ತೆಹೆಲ್ಕಾ ತೇಜಪಾಲ್ ರೇಪಿಸ್ಟ್: ಆರೋಪಪಟ್ಟಿ ಸಲ್ಲಿಕೆ
ಪಣಜಿ, ಫೆ.17: ತೆಹೆಲ್ಕಾ ಸಂಸ್ಥೆಯ ಸಹದ್ಯೋಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ತೆಹಲ್ಕಾ ಪತ್ರಿಕೆಯ ಸ್ಥಾಪಕ, ಮಾಜಿ ಸಂಪಾದಕ ತರುಣ್ ತೇಜಪಾಲ್ ವಿರುದ್ಧ ಗೋವಾ ಪೊಲೀಸರು ಸೋಮವಾರ ಆರೋಪ ಪಟ್ಟಿ ಸಲ್ಲಿಸಿದ್ದಾರೆ.
ಗೋವಾದ ಪೊಲೀಸರು ಪಣಜಿ ಸೆಷನ್ಸ್ ಕೋರ್ಟ್ ನಲ್ಲಿ ಸೋಮವಾರ ಮಧ್ಯಾಹ್ನ ಆರೋಪ ಪಟ್ಟಿ ಸಲ್ಲಿದ್ದಾರೆ. ಆರೋಪ ಪಟ್ಟಿಯಲ್ಲಿ ಅತ್ಯಾಚಾರ ಎಸಗಿದ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಗೋವಾದ ಗ್ರ್ಯಾಂಡ್ ಹಯಾತ್ ಪಂಚತಾರ ಹೋಟೆಲೊಂದರಲ್ಲಿ ಆಯೋಜಿಸಲಾಗಿದ್ದ ತೆಹಲ್ಕಾ ಪತ್ರಿಕೆಯ ಕಾರ್ಯಕ್ರಮದ ವೇಳೆ ಕಿರಿಯ ಪತ್ರಕರ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಕಳೆದ ನವೆಂಬರ್ 30ರಂದು ತೇಜ್ಪಾಲ್‌ರನ್ನು ಗೋವಾ ಪೊಲೀಸರು ಬಂಧಿಸಿದ್ದರು.
ತೆಹೆಲ್ಕಾ ಸಂಸ್ಥೆಯ ಕಿರಿಯ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿ ಬಂಧನಕ್ಕೊಳಗಾಗಿರುವ ತೆಹೆಲ್ಕಾ ಮಾಜಿ ಸಂಪಾದಕ ತರುಣ್ ತೇಜಪಾಲ್ ಸದ್ಯಕ್ಕೆ ಜೈಲಿನಲ್ಲಿದ್ದಾರೆ. ತೇಜಪಾಲ್ ಅವರ ಪುರುಷತ್ವ ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ. ಜತೆ ಇನ್ನೆರಡು ಪ್ರಕರಣಗಳಲ್ಲಿ ಫೇಲ್ ಆಗಿದ್ದಾರೆ. ಹೌದು ತೇಜಪಾಲ್ ಮೇಲೆ ಮತ್ತೆರಡು ಪ್ರಕರಣ ದಾಖಲಾಗಿತ್ತು.

ತೇಜ್ ಪಾಲ್ ವಿರುದ್ಧ ದಾಖಲಿಸಲಾಗಿರುವ ಪ್ರಥಮ ಮಾಹಿತಿ ವರದಿಗೆ ಸೆಕ್ಷನ್ 341(ಅಕ್ರಮ ತಡೆ) ಹಾಗೂ ಸೆಕ್ಷನ್ 342(ಅಕ್ರಮ ಬಂಧನ) ಎಂಬ ಭಾರತ ದಂಡ ಸಂಹಿತೆಯ ಹೆಚ್ಚುವರಿ ಎರಡು ಪರಿಚ್ಛೇದಗಳನ್ನು ಸೇರಿಸಲಾಗಿದೆ ಎಂದು ಗೋವಾ ಪೊಲೀಸ್ ಮೂಲಗಳು ತಿಳಿಸಿವೆ. ಸಂತ್ರಸ್ತೆಯ ಹೇಳಿಕೆ, ಸಾಕ್ಷಿ ಹಾಗೂ ಪ್ರಕರಣ ನಡೆದಿದೆ ಎಂದು ಹೇಳಲಾಗಿರುವ ಹಯಾತ್ ಹೊಟೇಲ್ ನ ಸಿಸಿಟಿವಿ ವೀಡಿಯೊ ತುಣುಕುಗಳನ್ನು ಆಧಾರವಾಗಿಟ್ಟುಕೊಂಡು ಹೆಚ್ಚುವರಿ ಸೆಕ್ಷನ್ ಗಳನ್ನು ತೇಜ್ ಪಾಲ್ ವಿರುದ್ಧ ಪ್ರಯೋಗಿಸಲಾಗಿದೆ ಎಂದು ತೇಜ್ ಪಾಲ್ ರನ್ನು ತನಿಖೆ ನಡೆಸುತ್ತಿರುವ 45 ವರ್ಷದ ಸುನೀತಾ ಸಾವಂತ್ ಎಂಬ ಖಡಕ್ ಮಹಿಳಾ ಆಧಿಕಾರಿ ಹೇಳಿದ್ದರು
ತೆಹಲ್ಕಾದ ಸ್ಥಾಪಕ ಸಂಪಾದಕ ತರುಣ್ ತೇಜ್ ಪಾಲ್ ಸಹೋದ್ಯೋಗಿ ಯುವತಿಗೆ ಲೈಂಗಿಕ ದೌರ್ಜನ್ಯ ನೀಡಿರುವ ಪ್ರಕರಣದಲ್ಲಿ ಸಂಸ್ಥೆಯ ಮಾಜಿ ವ್ಯವಸ್ಥಾಪಕ ಸಂಪಾದಕಿ ಶೋಮಾ ಚೌಧರಿಯನ್ನು ಗೋವಾ ಕ್ರೈಂ ಬ್ರಾಂಚ್ ಪೊಲೀಸರು ತನಿಖೆಗೊಳಪಡಿಸಿದ್ದಾರೆ. ಸುಮಾರು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications