ತೆಲಂಗಾಣದ ಪಟಾಕಿ ಕಾರ್ಖಾನೆಗೆ ಬೆಂಕಿ: 10 ಮಂದಿ ದುರ್ಮರಣ
ತೆಲಂಗಾಣ, ಜುಲೈ 04: ತೆಲಂಗಾಣದ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ 10 ಜನ ದುರ್ಮರಣಕ್ಕೀಡಾಗಿದ್ದಾರೆ.
ತೆಲಂಗಾಣದ ಕೋಟಿ ಲಿಂಗಳ ದೇವಾಲಯದ ಬಳಿಯಲ್ಲಿರುವ ಪಟಾಕಿ ಕಾರ್ಖಾನೆಗೆ ಇದ್ದಕ್ಕಿದ್ದಂತೆ ಬೆಂಕಿ ತಗುಲಿದ ಪರಿಣಾಮ ಮೃತರಾದ 10 ಮಂದಿಯೂ ಕಾರ್ಖಾನೆಯ ಕಾರ್ಮಿಕರಿರಬಹುದು ಎಂದು ಅಂದಾಜಿಸಲಾಗಿದೆ.

ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.













Click it and Unblock the Notifications