್ಟಮ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನಲೆಯಲ್ಲಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಹಿಂತಿರುಗಿದೆ.

ಏರ್ ಇಂಡಿಯಾದ ನಂತರ ಇಂಡಿಗೋ ವಿಮಾನದಲ್ಲಿ ಕುಡುಕರ ಗಲಾಟೆ, ಗಗನಸಖಿಯೊಂದಿಗೆ ಜಗಳಏರ್ ಇಂಡಿಯಾದ ನಂತರ ಇಂಡಿಗೋ ವಿಮಾನದಲ್ಲಿ ಕುಡುಕರ ಗಲಾಟೆ, ಗಗನಸಖಿಯೊಂದಿಗೆ ಜಗಳ

ಐಎಕ್ಸ್ 549 ವಿಮಾನವು ಕೇರಳದ ರಾಜಧಾನಿಯಿಂದ ಇಂದು (ಸೋಮವಾರ) ಬೆಳಗ್ಗೆ 8.30 ಕ್ಕೆ ಟೇಕ್ ಆಫ್ ಆಗಿದ್ದು, ಪೈಲಟ್‌ಗಳಲ್ಲಿ ಒಬ್ಬರು ತಾಂತ್ರಿಕ ದೋಷವನ್ನು ಗಮನಿಸಿದ ನಂತರ 9.17ಕ್ಕೆ ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರಳಿದೆ.

Technical snag forces Muscat-bound Air India Express flight to return

ಇನ್ನೂ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿದ್ದ 105 ಪ್ರಯಾಣಿಕರು ಮತ್ತು ಕ್ಯಾಬಿನ್ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಕ್ತಾರರು ತಿಳಿಸಿದ್ದಾರೆ.

ವಿಮಾನಯಾನ ಸಂಸ್ಥೆಯು ಪ್ರಯಾಣಿಕರಿಗೆ ಮತ್ತೊಂದು ವಿಮಾನದ ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿದೆ ಹಾಗೂ ಎಲ್ಲಾ ಪ್ರಯಾಣಿಕರನ್ನು ಚೆನ್ನಾಗಿ ನೋಡಿಕೊಳ್ಳಲಾಗುತ್ತಿದೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಕ್ತಾರರು ತಿಳಿಸಿದ್ದಾರೆ.ಇನ್ನೂ ಈ ಹಿಂದೆ 2022 ರಲ್ಲಿ ಏರ್ ಇಂಡಿಯಾಗೆ ಸೇರಿದ ಬೋಯಿಂಗ್ ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾಗಿರುವುದು ಬೆಳಕಿಗೆ ಬಂದಿದೆ. ದುಬೈನಿಂದ ಕೊಚ್ಚಿಗೆ ಹೊರಟ್ಟಿದ್ದ ಏರ್ ಇಂಡಿಯಾದ ಬಿ787 ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ, ವಿಮಾನವನ್ನು ಮುಂಬೈನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿತ್ತು. ಇನ್ನೂ ಇಬ್ಬರು ಹಿರಿಯ ಅಧಿಕಾರಿಗಳು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೆಶನಾಲಯದ ಮೂಲಗಳು ತಿಳಿಸಿವೆ.

ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಸೇರಿದ ಹಲವು ವಿಮಾನಗಳು ಇತ್ತೀಚೆಗೆ ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿವೆ. ಆಕಾಶಲ್ಲಿರುವಾಗ ಒತಾಂತ್ರಿಕ ಸಮಸ್ಯೆಗಳು ಕಂಡು ಬಂದ ಹಿನ್ನೆಲೆ ಹತ್ತಿರದ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಗುತ್ತಿದೆ. ಇತ್ತಿಚ್ಚಿಗೆ ಈ ರೀತಿಯ ಘಟನೆಗಳು ಮರುಕಳಿಸುತ್ತಿವೆ ಎನ್ನಲಾಗಿದೆ.

English summary
An Air India Express flight from Thiruvananthapuram to Muscat, Oman returned shortly after take-off due to a technical glitch in its on-board computer system.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X