Telangana Election opinion poll 2023: ತೆಲಂಗಾಣ ಚುನಾವಣೆಯ ನಿಖರ ಸಮೀಕ್ಷೆಯಲ್ಲಿ ಕೆಸಿಆರ್‌ಗೆ ಆಘಾತ- ಯಾರಿಗೆ ಜಯ? ತಿಳಿಯಿರಿ

Telangana Election opinion poll 2023: ಕುತೂಹಲ ಮೂಡಿಸಿರುವ ತೆಲಂಗಾಣ ವಿಧಾನಸಭೆ ಚುನಾವಣೆ ದಿನಾಂಕಗಳು ಪ್ರಕಟಗೊಂಡಿವೆ. 119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ನವೆಂಬರ್ 30, 2023 ರಂದು ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಸೋಮವಾರ ತಿಳಿಸಿದೆ.

ತೆಲಂಗಾಣದಲ್ಲಿರುವ ಮತದಾರರ ಸಂಖ್ಯೆ 3 ಕೋಟಿಗೂ ಅಧಿಕವಾಗಿದೆ. ರಾಜ್ಯದಲ್ಲಿ 17 ಲಕ್ಷಕ್ಕೂ ಅಧಿಕ ಮತದಾರರು ಹೊಸದಾಗಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಾರೆ ಎಂದು ಆಯೋಗ ಹೇಳಿದೆ.

ತೆಲಂಗಾಣ ಚುನಾವಣೆ ಒಂದೇ ಹಂತದಲ್ಲಿ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

telangana-assembly-election-opinion-poll-2023

ತೆಲಂಗಾಣ ವಿಧಾನಸಭಾ ಚುನಾವಣೆಯ ಅಧಿಸೂಚನೆಯನ್ನು ನವೆಂಬರ್ 3 ರಂದು ಪ್ರಕಟಿಸಲಾಗುವುದು. ಆದರೆ, ಅಭ್ಯರ್ಥಿಯ ನಾಮಪತ್ರ ಸಲ್ಲಿಸಲು ನವೆಂಬರ್ 10 ಕೊನೆಯ ದಿನಾಂಕವಾಗಿರುತ್ತದೆ. ಮೇಲಾಗಿ, ಉಮೇದುವಾರಿಕೆಯನ್ನು ಹಿಂಪಡೆಯಲು ನವೆಂಬರ್ 15 ಕೊನೆಯ ದಿನಾಂಕವಾಗಿರುತ್ತದೆ. ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ಮಿಜೋರಾಂ ಮತ್ತು ತೆಲಂಗಾಣದಲ್ಲಿ ನವೆಂಬರ್ 7 ರಿಂದ ನವೆಂಬರ್ 30 ರವರೆಗೆ ವಿಧಾನಸಭಾ ಚುನಾವಣೆಗಳು ನಡೆಯಲಿವೆ ಎಂದು ಚುನಾವಣಾ ಆಯೋಗವು ತಿಳಿಸಿದೆ.

ತೆಲಂಗಾಣದಲ್ಲಿ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್), ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ನಡುವೆ ಸ್ಪರ್ಧೆ ಇದೆ. 2018 ರಲ್ಲಿ ಬಿಆರ್‌ಎಸ್‌ 88 ಸ್ಥಾನಗಳನ್ನು ಗೆದ್ದಿತ್ತು. ಈ ಮೂಲಕ ಬಿಆರ್‌ಎಸ್‌ ಶೇ 47.4 ರಷ್ಟು ಮತಗಳನ್ನು ಗಳಿಸಿತ್ತು. ಕಾಂಗ್ರೆಸ್ ಶೇ 28.7 ರಷ್ಟು ಮತಗಳಿಸುವ ಮೂಲಕ 19 ಸ್ಥಾನಗಳನ್ನು ಗೆದ್ದುಕೊಂಡಿತ್ತು.

telangana-assembly-election-opinion-poll-2023

ಈಗ ತೆಲಂಗಾಣದ ಪರಿಸ್ಥಿತಿ ಬದಲಾಗಿರುವ ಮುನ್ಸೂಚನೆಯನ್ನು ಸಮೀಕ್ಷೆಗಳು ನೀಡಿವೆ. ಕರ್ನಾಟಕದ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭೂತಪೂರ್ವ ಯಶಸ್ಸು ಗಳಿಸಿದ ನಂತರ ತೆಲಂಗಾಣದಲ್ಲಿಯೂ ಬದಲಾವಣೆ ಪರ್ವ ಆರಂಭವಾಗಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ರೇವಂತ್‌ ರೆಡ್ಡಿ ನೇತೃತ್ವದ ಕಾಂಗ್ರೆಸ್‌ ಪಕ್ಷಕ್ಕೆ ಬಿಆರ್‌ಎಸ್‌ನಿಂದ ಹಲವು ಪ್ರಮುಖ ನಾಯಕರು ಸೇರ್ಪಡೆಗೊಂಡಿದ್ದಾರೆ. ಕರ್ನಾಟಕದಂತೆಯೇ ಕಾಂಗ್ರೆಸ್‌ ಪಕ್ಷವು ತೆಲಂಗಾಣದಲ್ಲಿಯೂ ಗ್ಯಾರಂಟಿಗಳನ್ನು ಘೋಷಿಸಿದೆ. ಮಹಿಳೆಯರು, ಯುವಕರನ್ನು ಗುರಿಯಾಗಿಸಿ ಹಲವು ಯೋಜನೆಗಳ ಭರವಸೆಯನ್ನು ಕಾಂಗ್ರೆಸ್‌ ನೀಡಿದೆ. ಹೊಸ ರಾಜ್ಯದ ಉದಯಕ್ಕೆ ಕಾರಣವಾಗಿರುವ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಪರ ಅನುಕಂಪದ ಅಲೆಯೂ ತೆಲಂಗಾಣದಲ್ಲಿ ಕಂಡುಬರುತ್ತಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಸತತ ಎರಡು ಅವಧಿಗೆ ಮುಖ್ಯಮಂತ್ರಿಯಾಗಿರುವ ಚಂದ್ರಶೇಖರ್‌ ರಾವ್‌ ವಿರುದ್ಧ ಆಡಳಿತ ವಿರೋಧಿ ಅಲೆ ಇರುವುದು ಕಂಡುಬಂದಿದೆ. ಸ್ವಜನ ಪಕ್ಷಪಾತ, ಭ್ರಷ್ಟಾಚಾರದ ಆರೋಪ, ಕುಟುಂಬ ರಾಜಕಾರಣದ ಆರೋಪಗಳನ್ನು ಕೆಸಿಆರ್‌ ಎದುರಿಸುತ್ತಿದ್ದಾರೆ.

telangana-assembly-election-opinion-poll-2023

ಈಗಾಗಲೇ ಬಿಆರ್‌ಎಸ್‌ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಉಳಿದ ಪಕ್ಷಗಳು ಇನ್ನಷ್ಟೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಬೇಕಿದೆ.

ಸ್ಮಾಲ್‌ಬಾಕ್ಸ್‌ ಇಂಡಿಯಾ ಸಮೀಕ್ಷೆ ಹೇಳುವುದೇನು?

ಕರ್ನಾಟಕ ಚುನಾವಣೆ ಕುರಿತು ನಿಖರ ಸಮೀಕ್ಷೆ ನೀಡಿದ್ದ ಸ್ಮಾಲ್‌ಬಾಕ್ಸ್‌ ಇಂಡಿಯಾ ಸಂಸ್ಥೆಯು ತೆಲಂಗಾಣ ವಿಧಾನಸಭೆ ಚುನಾವಣೆಯ ಸಮೀಕ್ಷೆಯನ್ನೂ ನೀಡಿದೆ.

ತೆಲಂಗಾಣದಲ್ಲಿ ಒಟ್ಟು 119 ಕ್ಷೇತ್ರಗಳಿವೆ. ಅದರಲ್ಲಿ ಕಾಂಗ್ರೆಸ್‌ಗೆ 61 ರಿಂದ 63 ಸ್ಥಾನಗಳು ಬರಲಿವೆ ಎಂದು ಸಮೀಕ್ಷೆ ಹೇಳಿದೆ. ಒಂದು ವೇಳೆ, ಇದು ನಿಜವಾದರೆ, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಗಲಿದೆ.

ಆಡಳಿತರೂಢ ಬಿಆರ್‌ಎಸ್‌ ಪಕ್ಷಕ್ಕೆ 38 ರಿಂದ 42 ಸ್ಥಾನಗಳು ದೊರೆಯಲಿವೆ. ಬಿಜೆಪಿ ಕೇವಲ 2ರಿಂದ 4 ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ.

ಅಸಾದುದ್ದೀನ್‌ ಓವೈಸಿ ನೇತೃತ್ವದ ಎಐಎಂಐಎಂ 5 ರಿಂದ 6 ಸ್ಥಾನಗಳಲ್ಲಿ ಜಯಗಳಿಸಲಿದೆ. 2 ರಿಂದ 3 ಸ್ಥಾನಗಳನ್ನು ಪಕ್ಷೇತರರು ಗೆಲ್ಲಲಿದ್ದಾರೆ ಎಂದು ಸ್ಮಾಲ್‌ಬಾಕ್ಸ್‌ ಇಂಡಿಯಾ ಸಮೀಕ್ಷೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+