ತೆಲಂಗಾಣದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ? ಸಮೀಕ್ಷೆಯ ಅಂಕಿಅಂಶ ಬಹಿರಂಗ

ಹೈದರಾಬಾದ್‌, ಅಕ್ಟೋಬರ್‌ 05: ಈ ವರ್ಷದ ಅಂತ್ಯದಲ್ಲಿ ನಡೆಯಲಿರುವ ತೆಲಂಗಾಣ ವಿಧಾನಸಭೆಯಲ್ಲಿ ಆಡಳಿತರೂಢ ಬಿಆರ್‌ಎಸ್ ಪಕ್ಷವನ್ನು ಕಾಂಗ್ರೆಸ್‌ ಪಕ್ಷ ಸೋಲಿಸಿ ಬಹುಮತದ ಸರ್ಕಾರ ರಚಿಸಲಿದೆ ಎಂದು ಲೋಕ್‌ಪೋಲ್‌ ಚುನಾವಣಾ ಸಮೀಕ್ಷೆ ತಿಳಿಸಿದೆ.

ಈ ಸಂಬಂಧ ಚುನಾವಣಾ ಸಮೀಕ್ಷೆಯ ಅಂಕಿಅಂಶಗಳನ್ನು ಲೋಕ್‌ಪೋಲ್‌ ಸಮೀಕ್ಷೆ ಬಹಿರಂಗಪಡಿಸಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲೂ ಇದೇ ಸಮೀಕ್ಷೆ ನಿಖರವಾದ ಅಂಕಿಅಂಶಗಳನ್ನು ನೀಡಿತ್ತು. ತೆಲಂಗಾಣದಲ್ಲಿ ಭಾರತ್‌ ರಾಷ್ಟ್ರೀಯ ಪಕ್ಷ ಅಧಿಕಾರ ನಡೆಸುತ್ತಿದೆ. ಬಿಆರ್‌ಎಸ್‌ ಪಕ್ಷದ ಮುಖ್ಯಸ್ಥ ಕೆ ಚಂದ್ರಶೇಖರ್‌ ರಾವ್‌ ಅವರು ಮುಖ್ಯಮಂತ್ರಿಯಾಗಿ ಆಡಳಿಯ ನಡೆಸುತ್ತಿದ್ದಾರೆ.

telangana-assembly-election-opinion

ಈ ವರ್ಷದ ಡಿಸೆಂಬರ್‌ನಲ್ಲಿ ತೆಲಂಗಾಣದ 119 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟುಗಳು ಬರುತ್ತವೆ ಎಂದು ಲೋಕ್‌ಪೋಲ್‌ ತಿಳಿಸಿದೆ. ಈ ಪ್ರಕಾರ ಕಾಂಗ್ರೆಸ್‌ ಪಕ್ಷಕ್ಕೆ ನಿಶ್ಚಳ ಅಧಿಕಾರ ಸಿಗುವ ಸಾಧ್ಯತೆ ಇದೆ ಎಂದು ಸಮೀಕ್ಷೆ ತಿಳಿಸಿದೆ.

ಲೋಕ್‌ಪೋಲ್‌ ಪ್ರಕಾರ, ಕಾಂಗ್ರೆಸ್‌ ಪಕ್ಷಕ್ಕೆ 61 ರಿಂದ 67 ಸ್ಥಾನಗಳನ್ನು ಗೆಲ್ಲಲಿದೆ ಎಂದು ತಿಳಿಸಿದೆ, ಅದರಂತೆ ಆಡಳಿತರೂಢ ಬಿಆರ್‌ಎಸ್‌ ಪಕ್ಷವು 45ರಿಂದ 51 ಸೀಟುಗಳನ್ನು ಪಡೆಯಲಿದೆ ಎಂದು ತಿಳಿಸಿದೆ. ಕಾಂಗ್ರೆಸ್‌ ಮಾದರಿ ಯೋಜನೆಗಳನ್ನು ಜಾರಿಗೊಳಿಸಿಯೂ ತೆಲಂಗಾಣದಲ್ಲಿ ಬಿಆರ್‌ಎಸ್‌ ಈ ಬಾರಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಸಮೀಕ್ಷೆ ತಿಳಿಸಿದೆ.

ಇದರೊಂದಿಗೆ ಅಸಾದುದ್ದೀನ್‌ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷವು 6ರಿಂದ 8 ಕ್ಷೇತ್ರಗಳಲ್ಲಿ ಸ್ಥಾನ ಗಿಟ್ಟಿಸಲಿದೆ. ಇನ್ನು ದೇಶದ ಅತಿ ದೊಡ್ಡ ರಾಜಕೀಯ ಪಕ್ಷ ಎಂದೇ ಹೇಳಿಕೊಳ್ಳುವ ಬಿಜೆಪಿ ಬರೇ 2ರಿಂದ 3 ಸ್ಥಾನಗಳಲ್ಲಿ ಪಡೆಯಲಿದೆ. ಉಳಿದಂತೆ ಇತರೆ 1 ಸ್ಥಾನಗಳು ಅಂದರೆ ಪಕ್ಷೇತರರು ಗೆಲ್ಲಬಹುದು ಎಂದು ಲೋಕ್‌ಪೋಲ್‌ ಸಮೀಕ್ಷೆ ತಿಳಿಸಿದೆ.

telangana-assembly-election-opinion

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಲೋಕ್‌ಪೋಲ್‌ ಸಂಸ್ಥೆ ಆಗಸ್ಟ್ 10 ರಿಂದ ಸೆಪ್ಟೆಂಬರ್ 30 ರವರೆಗೆ ರಾಜ್ಯಾದ್ಯಂತ ಸಂಪೂರ್ಣ ಚುನಾವಣಾ ಸಮೀಕ್ಷೆಯನ್ನು ನಡೆಸಿದ ನಂತರ ತೆಲಂಗಾಣ ಚುನಾವಣಾ ಪೂರ್ವ ಸಮೀಕ್ಷೆಯ ಫಲಿತಾಂಶಗಳನ್ನು ಪ್ರಸ್ತುತಪಡಿಸಲು ನಾವು ಸಂತೋಷಪಡುತ್ತೇವೆ ಎಂದು ಟ್ವೀಟ್‌ ಮಾಡಿದ್ದಾರೆ.

ಈ ಸಮೀಕ್ಷೆಗೆ ಬರೋಬ್ಬರಿ 60,000 ಚುನಾವಣಾ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅದು ತಿಳಿಸಿದೆ. ಆಗಸ್ಟ್ 10 ರಿಂದ ಸೆಪ್ಟೆಂಬರ್ 30 ರವರೆಗೆ ರಾಜ್ಯಾದ್ಯಂತ ನಡೆಸಿದ ಸಮೀಕ್ಷೆಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಸುಮಾರು 500ಕ್ಕೂ ಹೆಚ್ಚು ಸ್ಯಾಂಪಲ್‌ಗಳನ್ನು ಬಳಸಲಾಗಿದೆ ಎಂದು ತಿಳಿಸಿದೆ.

ಭೌಗೋಳಿಕ ವಿಭಿನ್ನತೆ ಹೊಂದಿರುವ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 30 ಬೂತ್‌ಗಳಲ್ಲಿ ಅನಿರ್ದಿಷ್ಟವಾಗಿ ಆಯ್ಕೆ ಮಾಡಿ ಅಭಿಪ್ರಾಯಗಳನ್ನು ಪಡೆಯಲಾಗಿದೆ ಎಂದು ತಿಳಿಸಲಾಗಿದೆ. ಈ ಬಾರಿಯ ವಿಧಾನಸಭಾ ಚುನಾವಣಾ ಅಖಾಡ ಆರಂಭವಾದಾಗ ಹಲವಾರು ಪ್ರಮುಖ ಬಿಆರ್‌ಎಸ್‌ನ ನಾಯಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು. ಇವೆಲ್ಲರು ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ್ದರು ಎಂಬುದು ವಿಶೇಷ.

telangana-assembly-election-opinion

ಕಾಂಗ್ರೆಸ್‌ನ ತೆಲಂಗಾಣ ರಾಜ್ಯಾಧ್ಯಕ್ಷ ರೇವಂತ್‌ ರೆಡ್ಡಿ ಅವರು ಡಿಕೆ ಶಿವಕುಮಾರ್‌ ಅವರೊಂದಿಗೆ ಉತ್ತಮ ಸಂಪರ್ಕವನ್ನಿಟ್ಟುಕೊಂಡಿದ್ದಾರೆ. ಅವರಿಗೆ ಡಿಕೆಶಿ ಮಾರ್ಗದರ್ಶನ ಸಿಕ್ಕಿದೆ ಎಂದು ಹೇಳಲಾಗುತ್ತಿದೆ. ಆಂಧ್ರದಿಂದ ಬೇರ್ಪಟ್ಟು ಹೊಸ ರಾಜ್ಯವಾಗಿ ಉದಯವಾದ ನಂತರ ತೆಲಂಗಾಣದಲ್ಲಿ ಎರಡು ಬಾರಿ ಚುನಾವಣೆ ನಡೆದಿದೆ. ಎರಡೂ ಬಾರಿಯೂ ಕೆ ಚಂದ್ರಶೇಖರ್‌ ರಾವ್‌ ನೇತೃತ್ವದ ಬಿಆರ್‌ಎಸ್‌ ಪಕ್ಷವು ಗೆಲುವು ಸಾಧಿಸಿ ಅಧಿಕಾರದ ಗದ್ದುಗೆ ಏರಿದೆ. ಆದರೆ, ಈ ಬಾರಿ ಚುನಾವಣೆಯು ಕೆಸಿಆರ್‌ಗೆ ಸುಲಭದ ಹಾದಿಯಾಗಿ ಉಳಿದಿಲ್ಲವೆಂಬ ಮಾತುಗಳು ಕೇಳಿಬಂದಿದೆ.

ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳ ಮೂಲಕ ಅಭೂತಪೂರ್ವ ಗೆಲುವು ಸಾಧಿಸಿರುವ ಕಾಂಗ್ರೆಸ್‌ ತೆಲಂಗಾಣದಲ್ಲೂ ಇದೇ ಪ್ರಯೋಗವನ್ನು ಮುಂದುವರಿಸಿದೆ. ರೈತರು, ಮಹಿಳೆಯರು ಹಾಗೂ ಯುವಕರನ್ನು ಗುರಿಯಾಗಿಸಿ ಕಾಂಗ್ರೆಸ್‌ ಪಕ್ಷವು ಗ್ಯಾರಂಟಿಗಳನ್ನು ಘೋಷಿಸಿದೆ. ತೆಲಂಗಾಣ ಚುನಾವಣೆಯಲ್ಲಿಯೂ ಗ್ಯಾರಂಟಿಗಳು ಕಾಂಗ್ರೆಸ್‌ಗೆ ಬೆಂಬಲವಾಗಿ ನಿಲ್ಲಲಿದೆ ಎಂಬ ಮಾತುಗಳನ್ನು ರಾಜಕೀಯ ತಜ್ಞರು ಹೇಳುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+